ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್​ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಿಎಂ ಬೊಮ್ಮಾಯಿ

ಎಸ್​ಎಸ್​ಎಲ್​ಸಿ ಪರೀಕ್ಷೆ ಎಲ್ಲರ ಜೀವನದಲ್ಲೂ ಅತಿ ಮುಖ್ಯ ಪರೀಕ್ಷೆ. ಪರೀಕ್ಷೆ ಬರೆಯುವುದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಉತ್ತೀರ್ಣರಾಗಬೇಕು. ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್​ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
Follow us
TV9 Web
| Updated By: preethi shettigar

Updated on:Mar 28, 2022 | 9:43 AM

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್​ಎಲ್​ಸಿ (SSLC) ಪರೀಕ್ಷೆ ಹಿನ್ನೆಲೆಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ (Students) ಸಿಎಂ ಬಸವರಾಜ ಬೊಮ್ಮಾಯಿ ಶುಭ ಕೋರಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಎಲ್ಲರ ಜೀವನದಲ್ಲೂ ಅತಿ ಮುಖ್ಯ ಪರೀಕ್ಷೆ. ಪರೀಕ್ಷೆ ಬರೆಯುವುದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಉತ್ತೀರ್ಣರಾಗಬೇಕು. ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ (Basavaraj Bommai) ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಧೈರ್ಯವಾಗಿ ಪರೀಕ್ಷೆ ಬರೆಯಿರಿ: ಬಿ.ಸಿ.ನಾಗೇಶ್

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶುಭಾಶಯ ಕೋರಿದ್ದಾರೆ. ರಾಜ್ಯದ ಶೇ.99.9ರಷ್ಟು ಶಾಲೆಗಳಲ್ಲಿ ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿಗಳು ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆಂಬ ವಿಶ್ವಾಸವಿದೆ. ಯಾವುದೇ ಹಿಜಾಬ್ ವಿವಾದವಾಗಲ್ಲವೆಂಬ ವಿಶ್ವಾಸವಿದೆ. ಸೂಕ್ಷ್ಮ ಪ್ರದೇಶಗಳಲ್ಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚು ಭದ್ರತೆ ಮಾಡಲಾಗಿದೆ. ಶಿಕ್ಷಣ ಬೇಕು ಎನ್ನುವವರು ಬಂದು ಪರೀಕ್ಷೆ ಬರೆಯಬೇಕು. ಪರೀಕ್ಷೆ ಬರೆಯುವವರಿಗೆ ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡುತ್ತದೆ. ಧರ್ಮವೇ ಮುಖ್ಯ ಅನ್ನೋರಿಗೆ ಏನು ಮಾಡುವುದಕ್ಕೆ ಆಗುತ್ತೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ.

ಮಲ್ಲೇಶ್ವರಂ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆ ಹಬ್ಬದ ವಾತಾವರಣ

ಬೆಂಗಳೂರಿನ ಮಲ್ಲೇಶ್ವರಂ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಶಾಲೆಯ ಮುಖ್ಯದ್ವಾರದಲ್ಲಿ ವಿದ್ಯಾರ್ಥಿಗಳನ್ನ ಬರಮಾಡಿಕೊಳ್ಳಲು ತಳಿರು ತೋರಣ ಸಿದ್ಧಪಡಿಸಲಾಗಿದೆ. ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಶಾಲಾ ಆಡಳಿತ ಮಂಡಳಿ ಸರ್ಕಲ್ ಹಾಕಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಕೊವಿಡ್ ನಿಮಗಳ ಬಗ್ಗೆ ಶಾಲಾ ಆಡಳಿತ ಮಂಡಳಿ ಬ್ಯಾನರ್ ಹಾಕಿದೆ. ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಮತ್ತು ಸ್ಯಾನಿಟೈಸ್​ ಮಾಡಿಕೊಂಡು ಪರೀಕ್ಷೆ ಹಾಲ್​ಗೆ ತೆರಳಬೇಕು ಎಂದು ಬ್ಯಾನರ್ ಹಾಕಿದ್ದಾರೆ.

ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು: ಹೆಚ್​ಡಿ ಕುಮಾರಸ್ವಾಮಿ

ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ ಶುಭ ಹಾರೈಕೆಗಳು. ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂಬುದು ನನ್ನ ಕಳಕಳಿ ಎಂದು ಟ್ವೀಟ್​ ಮೂಲಕ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ

ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ಶುಭ ಹಾರೈಕೆಗಳು. ವಿದ್ಯಾರ್ಥಿಗಳೇ, ಇದೊಂದು ಕಲಿಕೆಯ ಪ್ರಮುಖ ಘಟ್ಟ. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಾವುದೇ ಗೊಂದಲಗಳಿಗೆ ತಲೆಕೆಡಿಸಿಕೊಳ್ಳದೇ ಪರೀಕ್ಷೆ ಎದುರಿಸಿ, ಶುಭವಾಗಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ: 3444 ಕೇಂದ್ರಗಳಲ್ಲಿ ಸಕಲ ಸಿದ್ಧತೆ

ಹಿಜಾಬ್ ಧರಿಸಿಕೊಂಡು ಬಂದ್ರೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಇಲ್ಲ ಎಂಟ್ರಿ; ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶ

Published On - 9:02 am, Mon, 28 March 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್