ಅಪಘಾತದಲ್ಲಿ ಮೃತಪಟ್ಟ KSRTC ಚಾಲಕನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಚೆಕ್ ವಿತರಿಸಿದ ಶ್ರೀರಾಮುಲು

| Updated By: ಗಂಗಾಧರ​ ಬ. ಸಾಬೋಜಿ

Updated on: Dec 31, 2022 | 2:56 PM

ಅಪಘಾತದಲ್ಲಿ ಮೃತಪಟ್ಟ KSRTC ಚಾಲಕನ ಕುಟುಂಬಕ್ಕೆ ಸಚಿವ ಬಿ. ಶ್ರೀರಾಮುಲು ನೆರವು ನೀಡಿದ್ದು, 1 ಕೋಟಿ ರೂ. ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ KSRTC ಚಾಲಕನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಚೆಕ್ ವಿತರಿಸಿದ ಶ್ರೀರಾಮುಲು
ಸಚಿವ ಶ್ರೀರಾಮುಲು (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ KSRTC ಚಾಲಕನ ಕುಟುಂಬಕ್ಕೆ ಸಚಿವ ಬಿ. ಶ್ರೀರಾಮುಲು (B.Sriramulu) ನೆರವು ನೀಡಿದ್ದು, 1 ಕೋಟಿ ರೂ. ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ. ಡಿಪೋದ ಚಾಲಕ ಕಂ ನಿರ್ವಾಹಕರಾಗಿದ್ದ J.S​​.ಉಮೇಶ್ ಇತ್ತೀಚೆಗೆ ಅಪಘಾತದಲ್ಲಿ ಮೃತ್ತಪಟ್ಟಿದ್ದರು. ಇನ್ಶೂರೆನ್ಸ್ ಕೋಟಾ ಮೂಲಕ ಒಂದು ಕೋಟಿ ರೂ. ಮತ್ತು ಕೆಎಸ್ಆರ್​ಟಿಸಿ ನಿಗಮದಿಂದ ಪ್ರತ್ಯೇಕವಾಗಿ 13 ಲಕ್ಷ ರೂ. ಪರಿಹಾರವನ್ನು ಶಾಂತಿನಗರದ KSRTC ಕೇಂದ್ರ ಕಚೇರಿಯಲ್ಲಿ ಉಮೇಶ್ ಕುಟುಂಬವನ್ನ ಕರೆಸಿ ಚೆಕ್ ವಿತರಣೆ ಮಾಡಲಾಗಿದೆ. ಅಲ್ಲಿಗೆ ಮಾತಿಗೆ ತಕ್ಕಂತೆ ಚಿತ್ರದುರ್ಗ ಕೆಎಸ್​​ಆರ್​ಟಿಸಿ ನಿಗಮ ನಡೆದುಕೊಂಡಿದೆ.

ಇದನ್ನೂ ಓದಿ: ಕುಚುಕು ಗೆಳೆಯ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಬಗ್ಗೆ ಮೊದಲ ಪ್ರತಿಕ್ರಿಯೆಯಲ್ಲೇ ಅಚ್ಚರಿ ಮಾತುಗಳಾನ್ನಾಡಿದ ಶ್ರೀರಾಮುಲು!

KSRTC EV ಪವರ್ ಪ್ಲಸ್ ಬಸ್​​​ಗೆ ಹಸಿರು ನಿಶಾನೆ ತೋರಿದ ಸಚಿವ ಶ್ರೀರಾಮುಲು

ಎಲೆಕ್ಟ್ರಿಕ್ ಬಸ್​​ (Electric Bus)ಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಹಸಿರು ನಿಶಾನೆ ತೋರಿದ್ದು, ಇಂದಿನಿಂದಲೇ ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ಆರಂಭಿಸಲಿದೆ. MEIL ಹಾಗೂ KSRTC ಜಂಟಿಯಾಗಿ ರಸ್ತೆಗೆ ಇಳಿಯುತ್ತಿರುವ ಈ ಹೊಸ ಬಸ್‌ಗೆ EV ಪವರ್ ಪ್ಲಸ್ ಎಂದು ಹೆಸರಿಡಲಾಗಿದೆ.​ KSRTC EV ಪವರ್ ಪ್ಲಸ್ ಹಲವು ವಿಶೇಷತೆಗಳನ್ನು ಹೊಂದಿದ್ದು, ಅವುಗಳು ಈ ಕೆಳಗಿನಂತಿವೆ.

  • ಎರಡೂವರೆ ತಾಸು ಚಾರ್ಜ್ ಮಾಡಿದರೆ 300 km ಕ್ರಮಿಸುವಷ್ಟು ಸಾಮರ್ಥ್ಯ ಈ ಬಸ್ ಹೊಂದಿದೆ
  • ಬಸ್ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆ
  • ನೂತನ ತಂತ್ರಜ್ಞಾನವಾದ ರಿ ಜನರೇಷನ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ
  • ಸಂಚರಿಸುವ ಹೊತ್ತಲ್ಲೇ ಅರ್ಧದಷ್ಟು ಬ್ಯಾಟರಿ ರಿ ಚಾರ್ಜ್ ಆಗುವ ರಿ ಜನರೇಷನ್ ಆಗುವ ಸಿಸ್ಟಮ್ ಈ ಬಸ್​​ನಲ್ಲಿ ಇದೆ
  • ಬಸ್ ಒಳಗೆ ಪ್ರಯಾಣಿಕರ ಅನುಕೂಲಕ್ಕೆ ಮೊಬೈಲ್ ಚಾರ್ಜಿಂಗ್ ಸ್ಪಾಟ್ಸ್ ಇದೆ
  • ಮನರಂಜನೆಗಾಗಿ ಎರಡು ಟಿವಿ ಅಳವಡಿಕೆ ಮಾಡಲಾಗಿದೆ

ಇದನ್ನೂ ಓದಿ: ಸ್ನೇಹವೋ.. ಅಧಿಕಾರವೋ.. ಆಪ್ತ ಸ್ನೇಹಿತ‌ನ ರೀ ಎಂಟ್ರೀ, ಇಕ್ಕಟ್ಟಿಗೆ ಸಿಲುಕಿದ ಸಚಿವ ಶ್ರೀರಾಮುಲು…!

ಇದಲ್ಲದೆ, ಈ ಪರಿಸರ ಸ್ನೇಹಿ ಬಸ್ ಸಂಪೂರ್ಣವಾಗಿ ಸೆನ್ಸಾರ್ ಹಿಡಿತದಲ್ಲಿ ಇರಲಿದ್ದು, ಒಟ್ಟಾರೆ ಬಸ್​​ನಲ್ಲಿ 43 + 2 ಸೀಟಿಂಗ್ ಕೆಪಾಸಿಟಿ ಇದೆ. ಫ್ರಂಟ್ ಲಾಗ್ ಮತ್ತು ಬ್ಯಾಕ್ ಲಾಗ್ ಕ್ಯಾಮೆರಾ ವ್ಯವಸ್ಥೆ ಇರಲಿದೆ. ಡ್ರೈವರ್ ಎಂಡ್ ಸಂಪೂರ್ಣವಾಗಿ ಡಿಜಿಟಲೈಸ್ಡ್ ಸಿಸ್ಟಮ್ ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.