ಅಲ್ಪಸಂಖ್ಯಾತರನ್ನು ಓಲೈಸುವುದು ಖಯಾಲಿಯಾಗಿಬಿಟ್ಟಿದೆ: ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಸರಣಿ ಟ್ವೀಟ್

| Updated By: preethi shettigar

Updated on: Oct 19, 2021 | 2:13 PM

ಒಂದು ವರ್ಗದ ಓಲೈಕೆಗಾಗಿ ಮಾಡಿದ ಪ್ರಹಸನದಿಂದಾಗಿಯೇ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟು ಬಾದಾಮಿಗೆ ಓಡುವಂತಾಗಿತ್ತು. ಆದರೂ, ಸಿದ್ದರಾಮಯ್ಯ ಅವರಿಗೆ ಇನ್ನೂ ಬುದ್ದಿ ಬಂದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.

ಅಲ್ಪಸಂಖ್ಯಾತರನ್ನು ಓಲೈಸುವುದು ಖಯಾಲಿಯಾಗಿಬಿಟ್ಟಿದೆ: ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಸರಣಿ ಟ್ವೀಟ್
ಸಿದ್ದರಾಮಯ್ಯ ಮತ್ತು ಬಿಜೆಪಿ ಮಾಡಿರುವ ಟ್ವೀಟ್
Follow us on

ಬೆಂಗಳೂರು: ಬಹುಸಂಖ್ಯಾತರ ಮೇಲೆ ದ್ವೇಷ ಕಕ್ಕುವುದು, ಅಲ್ಪಸಂಖ್ಯಾತರನ್ನು ಓಲೈಸುವುದು ಖಯಾಲಿಯಾಗಿಬಿಟ್ಟಿದೆ. ಚುನಾವಣೆ, ಉಪಚುನಾವಣೆ ಬಂದಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ಬದಲಾಗುತ್ತಾರೆ ಎಂದು ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಸರಣಿ ಟ್ವೀಟ್ ಮಾಡಿದೆ. ಅಲ್ಲದೇ ಸಿದ್ದರಾಮಯ್ಯ ಅವರನ್ನು ಬುರುಡೆರಾಮಯ್ಯ ಎಂದು ಟ್ವೀಟ್ ಮಾಡಿದೆ.

ಖಡ್ಗದ ಮೂಲಕ ರಾಜ್ಯದಲ್ಲಿ ಹಿಂದೂಗಳ ಮಾರಣ ಹೋಮ ನಡೆಸುವುದಕ್ಕೆ ಸಿದ್ದರಾಮಯ್ಯ ಪ್ರೋತ್ಸಾಹ ನೀಡಿದ್ದರು. ಒಂದು ವರ್ಗದ ಓಲೈಕೆಗಾಗಿ ಮಾಡಿದ ಪ್ರಹಸನದಿಂದಾಗಿಯೇ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟು ಬಾದಾಮಿಗೆ ಓಡುವಂತಾಗಿತ್ತು. ಆದರೂ, ಸಿದ್ದರಾಮಯ್ಯ ಅವರಿಗೆ ಇನ್ನೂ ಬುದ್ದಿ ಬಂದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.

ಸುತ್ತಿ ಬಳಸಿ ಮಾತನಾಡುವ ಬದಲಿಗೆ, ಬಹುಸಂಖ್ಯಾತರನ್ನು ತುಳಿದು, ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಿದ್ದೇನೆ. ಹೀಗಾಗಿ ಚಾಮರಾಜಪೇಟೆಗೆ ವಲಸೆ ಹೋಗುತ್ತಿದ್ದೇನೆಂದು ನೇರವಾಗಿ ಹೇಳಿ. ವಲಸೆ ಹೋಗುವುದಕ್ಕೆ ಸಿದ್ಧತೆ ನಡೆಸಿದ್ದು ನಿಜವಲ್ಲವೇ? ಸಿದ್ದರಾಮಯ್ಯನವರೇ, ಕಿಸ್ ಕಾ ಸಾತ್ ಕಿಸ್ ಕಾ ವಿಕಾಸ್? ಎಂದು ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡಿ ಬಿಜೆಪಿ ಪ್ರಶ್ನಿಸಿದೆ.

ಇದನ್ನೂ ಓದಿ:
ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂ; ಮೌನವಾಗಿ ಆಲಿಸಿರುವ ಉಗ್ರಪ್ಪ – ಟ್ವೀಟ್​ ಮಾಡಿ ಕೆಣಕಿದ ಬಿಜೆಪಿ!

ಜನ್ಮದಿನದಂದು ಮಾತ್ರ ಸಿದ್ದರಾಮಯ್ಯ ಜೊತೆ ಭೇಟಿ ಮಾಡಿದ್ದೆನಷ್ಟೇ; ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಯಡಿಯೂರಪ್ಪ ಟ್ವೀಟ್​ ಉತ್ತರ

Published On - 2:01 pm, Tue, 19 October 21