ರಾಜ್ಯದಲ್ಲಿ ನೂತನ 4,244 ಅಂಗನವಾಡಿ ಕೇಂದ್ರಗಳ ಆರಂಭಕ್ಕೆ ರಾಜ್ಯ ಸರ್ಕಾರ ಆದೇಶ

| Updated By: ಆಯೇಷಾ ಬಾನು

Updated on: Sep 03, 2022 | 4:22 PM

ನಗರ ಪ್ರದೇಶದಲ್ಲಿ 2,589 ಅಂಗನವಾಡಿ ಕೇಂದ್ರಗಳು ಮತ್ತು ವಲಸೆ & ಭೂರಹಿತ ಕಾರ್ಮಿಕರಿರುವ ಸ್ಥಳದಲ್ಲಿ 1,655 ಕೇಂದ್ರಗಳನ್ನು ತೆರೆಯಲು 268.98 ಕೋಟಿ ರೂಪಾಯಿಗಳ ಅನುದಾನ ಮೀಸಲಿಟ್ಟಿದೆ.

ರಾಜ್ಯದಲ್ಲಿ ನೂತನ 4,244 ಅಂಗನವಾಡಿ ಕೇಂದ್ರಗಳ ಆರಂಭಕ್ಕೆ ರಾಜ್ಯ ಸರ್ಕಾರ ಆದೇಶ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us on

ಬೆಂಗಳೂರು: ರಾಜ್ಯದಲ್ಲಿ ನೂತನ 4,244 ಅಂಗನವಾಡಿ ಕೇಂದ್ರಗಳ ಆರಂಭ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಕಡಿಮೆ ಆದಾಯದ ಜನಸಂಖ್ಯೆ ಹೆಚ್ಚಾಗಿ ವಾಸಿಸುವ, ವಲಸೆ ಮತ್ತು ಭೂಮಿ ರಹಿತ ಕಾರ್ಮಿಕರನ್ನು ಒಳಗೊಂಡಿರುವ ಗ್ರಾಮಾಂತರದಲ್ಲಿ 1655 ಮತ್ತು ನಗರ ಪ್ರದೇಶದಲ್ಲಿ 2589 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲು ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.

ಇನ್ನು ನಗರ ಪ್ರದೇಶದಲ್ಲಿ 2,589 ಅಂಗನವಾಡಿ ಕೇಂದ್ರಗಳು ಮತ್ತು ವಲಸೆ & ಭೂರಹಿತ ಕಾರ್ಮಿಕರಿರುವ ಸ್ಥಳದಲ್ಲಿ 1,655 ಕೇಂದ್ರಗಳನ್ನು ತೆರೆಯಲು 268.98 ಕೋಟಿ ರೂಪಾಯಿಗಳ ಅನುದಾನ ಮೀಸಲಿಟ್ಟಿದೆ. ಕರ್ನಾಟಕ ಅಂಗನವಾಡಿ ಮತ್ತು ಪೋಷಣ್ ಅಭಿಯಾನ 2.0 ಎಂದು ಮರು ನಾಮಾಂಕಿತಗೊಂಡಿರುವ ಸಮಗ್ರ ಮಕ್ಕಳ ಅಭಿವೃದ್ದಿ ಯೋಜನೆಯಡಿಯಲ್ಲಿ ಅಂಗನವಾಡಿ ಪ್ರಾರಂಭವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಂಗನವಾಡಿ ಮತ್ತು ಪೋಷಣ್ ಅಭಿಯಾನ 2.0 ಎಂದು ಮರುನಾಮಾಂಕಿತಗೊಂಡಿರುವ ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆಯನ್ನು ಪ್ರಾಯೋಗಿಕವಾಗಿ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನಲ್ಲಿ 100 ಅಂಗನವಾಡಿ ಕೇಂದ್ರಗಳೊಂದಿಗೆ ದಿನಾಂಕ: 2-10-1975 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಪ್ರಾರಂಭಿಸಲಾಯಿತು. ಈ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 60:40ರ ಅನುಪಾತದಲ್ಲಿ ಈ ಸಂಬಂಧದ ವೆಚ್ಚ ಭರಿಸುತ್ತಿವೆ. ಸದರಿ ಯೋಜನೆಯನ್ನು ನಂತರದ ವರ್ಷಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗಿದ್ದು, ಪ್ರಸ್ತುತ ಒಟ್ಟು 204 ಯೋಜನೆಗಳಿದ್ದು, ರಾಜ್ಯದ ಗಣನೀಯ ಪ್ರದೇಶಗಳನ್ನು ಒಳಗೊಂಡಿದೆ. ಈ ಯೋಜನೆಯಡಿ ಒಟ್ಟು 66,361 ಅಂಗನವಾಡಿ ಕೇಂದ್ರಗಳು ಸ್ಥಾಪಿತವಾಗಿದ್ದು, ಅವುಗಳ ಮೂಲಕ ರಾಜ್ಯದ ಮಕ್ಕಳಿಗೆ, ಕಿಶೋರಿಯರಿಗೆ, ಗರ್ಭಿಣಿ ಸ್ತ್ರೀಯರಿಗೆ ಹಾಗೂ ಭಾಣಂತಿಯರಿಗೆ ಪೂರಕ ಪೌಷ್ಟಿಕ ಆಹಾರ, ಶಾಲಾ ಪೂರ್ವ ಶಿಕ್ಷಣ, ಪೌತ್ಮಿಕತೆ ಮತ್ತು ಆರೋಗ್ಯ ಶಿಕ್ಷಣ ಮುಂತಾದ 6 ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ಸರ್ಕಾರದ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Published On - 4:15 pm, Sat, 3 September 22