SSLC Exam 2021; ರಾಜ್ಯಾದ್ಯಂತ ಇಂದು ಎಸ್ಎಸ್ಎಲ್ಸಿ ಭಾಷಾ ವಿಷಯಗಳಿಗೆ ಪರೀಕ್ಷೆ
ರಾಜ್ಯಾದ್ಯಂತ ಇಂದು ಎಸ್ಎಸ್ಎಲ್ಸಿ (SSLC) ಭಾಷಾ ವಿಷಯಗಳಿಗೆ ಪರೀಕ್ಷೆ ಶುರುವಾಗಲಿದೆ. ಮೂರು ವಿಷಯಗಳಿಗೆ 120 ಅಂಕಗಳಿಗೆ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದೆ.
ಬೆಂಗಳೂರು: ರಾಜ್ಯಾದ್ಯಂತ ಇಂದು ಎಸ್ಎಸ್ಎಲ್ಸಿ (SSLC) ಭಾಷಾ ವಿಷಯಗಳಿಗೆ ಪರೀಕ್ಷೆ ಶುರುವಾಗಲಿದೆ. ಮೂರು ವಿಷಯಗಳಿಗೆ 120 ಅಂಕಗಳಿಗೆ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದೆ. 4,885 ಕೇಂದ್ರಗಳಲ್ಲಿ ಸುಮಾರು 8,76,581 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಆರು ದಿನದ ಬದಲಿಗೆ ಕೇವಲ ಎರಡೇ ದಿನದಲ್ಲಿ ಪರೀಕ್ಷೆಗಳನ್ನು ಮುಗಿಸಲಾಗುತ್ತಿದೆ. ಈಗಾಗಲೇ ಮೊದಲ ದಿನದ ಕೋರ್ ವಿಷಯಗಳ ಪರೀಕ್ಷೆಯು ಯಶಸ್ವಿಯಾಗಿ ಮುಗಿದಿದೆ. ಇಂದು ಎಸ್ಎಸ್ಎಲ್ಸಿಯ ಕೊನೆಯ ದಿನದ ಪರೀಕ್ಷೆ ನಡೆಯಲಿದೆ. ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ. ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ. ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್ ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎನ್ಎಸ್ಕ್ಯೂಎಫ್ : ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯುಟಿ ಅಂಡ್ ವೆಲ್ ನೆಸ್.
ಇನ್ನು ಪ್ರಥಮ ಭಾಷೆ ಬರೆಯಲು 8,19,694 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಹೊಸಬರು 7,83,881. ಖಾಸಗಿ ಅಭ್ಯರ್ಥಿಗಳು 21,803. 14,010 ಪುನರಾವರ್ತಿತ ವಿದ್ಯಾರ್ಥಿಗಳು. ದ್ವಿತೀಯ ಭಾಷೆ ಬರೆಯಲು 8,27,988 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಹೊಸಬರು 7,83,881, ಖಾಸಗಿ ಅಭ್ಯರ್ಥಿಗಳು 21,803. 22,304 ಪುನರಾವರ್ತಿತ ವಿದ್ಯಾರ್ಥಿಗಳು. ಹಾಘೂ ತೃತೀಯ ಭಾಷೆ ಬರೆಯಲು 8,17,640 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಹೊಸಬರು 7,83,881, ಖಾಸಗಿ ಅಭ್ಯರ್ಥಿಗಳು 21,803. 11,956 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನ ಬರೆಯಲಿದ್ದಾರೆ.
ಒಂದು ಪರೀಕ್ಷಾ ಕೊಠಡಿಯಲ್ಲಿ 12 ಮಕ್ಕಳಿಗೆ ಅವಕಾಶ ನೀಡಲಾಗಿದೆ. ಕೆಮ್ಮು, ನೆಗಡಿ, ಜ್ವರ ಇರುವವರಿಗೆ ವಿಶೇಷ ಕೊಠಡಿ ನಿಯೋಜಿಸಲಾಗಿದೆ. ಪರೀಕ್ಷೆಗೆ 8,76,581 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದು ಈ ಪೈಕಿ 4,72,643 ಬಾಲಕರು. 403938 ಬಾಲಕಿಯರು ಇದ್ದಾರೆ. ಪರೀಕ್ಷೆಗೆ ನೋಂದಾಯಿಸಿರುವ ಒಟ್ಟು ಶಾಲೆಗಳ ಸಂಖ್ಯೆ-14,927. ರಾಜ್ಯಾದ್ಯಂತ 73066 ಪರೀಕ್ಷಾ ಕೊಠಡಿಗಳು. ಮುಖ್ಯಅಧೀಕ್ಷಕರು-4884, ಪ್ರಶ್ನೆಪತ್ರಿಕೆ ಅಭಿರಕ್ಷಕರು-4884, ಕೊಠಡಿ ಮೇಲ್ವಿಚಾರಕರು-80389, ಸ್ಥಾನಿಕ ಜಾಗೃತ ದಳದವರು-4884 ನೇಮಿಸಲಾಗಿದೆ.
ಇದನ್ನೂ ಓದಿ: SSLC Exam 2021: ಎಸ್ಎಸ್ಎಲ್ಸಿ ಪರೀಕ್ಷೆ: ಏನಿತ್ತು ವಿಶೇಷ? ದೋಣಿಯಲ್ಲೂ ಬಂದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು