ಬೆಂಗಳೂರು: ಆಸ್ಪತ್ರೆಯಲ್ಲಿ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ, ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿಟಿ ಸ್ಕ್ಯಾನ್ ಮಷಿನ್ ಮೇಲೆ ಮಲಗಿಸಿ ವಿವಸ್ತ್ರಗೊಳಿಸಿದ್ದ ಸಿಬ್ಬಂದಿ ನಂತರ ದೈಹಿಕ ಸಂಪರ್ಕಕ್ಕೆ ಪೀಡಿಸಿದ್ದಾಗಿ ವೃದ್ಧೆ ಕೊಡಿಗೇಹಳ್ಳಿ ಪೊಲೀಸ್​​​ ಠಾಣೆಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಬೆಂಗಳೂರು: ಆಸ್ಪತ್ರೆಯಲ್ಲಿ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ, ಸಿಬ್ಬಂದಿ ಬಂಧನ
ವೃದ್ಧೆಗೆ ಲೈಂಗಿಕ ದೌರ್ಜನ್ಯ ಎಸಗಿದ ಖಾಸಗಿ ಆಸ್ಪತ್ರೆ ಸಿಬ್ಬಂದಿಯನ್ನು ಬಂಧಿಸಿದ ಕೊಡಿಗೇಹಳ್ಳಿ ಠಾಣಾ ಪೊಲೀಸರು (ಸಾಂದರ್ಭಿಕ ಚಿತ್ರ)
Edited By: Rakesh Nayak Manchi

Updated on: Sep 07, 2023 | 6:34 AM

ಬೆಂಗಳೂರು, ಸೆ.7: ಖಾಸಗಿ ಆಸ್ಪತ್ರೆಯಲ್ಲಿ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ (Sexual Harassment) ಆರೋಪ ಸಂಬಂಧ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ ಘಟನೆ ನಗರದ(Bengaluru) ಹೆಬ್ಬಾಳದಲ್ಲಿ ನಡೆದಿದೆ. ಅಸ್ಟರ್ ಸಿಎಂಐ ಆಸ್ಪತ್ರೆ ಸಿಬ್ಬಂದಿ ಅಶೋಕ್ ಬಂಧಿತ ಆರೋಪಿಯಾಗಿದ್ದಾನೆ.

ಅನಾರೋಗ್ಯ ಹಿನ್ನೆಲೆ ಆಗಸ್ಟ್ 3 ರಂದು ವೃದ್ಧೆ ಹೆಬ್ಬಾಳದ ಅಸ್ಟರ್ ಸಿಎಂಐ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 4 ಬೆಳಗಿನ ಜಾವ 1:30 ರ ವೇಳೆಗೆ ವೃದ್ದೆಯನ್ನು ಸಿಟಿ ಸ್ಕ್ಯಾನ್ ಮಾಡಲೆಂದು ಅಶೋಕ್ ಕರೆದೊಯ್ದಿದ್ದಾನೆ. ಅದರಂತೆ ಸಿಟಿ ಸ್ಕ್ಯಾನ್ ಮೆಷಿನ್ ಮೇಲೆ ಮಲಗಿಸಿ ವಿವಸ್ತ್ರಗೊಳಿಸಿದ್ದ ಅಶೋಕ್, ನಂತರ ವೃದ್ಧೆಯ ಖಾಸಗಿ ಅಂಗಾಗಳ ಸ್ಪರ್ಶಿಸಿ ಲೈಂಗಿಕ ದೌರ್ಜನ್ಯ ಎಸಗಿ ತನ್ನೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಪೀಡಿಸಿದ್ದಾನೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಬಯಲು ಬರ್ಹಿದೆಸೆಗೆ ಹೋಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗಾಗಿ ಹುಡುಕಾಟ

ಈ ಬಗ್ಗೆ ಸಂತ್ರಸ್ಥೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅಶೋಕ್​ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us