Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆಸ್ಪತ್ರೆಗಳ ಬೆಲೆ ಹೆಚ್ಚಳಕ್ಕೆ ಕಡಿವಾಣ; ಡೆಂಗ್ಯೂ ಪರೀಕ್ಷೆಗೆ ದರ ನಿಗದಿಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರಿನಲ್ಲಿ ಇಂದು ಒಂದೇ ದಿನ 18 ಜನರಿಗೆ ಡೆಂಗ್ಯೂ ಜ್ವರ ದೃಢವಾಗಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಒಟ್ಟು 31 ಕೇಸ್ ಡೆಂಗ್ಯೂ ಪಾಸಿಟೀವ್ ಕೇಸ್ ದಾಖಾಲಾಗಿವೆ. ಇನ್ನು ಡೆಂಗ್ಯೂ ಟೆಸ್ಟಿಂಗ್​(Dengue Test)ಗೆ ಹೆಚ್ಚಿನ ಬೆಲೆ ವಿಧಿಸುತ್ತಿದ್ದ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಿ, ಸೂಕ್ತ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ವಿವರ ಇಲ್ಲಿದೆ.

ಖಾಸಗಿ ಆಸ್ಪತ್ರೆಗಳ ಬೆಲೆ ಹೆಚ್ಚಳಕ್ಕೆ ಕಡಿವಾಣ; ಡೆಂಗ್ಯೂ ಪರೀಕ್ಷೆಗೆ ದರ ನಿಗದಿಗೊಳಿಸಿದ ರಾಜ್ಯ ಸರ್ಕಾರ
ಡೆಂಗ್ಯೂ ಪರೀಕ್ಷೆಗೆ ದರ ನಿಗದಿಗೊಳಿಸಿದ ಕರ್ನಾಟಕ ಸರ್ಕಾರ
Follow us
Vinay Kashappanavar
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 03, 2024 | 9:48 PM

ಬೆಂಗಳೂರು, ಜು.03: ಕರ್ನಾಟಕದಲ್ಲಿ ಡೆಂಗ್ಯೂ ಹೆಚ್ಚಳ ಆಗುತ್ತಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಾಗಿದೆ. ಅದರಂತೆ ಜನವರಿಯಿಂದ ಜುಲೈ 1 ರ ತನಕ ರಾಜ್ಯದಲ್ಲಿ 6187 ಪ್ರಕರಣ ದಾಖಲಾಗಿದೆ. ಈ ವರ್ಷ 47% ಟೆಸ್ಟಿಂಗ್ ರೇಟ್ ಕೂಡ ಹೆಚ್ಚಳ ಮಾಡಲಾಗಿದೆ. ಇನ್ನೂ ಡೆಂಗ್ಯೂ ಪ್ರಕರಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಕುರಿತು  ಸಿಎಂ ಕೂಡ ಎಚ್ಚರಿಕೆ ವಹಿಸಲು ತಿಳಿಸಿದ್ದಾರೆ. ಈ ಹಿನ್ನಲೆ ಡೆಂಗ್ಯೂ ಟೆಸ್ಟಿಂಗ್​(Dengue Test)ಗೆ ಹೆಚ್ಚಿನ ಬೆಲೆ ವಿಧಿಸುತ್ತಿದ್ದ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಿ, 600 ರೂ. ದರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿ, ವಿವರ ಇಲ್ಲಿದೆ

  • NS1 ಪರೀಕ್ಷೆಗೆ 300 ರೂಪಾಯಿ ನಿಗದಿ.
  • IgM ಪರೀಕ್ಷೆಗೆ 300 ರೂ. ನಿಗದಿ.
  • ಸ್ಕ್ರೀನಿಂಗ್ ಪರೀಕ್ಷೆ, ಱಪಿಡ್ ಕಾರ್ಡ್ ಟೆಸ್ಟ್ ಹಾಗೂ IgG ಟೆಸ್ಟ್‌ಗೆ 250 ರೂಪಾಯಿ ದರ ನಿಗದಿ.

ಇನ್ನು 2016ರಲ್ಲಿ ನಿಗದಿಯಾಗಿದ್ದ ದರಗಳನ್ನು ಪರಿಷ್ಕರಣೆ ಮಾಡಿ ಈ ಆದೇಶ ಹೊರಡಿಸಲಾಗಿದ್ದು, ಖಾಸಗಿ ಆಸ್ಪತ್ರೆಗಳು ಹಾಗೂ ಖಾಸಗಿ ಲ್ಯಾಬ್‌ಗಳಿಗೆ ಈ ದರ ಅನ್ವಯವಾಗುತ್ತದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಅಬ್ಬರ; ಸಿಲಿಕಾನ್ ಸಿಟಿಗೆ ಕಾದಿದ್ಯಾ ಸೆಪ್ಟೆಂಬರ್ ಗಂಡಾಂತರ..?

ಬೆಂಗಳೂರಿನಲ್ಲಿ ಇಂದು 18 ಜನರಿಗೆ ಡೆಂಘೀ ಜ್ವರ ದೃಢ

ಬೆಂಗಳೂರಿನಲ್ಲಿ ಇಂದು ಒಂದೇ ದಿನ 18 ಜನರಿಗೆ ಡೆಂಗ್ಯೂ ಜ್ವರ ದೃಢವಾಗಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಒಟ್ಟು 31 ಕೇಸ್ ಡೆಂಗ್ಯೂ ಪಾಸಿಟೀವ್ ಕೇಸ್ ದಾಖಾಲಾಗಿವೆ. ಇಂದು ಸಿಲಿಕಾನ್​ ಸಿಟಿಯಲ್ಲಿ 300 ಜನರ ರಕ್ತದ ಮಾದರಿ ಪರೀಕ್ಷೆ ಮಾಡಲಾಗಿತ್ತು. ಆ ಪೈಕಿ 18 ಜನರಲ್ಲಿ ಪಾಸಿಟಿವ್ ಬಂದಿದೆ. ಈ ಮೂಲಕ ಬೆಂಗಳೂರಿನಲ್ಲಿ 1,564ಕ್ಕೆ ಡೆಂಗ್ಯೂ ಕೇಸ್​ಗಳು ಏರಿಕೆ ಆಗಿದೆ. ರಾಜ್ಯದಲ್ಲಿ ಇಂದು ಒಟ್ಟು 10,5283 ಜನರನ್ನ ಶಂಕಿತ ಕೇಸ್​ ಗಳನ್ನ‌ ಪತ್ತೆ ಹಚ್ಚಿದ್ದು, ಅದರಲ್ಲಿ ಒಟ್ಟು 4,5751 ಜನರಿಗೆ ರಕ್ತಪರಿಶೀಲಿಸಲಾಗಿತ್ತು. ಆ ಪೈಕಿ 1GM Mac Elisa ಕೇಸ್​ಗಳು 2314 ಪತ್ತೆಯಾಗಿವೆ. ಇನ್ನು NS1 antigen ಕೇಸ್ ಗಳು ಒಟ್ಟು 2513 ಪತ್ತೆಯಾಗಿವೆ. ಆ ಮೂಲಕ ಒಟ್ಟು ರಾಜ್ಯದಲ್ಲಿ 4867 ಡೆಂಗ್ಯೂ ಕೇಸ್ ಗಳು ದಾಖಾಲಾಗಿವೆ.

ಈ ಕುರಿತು ಮಾತನಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಡೆಂಗ್ಯೂ ಹರಡುವಿಕೆ ಬಗ್ಗೆ ವಿವಿಧ ಇಲಾಖೆಗಳ ಜೊತೆ ಸಭೆ ಮಾಡಿ, ಅದರ ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದೇವೆ.  ಸದಾ ಮಳೆ ಬರುತ್ತಿದ್ದರೆ, ಡೆಂಗ್ಯೂ ಸೊಳ್ಳೆ ಬರೋದಿಲ್ಲ. ನಿಂತು ಬೀಳುವ ಮಳೆಯಿಂದಾಗಿ ಸೊಳ್ಳೆ ಹರಡುವಿಕೆ ಹೆಚ್ಚಾಗುತ್ತದೆ. ಇದು ಅನುಕೂಲ ಮಾಡಿಕೊಡುತ್ತದೆ. ಈ ರೀತಿಯ ಹವಾಮಾನ ಬದಲಾವಣೆಯಿಂದ ರೋಗ ಉಲ್ಬಣಗೊಳ್ಳುತ್ತಿದೆ. ಇನ್ನು ಕೆಪಿಎಂ ಆ್ಯಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯವಾಗಿದೆ. ಇಷ್ಟೇ ಅಲ್ಲದೆ ರಾಜ್ಯದಲ್ಲಿ ಮತ್ತಷ್ಟು ಕೇಸ್​ಗಳು ಇರಬಹುದು, ಈ ಕುರಿತು ದಿನ ನಿತ್ಯ ಡೆಂಗ್ಯೂ ಬುಲೆಟಿನ್ ಕೊಡಲಾಗುತ್ತದೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ