ಬೆಂಗಳೂರು: ಅಪಾರ್ಟ್ಮೆಂಟ್​ನ 12ನೇ ಮಹಡಿಯಿಂದ ಬಿದ್ದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಸಾವು

Bengaluru News: ಎಸ್​ಎಸ್​ಎಲ್​ಸಿ ವಿದ್ಯರ್ಥಿನಿಯೋರ್ವಳು ಅಪಾರ್ಟ್ಮೆಂಟ್​ನ 12ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಳ್ಳಂದೂರಿನಲ್ಲಿರುವ ಕ್ಲಾಸಿಕ್ ಅಪಾರ್ಟ್ಮೆಂಟ್​ ಮೇಲಿಂದ ಬಿದ್ದು ಜೆಸ್ಸಿಕಾ ಎನ್ನುವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಕಾರಣ ಏನು ಎನ್ನುವುದು ನಿಗೂಢವಾಗಿದೆ.

ಬೆಂಗಳೂರು: ಅಪಾರ್ಟ್ಮೆಂಟ್​ನ 12ನೇ ಮಹಡಿಯಿಂದ ಬಿದ್ದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಸಾವು
ಜೆಸ್ಸಿಕಾ, ಮೃತ ಬಾಲಕಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Aug 29, 2023 | 4:19 PM

ಬೆಂಗಳೂರು, (ಆಗಸ್ಟ್, 29): ಅಪಾರ್ಟ್ಮೆಂಟ್​ನ 12ನೇ ಮಹಡಿಯಿಂದ ಬಿದ್ದು ಬಾಲಕಿಯೋರ್ವಳು(Girl) ಮೃತಪಟ್ಟಿರುವ ಘಟನೆ ಬೆಂಗಳೂರಿನ(Bengaluru) ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್ಮೆಂಟ್ ನಲ್ಲಿ(apartment) ನಡೆದಿದೆ. ಇಂದು (ಆಗಸ್ಟ್ 29) ಬೆಳಿಗ್ಗೆ 10.30ಕ್ಕೆ ಈ ಘಟನೆ ಸಂಭವಿಸಿದೆ. ಜೆಸ್ಸಿಕಾ (15) ಮೃತ ಬಾಲಕಿ. ಎಸ್​ಎಸ್​ಎಲ್​ಸಿ ವ್ಯಾಸಂಗ ಮಾಡುತ್ತಿದ್ದ ಜೆಸ್ಸಿಕಾ, ತಾವು ವಾಸವಿದ್ದ ಫ್ಲೋರ್​ನ ಮೇಲಿನ ಫ್ಲೋರ್​ಗೆ ಹೋಗಿದ್ದಳು. ಆದ್ರೆ, ಅದೇನಾಯ್ತೋ ಏನು 12ನೇ ಮಹಡಿ ಮೇಲಿಂದ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಜೆಸ್ಸಿಕಾಳ ಮನೆಯಲ್ಲಿ ಯಾರು ಇರಲಿಲ್ಲ ಎಂದು ತಿಳಿದುಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಬೆಳ್ಳಂದೂರು ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಮೂಲತಃ ತಮಿಳುನಾಡಿನ ಮೂಲದ ಕುಟುಂಬ ಕಳೆದ ಎರಡು ವರ್ಷದಿಂದ ಕ್ಲಾಸಿಕ್ ಅಪಾರ್ಟ್ಮೆಂಟ್ ನಲ್ಲಿ ವಾಸವಿತ್ತು. ಜೆಸ್ಸಿಕಾಳ ತಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದುಮ ತಂದೆ ಸಹ ಉದ್ಯೋಗಿಯಾಗಿದ್ದಾರೆ. ಇನ್ನು 10ನೇ ತರಗತಿ ವ್ಯಸಾಂಗ ಮಾಡುತ್ತಿದ್ದ ಜೆಸ್ಸಿಕಾ, ಮಾನಸಿಕವಾಗಿ ನೊಂದಿದ್ದಳು ಎನ್ನಲಾಗಿದ್ದು, ಇದರಿಂದ ಇತ್ತಿಚೆಗೆ ಶಾಲೆಗೂ ಸಹ ಸರಿಯಾಗಿ ಹೊಗುತ್ತಿರಲಿಲ್ಲವಂತೆ. ಕಳೆದ ಮೂರು ತಿಂಗಳಲ್ಲಿ 6 ದಿನ ಮಾತ್ರ ತರಗತಿಗೆ ಹೋಗಿದ್ದಳಂತೆ. ಈ ಹಿನ್ನೆಲೆಯಲ್ಲಿ ಬಾಲಕಿ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಬಿದ್ದು ಮಹಿಳೆ ಸಾವು

ಈ ಪ್ರಕರಣಕ್ಕೆ ವೈಟ್ ಫೀಲ್ಡ್ ಡಿಸಿಪಿ ಹೇಳಿದ್ದಿಷ್ಟು

12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಪ್ರತಿಕ್ರಿಯಿಸಿದ್ದು, 15 ವರ್ಷದ ಹುಡುಗಿ ಜೆಸ್ಸಿಕಾ ಎನ್ನುವ ಬಾಲಕಿ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಕ್ಲಾಸಿಕ್ ಅಪಾರ್ಟ್‌ಮೆಂಟ್ ನಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣ ಏನು ಅಂತಾ ಗೊತ್ತಾಗಿಲ್ಲ. ತಂದೆ ಸಾಫ್ಟ್​ ವೇರ್ ಇಂಜಿನಿಯರ್. ತಾಯಿ ಖಾಸಗಿ ಶಾಲೆಯಲ್ಲಿ ಟೀಚರ್ ಆಗಿದ್ದಾರೆ. ಇಂದು ಬೆಳಗ್ಗೆ ಬಾಲಕಿ ಶಾಲೆಗೆ ಹೋಗಿ ಪುನಃ ವಾಪಸ್ ಬಂದಿದ್ದಾರೆ. ನಂತರ ಟೀಚರ್ ತಾಯಿಗೆ ಕರೆ ಮಾಡಿ ಮಗಳು ಶಾಲೆಗೆ ಬಂದಿಲ್ಲ ಎಂದು ಹೇಳಿದ್ದಾರೆ. ನಂತರ ಪೋಷಕರು ಪರಿಶೀಲನೆ ಮಾಡಿದಾಗ ಜೆಸ್ಸಿಕಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಪ್ರಾಥಮಿಕವಾಗಿ ಬಾಲಕಿ ಶಾಲೆಗೆ ಹೋಗಿ ಕ್ಲಾಸ್ ಅಟೆಂಡ್ ಮಾಡದೆ ವಾಪಸ್ ಬರುತ್ತಿದ್ದಳು ಎಂದು ತಿಳಿದುಬಂದಿದೆ. ಅದ್ರೆ ಘಟನೆ ನಿಖರ ಕಾರಣ ಏನು ಎನ್ನುವುದು ಇನ್ನೂ ಗೊತ್ತಾಗಿಲ್ಲ‌. ಈ ಬಗ್ಗೆ ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಬೆಂಗಳೂರಿನ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:43 pm, Tue, 29 August 23

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ