ಭ್ರಷ್ಟಾಚಾರ ಆರೋಪದಲ್ಲಿ ಒಂದೇ ದಿನ ಬಂಧನಕ್ಕೀಡಾದ ಐಎಎಸ್​-ಐಪಿಎಸ್ ಅಧಿಕಾರಿಗಳಿಬ್ಬರನ್ನೂ ಮನೆಗೆ ಕಳಿಸಿದ ರಾಜ್ಯ ಸರ್ಕಾರ

ಪಿಎಸ್‌ಐ ಅಕ್ರಮ ನೇಮಕಾತಿಯಲ್ಲಿ ಇಂದು ಮಧ್ಯಾಹ್ನ ಬಂಧಿತರಾಗಿದ್ದ  ಐಪಿಎಸ್‌ ಅಧಿಕಾರಿ ಅಮೃತ್ ಪಾಲ್​​ರನ್ನು  ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಹುದ್ದೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಭ್ರಷ್ಟಾಚಾರ ಆರೋಪದಲ್ಲಿ ಒಂದೇ ದಿನ ಬಂಧನಕ್ಕೀಡಾದ ಐಎಎಸ್​-ಐಪಿಎಸ್ ಅಧಿಕಾರಿಗಳಿಬ್ಬರನ್ನೂ ಮನೆಗೆ ಕಳಿಸಿದ ರಾಜ್ಯ ಸರ್ಕಾರ
ಸೇವೆಯಿಂದ ವಜಾಗೊಂಡ ಐಎಎಸ್​-ಐಪಿಎಸ್ ಅಧಿಕಾರಿಗಳು
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 04, 2022 | 11:02 PM

ಬೆಂಗಳೂರು: ಪಿಎಸ್‌ಐ (PSI) ಅಕ್ರಮ ನೇಮಕಾತಿಯಲ್ಲಿ (PSI recruitment scam) ಇಂದು ಮಧ್ಯಾಹ್ನ ಬಂಧಿತರಾಗಿದ್ದ  ಐಪಿಎಸ್‌ ಅಧಿಕಾರಿ ಅಮೃತ್ ಪಾಲ್​​ರನ್ನು  ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಹುದ್ದೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ  ಅಮೃತ್ ಪಾಲ್‌ ಸಿಐಡಿ ಅಧಿಕಾರಿಗಳ ಕಸ್ಟಡಿಯಲ್ಲಿದ್ದಾರೆ.

ಇನ್ನು ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದಾಗ ರಾಜಧಾನಿ ಬೆಂಗಳೂರಿನ ಜಿಲ್ಲಾಧಿಕಾರಿಯಾಗಿದ್ದ  ಐಎಎಸ್ ಅಧಿಕಾರಿ ಜೆ ಮಂಜುನಾಥ್‌ ಅವರನ್ನೂ ಸಹ ಸಸ್ಪೆಂಡ್‌ ಮಾಡಿ, ರಾಜ್ಯ ಸರ್ಕಾರ ಇದೀಗತಾನೆ ಆದೇಶ ಹೊರಡಿಸಿದೆ. ಇಂದು ಮಧ್ಯಾಹ್ನ  ಎಸಿಬಿ ಪೊಲೀಸರು ಮಂಜುನಾಥರನ್ನು ಬಂಧಿಸಿತ್ತು.

ಅಧಿಕಾರಿಗಳಿಬ್ಬರ ಬಂಧನದ ಹಿನ್ನಲೆ

ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ   ಪ್ರಕರಣಕ್ಕೆ ಸಂಬಂಧಿಸಿ ಸಿಐಡಿಪೊಲೀಸರು ಎಡಿಜಿಪಿ ಅಮೃತ್ ಪಾಲ್​ರನ್ನು ಬಂಧಿಸಿದ್ದಾರೆ. ಸಾಕ್ಷ್ಯಾಧಾರ ಸಿಕ್ಕಿದ್ದರಿಂದ ಅಮೃತ್ ಪಾಲ್ ಬಂಧಿಸಲಾಗಿದೆ ಎಂದು ಟಿವಿ9ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಅಮೃತ್ ಪಾಲ್ ಕಚೇರಿಯಲ್ಲೇ ಒಎಂಆರ್ ಶೀಟ್‌ ತಿದ್ದಲಾಗಿದೆ. ಯಾವೊಬ್ಬ ಅಧಿಕಾರಿಯನ್ನೂ ಬಿಡದಂತೆ ಸೂಚಿಸಲಾಗಿದೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿದ್ದೇವೆ. ಸಿಐಡಿ ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಸಿಐಡಿ ಪೊಲೀಸರು ಎಡಿಜಿಪಿ ಅಮೃತ್ ಪಾಲ್​ರನ್ನು ಬಂಧಿಸಿ ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದ್ದಾರೆ. ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಯಲಿದೆ. ಅಮೃತ್ ಪಾಲ್ ವೈದ್ಯಕೀಯ ತಪಾಸಣೆ ಬಳಿಕ ಮ್ಯಾಜೀಸ್ಟೇಟ್​ ಕೋರ್ಟ್​ಗೆ​ ಹಾಜರು ಪಡಿಸಲು ಸಿದ್ದತೆ ನಡೆದಿದೆ.

Published On - 10:47 pm, Mon, 4 July 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು