ಇಂದಿನಿಂದ ಕರ್ನಾಟಕದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ ಆರಂಭ; ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿ

| Updated By: sandhya thejappa

Updated on: Mar 28, 2022 | 9:44 AM

ಮನೆಯಲ್ಲೂ ನಮ್ಮ ಪೋಷಕರು ಹೇಳಿ ಕಳುಹಿಸಿದ್ದಾರೆ. ಹಿಜಾಬ್ಗೆ ಅವಕಾಶ ನೀಡಿಲ್ಲ ಅಂದರೆ ತೆಗೆದು ಪರೀಕ್ಷೆ ಬರೆಯಲು ಸೂಚಿಸಿದ್ದಾರೆ. ಅದರಂತೆ ಪರೀಕ್ಷೆ ಬರೆಯುತ್ತೇವೆ ಅಂತ ಶಿವಾಜಿನಗರದ ಬಳಿಯ ಸರ್ಕಾರಿ ವಿಕೆಓ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿ ಹೇಳಿದ್ದಾಳೆ.

ಇಂದಿನಿಂದ ಕರ್ನಾಟಕದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ ಆರಂಭ; ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿ
ಬುರ್ಖಾ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿನಿ
Follow us on

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್​ಸಿ ಪರೀಕ್ಷೆ (SSLC Exam) ಆರಂಭವಾಗಿದೆ. 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು (Students) ಪರೀಕ್ಷೆ ಬರೆಯಲಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾಳೆ. ಈ ವೇಳೆ ಪ್ರಶ್ನಿಸಿದಾಗ, ನನಗೆ ಶಿಕ್ಷಣ ಇಲಾಖೆಯ ಆದೇಶ ಗೊತ್ತಿಲ್ಲ. ನೋ ಐಡಿಯಾ ಎಂದಿದ್ದಾಳೆ. ಶಾಲೆಯಲ್ಲಿ ನಮಗೆ ಈ ಆದೇಶದ ಬಗ್ಗೆ ಹೇಳಿಲ್ಲ. ಹಿಜಾಬ್ ತೆಗೆಯಿರಿ ಅಂದರೆ ರಿಮೂವ್ ಮಾಡಿ ಹೋಗುತ್ತೇವೆ. ಇಲ್ಲ ಅಂದರೆ ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುತ್ತೇವೆ ಎಂದಿದ್ದಾಳೆ.

ಮನೆಯಲ್ಲೂ ನಮ್ಮ ಪೋಷಕರು ಹೇಳಿ ಕಳುಹಿಸಿದ್ದಾರೆ. ಹಿಜಾಬ್ಗೆ ಅವಕಾಶ ನೀಡಿಲ್ಲ ಅಂದರೆ ತೆಗೆದು ಪರೀಕ್ಷೆ ಬರೆಯಲು ಸೂಚಿಸಿದ್ದಾರೆ. ಅದರಂತೆ ಪರೀಕ್ಷೆ ಬರೆಯುತ್ತೇವೆ ಅಂತ ಶಿವಾಜಿನಗರದ ಬಳಿಯ ಸರ್ಕಾರಿ ವಿಕೆಓ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿ ಹೇಳಿದ್ದಾಳೆ.

ಇನ್ನು ರಾಯಚೂರು ನಗರದ ಸರ್ಕಾರಿ ಶಾಲೆಗೆ ವಿದ್ಯಾರ್ಥಿನಿಯರು ಹಿಜಾಬ್ ಹಾಕಿಕೊಂಡು ಬಂದಿದ್ದಾರೆ. ಬಳಿಕ ಪ್ರತ್ಯೇಕ ಕೊಠಡಿಯಲ್ಲಿ ಹಿಜಾಬ್ ತೆಗೆದಿದ್ದಾರೆ. ಹಿಜಾಬ್ ತೆಗೆದ ಬಳಿಕ ಪರೀಕ್ಷಾ ಕೇಂದ್ರದೊಳಗೆ ಸಿಬ್ಬಂದಿ ಅನುಮತಿ ನೀಡಿದ್ದಾರೆ. ರಾಮನಗರದಲ್ಲೂ ವಿದ್ಯಾರ್ಥಿನಿಯರು ಹಿಜಾಬ್, ಬುರ್ಕಾ ಧರಿಸಿ ಪರೀಕ್ಷಾ ಕೇಂದ್ರಗಳತ್ತ ಆಗಮಿಸಿದ್ದಾರೆ.  ಹಿಜಾಬ್ ಕಳಚಿ ಬರುವಂತೆ ಶಿಕ್ಷಕರು ಸೂಚನೆ ನೀಡಿದ್ದು,  ಹಿಜಾಬ್, ಬುರ್ಕಾ ತೆಗೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ಮಕ್ಕಳಿಗೆ ತಿಳಿ ಹೇಳಿದ ಪೋಷಕರು:
ಹಿಜಾಬ್ ತಗಿಯೋಕೆ ಮನಸ್ಸಿಲ್ಲ. ಆದರೆ ಹಿಜಾಬ್ ತಗೆದು ಪರೀಕ್ಷಾ ಕೊಠಡಿಗೆ ಹೋಗಬೇಕಾಗಿದೆ. ಸರ್ಕಾರದ ನಿಯಮದಂತೆ ಹಿಜಾಬ್ ತಗೆದಿಟ್ಟು ಪರೀಕ್ಷೆ ಬರೆಯುವಂತೆ ಮಕ್ಕಳಿಗೆ ಹೇಳಿದ್ದೇವೆ. ಮಕ್ಕಳು ಕಷ್ಟಪಟ್ಟು ವರ್ಷಪೂರ್ತಿ ವಿದ್ಯಾಭ್ಯಾಸ ಮಾಡಿದ್ದಾರೆ. ಈಗ ಹಿಜಾಬ್ ತಗೆಯಲ್ಲ ಅಂದರೆ ಮಕ್ಕಳ ಭವಿಷ್ಯ ಹಾಳಾಗುತ್ತೆ. ಮನೆಯಿಂದ ಶಾಲೆಯವರೆಗೂ ಹಿಜಾಬ್ ಧರಿಸಿ ಬರುತ್ತೇವೆ ಅಂತ ವಿಜಯನಗರದಲ್ಲಿ ಪೋಷಕರು ಹೇಳಿದರು.

ಇದನ್ನೂ ಓದಿ

ಈ ಕೆಲಸ ಮಾಡಿದ್ರೆ ಅಭಿಮಾನಿಗಳಿಗೆ ಸಿಗುತ್ತೆ ಉಪೇಂದ್ರ ಜೊತೆ ಊಟ ಮಾಡುವ ಚಾನ್ಸ್​; ಏನಿದು ಟಾಸ್ಕ್​?

ವಿಶ್ವದ ಅತ್ಯಂತ ದುಬಾರಿ ಫ್ರೆಂಚ್ ಫ್ರೈಸ್​ ಬಗ್ಗೆ ಗೊತ್ತಾ? ಆ್ಯಪಲ್ ಏರ್ಫೋಡ್​ 2ಗಿಂತ ದುಬಾರಿ; ಇಲ್ಲಿದೆ ವೈರಲ್ ವಿಡಿಯೋ

Published On - 9:44 am, Mon, 28 March 22