AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ 5 ನಗರ ಪೊಲೀಸ್ ಕಮಿಷನರೇಟ್‌ಗಳ ರಚನೆಗೆ ಸಿಬ್ಬಂದಿ ಕೊರತೆ: 5000 ಹುದ್ದೆಗಳಿಗೆ ಇನ್ನೂ ದೊರೆತಿಲ್ಲ ಅನುಮೋದನೆ

ಬೆಂಗಳೂರಿನಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ ರಚನೆಗೆ ಸರ್ಕಾರ ಅನುಮೋದನೆ ನೀಡಿದೆಯಾದರೂ, ಅಗತ್ಯವಿರುವ 5,000ಕ್ಕೂ ಹೆಚ್ಚು ಹುದ್ದೆಗಳಿಗೆ ಇನ್ನೂ ಆರ್ಥಿಕ ಇಲಾಖೆಯ ಅನುಮೋದನೆ ಸಿಗದೆ ಸಿಬ್ಬಂದಿಯ ಅಭಾವ ಎದುರಾಗಿದೆ. ಅಗತ್ಯ ಸಿಬ್ಬಂದಿ ಲಭ್ಯವಿಲ್ಲದಿದ್ದರೆ ಹೊಸ ವ್ಯವಸ್ಥೆಯ ಪರಿಣಾಮಕಾರಿತ್ವಕ್ಕೆ ಧಕ್ಕೆಯಾಗಬಹುದು ಎಂದು ಪೊಲೀಸ್ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಲ್ಲಿ 5 ನಗರ ಪೊಲೀಸ್ ಕಮಿಷನರೇಟ್‌ಗಳ ರಚನೆಗೆ ಸಿಬ್ಬಂದಿ ಕೊರತೆ: 5000 ಹುದ್ದೆಗಳಿಗೆ ಇನ್ನೂ ದೊರೆತಿಲ್ಲ ಅನುಮೋದನೆ
ಸಾಂದರ್ಭಿಕ ಚಿತ್ರImage Credit source: PTI
ಪ್ರಸನ್ನ ಹೆಗಡೆ
|

Updated on: Oct 08, 2026 | 11:37 AM

Share

ಬೆಂಗಳೂರು, ಅಕ್ಟೋಬರ್​​ 08: ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳನ್ನು ರಚಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಆದರೆ ಇದಕ್ಕೆ ಅಗತ್ಯವಿರುವ ಒಟ್ಟು 6,550 ಹೆಚ್ಚುವರಿ ಹುದ್ದೆಗಳ ಪೈಕಿ 5,000ಕ್ಕೂ ಹೆಚ್ಚು ಹುದ್ದೆಗಳಿಗೆ ಇನ್ನೂ ಅನುಮೋದನೆಯೇ ದೊರೆತಿಲ್ಲ.ಇದರಿಂದ ಹೊಸ ವ್ಯವಸ್ಥೆಗೆ ದೊಡ್ಡ ಪ್ರಮಾಣದ ಸಿಬ್ಬಂದಿಯ ಕೊರತೆಯ ಸವಾಲು ಎದುರಾಗಲಾಗಿದೆ.

ಕೇವಲ 1,022 ಹುದ್ದೆಗಳಿಗೆ ಮಾತ್ರ ಅನುಮೋದನೆ

ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಅಪರಾಧ ನಿಯಂತ್ರಣ, ಸಂಚಾರ ನಿರ್ವಹಣೆ ಹಾಗೂ ಸಾರ್ವಜನಿಕ ಸುರಕ್ಷತೆಯನ್ನು ಬಲಪಡಿಸಲು ವಿಕೇಂದ್ರೀಕರಣ ಸಹಕಾರಿಯಾಗಲಿದೆ ಎಂದು ಸರ್ಕಾರ ಹೇಳಿದೆ. ಆದರೆ, ಅಗತ್ಯ ಸಿಬ್ಬಂದಿ ಲಭ್ಯವಿಲ್ಲದಿದ್ದರೆ ಹೊಸ ವ್ಯವಸ್ಥೆಯ ಪರಿಣಾಮಕಾರಿತ್ವಕ್ಕೆ ಧಕ್ಕೆಯಾಗಬಹುದು ಎಂದು ಪೊಲೀಸ್ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಐದು ಕಮಿಷನರೇಟ್‌ಗಳಿಗೆ ಅಗತ್ಯವಿರುವ 6,550 ಹೆಚ್ಚುವರಿ ಹುದ್ದೆಗಳ ಪೈಕಿ ಹಣಕಾಸು ಇಲಾಖೆ ಇದುವರೆಗೆ ಕೇವಲ 1,022 ಹುದ್ದೆಗಳಿಗೆ ಮಾತ್ರ ಅನುಮೋದನೆ ನೀಡಿದೆ. ಈಗಾಗಲೇ ನಗರ ಪೊಲೀಸ್ ಇಲಾಖೆಯಲ್ಲಿ ಸುಮಾರು 3,000 ಸಿಬ್ಬಂದಿ ಕೊರತೆಯಿದೆ.

LIVE TV

ಇದನ್ನೂ ಓದಿ: ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಚಿವ ಸಂಪುಟ ಅನುಮೋದನೆ

ಗೃಹ ಇಲಾಖೆಯ ಅಧಿಕಾರಿಗಳ ಪ್ರಕಾರ, ಹಂತ ಹಂತವಾಗಿ ನೇಮಕಾತಿ ನಡೆಯಲಿದೆ. ಪ್ರಸ್ತುತ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ಗಳು ಹಾಗೂ ಸಿಎಆರ್ ಕಾನ್ಸ್‌ಟೇಬಲ್‌ಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆದರೆ, ಪ್ರಸ್ತುತ ನಡೆಯುತ್ತಿರುವ ನೇಮಕಾತಿಯಿಂದ ಪ್ರಸ್ತಾವಿತ ಕಮಿಷನರೇಟ್‌ಗಳಿಗೆ ಅಗತ್ಯವಿರುವ ಸಿಬ್ಬಂದಿ ಕೊರತೆ ತಕ್ಷಣಕ್ಕೆ ನೀಗುವುದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಸೇವೆಯಲ್ಲಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ವಿಕೇಂದ್ರೀಕರಣದಿಂದ ಮೇಲ್ವಿಚಾರಣೆ ಸುಧಾರಿಸುವುದರ ಜೊತೆಗೆ ನಾಗರಿಕರು ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸುವುದು ಸುಲಭವಾಗಬಹುದು. ಆದರೆ, ಹೊಸ ವ್ಯವಸ್ಥೆ ಜಾರಿಯಾದ ನಂತರವಷ್ಟೇ ಅದರ ಪರಿಣಾಮಕಾರಿತ್ವ ಸ್ಪಷ್ಟವಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?