AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಕಾರ್ಯಕರ್ತರಿಗಾಗಿ ಸಹಾಯವಾಣಿ ತೆರೆದ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಇಲ್ಲಿದೆ ನೋಡಿ ನಂಬರ್

ಹಿಂದೂಪರ ಕಾರ್ಯಕರ್ತರಿಗಾಗಿ ಸಹಾಯವಾಣಿ ಓಪನ್​ ಮಾಡಿ ಶ್ರೀ ರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಚಾಲನೆ ನೀಡಿದ್ದಾರೆ.

ಹಿಂದೂ ಕಾರ್ಯಕರ್ತರಿಗಾಗಿ ಸಹಾಯವಾಣಿ ತೆರೆದ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಇಲ್ಲಿದೆ ನೋಡಿ ನಂಬರ್
ಪ್ರಮೋದ್​ ಮುತಾಲಿಕ್​
ಕಿರಣ್ ಹನುಮಂತ್​ ಮಾದಾರ್
|

Updated on:May 23, 2023 | 12:03 PM

Share

ಬೆಂಗಳೂರು: ಹಿಂದೂಪರ ಕಾರ್ಯಕರ್ತರಿಗಾಗಿ ಸಹಾಯವಾಣಿ ಓಪನ್​ ಮಾಡಿ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಹಿಂದೂಪರ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನ ಖಂಡಿಸಿ ಮತ್ತು ಅವರ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲು ರಾಜ್ಯ ಶ್ರೀರಾಮಸೇನೆ ಸಂಘಟನೆಯ ಪ್ರಮುಖರ ಸಂಪರ್ಕಕ್ಕಾಗಿ ಅಧಿಕೃತ ನಂಬರನ್ನು ಬಿಡುಗಡೆ ಮಾಡಲಾಗಿದೆ. ಹಿಂದೂಪರ ಕಾರ್ಯಕರ್ತರು ಈ ನಂಬರ್ ಗೆ ಕರೆ ಮಾಡಿ 9945288819 ಮಾಹಿತಿ ನೀಡಬಹುದು. ವರ್ಷದ 365 ದಿನವು, ದಿನದ 24 ಗಂಟೆ ಈ ನಂಬರ್​ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದಿದ್ದಾರೆ.

ಇನ್ನು ಇತ್ತಿಚೆಗಷ್ಟೇ ಕಾರ್ಕಳ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲುಂಡಿದ್ದ ಪ್ರಮೋದ್​ ಮುತಾಲಿಕ್

ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್​ ಅವರ ವಿರುದ್ಧ ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಕಣಕ್ಕೀಳಿದಿದ್ದರು. ಈ ವೇಳೆ ಗುರುವಿನ ವಿರುದ್ಧ ಸುನಿಲ್​ ಕುಮಾರ್ ತುಟಿ ಪಿಟಿಕ್ ಎಂದಿರಲಿಲ್ಲ. ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ ಫಲಿತಾಂಶದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ ಮತ್ತು ಬಿಜೆಪಿಗೆ ಬಹಳ ಪೈಪೋಟಿ ನಡೆದಿತ್ತು. ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿದ್ದು, ಈ ಬಾರಿ ಸುನಿಲ್ ಕುಮಾರ್​​ಗೆ ಕಾಂಗ್ರೆಸ್​​ ಪೈಪೋಟಿ ನೀಡಿತ್ತು. ಅವರು ಬಿಜೆಪಿಯಿಂದ ಗೆಲುವು ಸಾಧಿಸಿದ್ದರು. ಇನ್ನೂ ಸುನಿಲ್​​ ಕುಮಾರ್ ಅವರಿಗೆ ಪ್ರಬಲ ಪ್ರತಿಸ್ಪರ್ಧಿಯಾಗಿದ್ದು ಪ್ರಮೋದ್ ಮುತಾಲಿಕ್​​. ಶಿಷ್ಯನ ವಿರುದ್ಧವೇ ಹಿಂದೂ ಫೈರ್​ ಬ್ರಾಂಡ್​​ ಎನ್ನಿಸಿಕೊಂಡಿರುವ ಪ್ರಮೋದ್ ಮುತಾಲಿಕ್ ಅವರು ಕಾರ್ಕಳದಲ್ಲಿ ಸ್ಪರ್ಧಿಸಿದ್ದರು.

ಇದನ್ನೂ ಓದಿ: ಹಿಂದೂಗಳ ಜಾತ್ರೆಯಲ್ಲಿ ಮುಸ್ಲಿಮರಿಂದ ಆರೇಂಜ್ ಜ್ಯೂಸ್ ವಿತರಣೆ; ವಿಡಿಯೋ ವೈರಲ್

ಬಿಜೆಪಿ, ಹಿಂದುತ್ವ ಎಂದು ಓಡಾಡಿದ ಪ್ರಮೋದ್ ಮುತಾಲಿಕ್ ಅವರು ಬಿಜೆಪಿಯಲ್ಲಿ ರಕ್ಷಣೆ ಇಲ್ಲ, ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಯಾವುದೇ ಕಾನೂನು ಕ್ರಮವಿಲ್ಲ ಎಂದು ಪ್ರಮೋದ್ ಮುತಾಲಿಕ್ ಅವರು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಹೀಗಾಗಿ ಸುನಿಲ್​​ ಕುಮಾರ್​ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುವುದು ತುಂಬಾ ಕಷ್ಟ ಎಂಬ ಮಾತುಗಳು ಇತ್ತು. ಆದರೆ ಈ ಬಾರಿ ಮತ್ತೆ ಗೆಲುವು ಸಾಧಿಸಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Tue, 23 May 23