ಪೊಲೀಸ್, ಆರ್ಟಿಓ ವಿರುದ್ಧ ಚುನಾವಣಾ ಆಯೋಗಕ್ಕೆ ನೀಡಿದ ರಾಜ್ಯ ಸರ್ಕಾರಿ ವಾಹನ ಚಾಲಕರ ಸಂಘ
ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರುಗಳ ಸುರಿಮಳೆ ಬರುತ್ತಿದೆ. ಅದರಂತೆ ಪೊಲೀಸರು ಮತ್ತು ಆರ್ಟಿಓ ಅಧಿಕಾರಿಗಳ ವಿರುದ್ದ ರಾಜ್ಯ ಸರ್ಕಾರಿ ವಾಹನ ಚಾಲಕರ ಸಂಘವು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election)ಹತ್ತಿರ ಬರುತ್ತಿದ್ದ ಹಾಗೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರುಗಳ ಸುರಿಮಳೆ ಬರುತ್ತಿದೆ. ಈಗಾಗಲೇ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ಚುನಾವಣಾ ಅಕ್ರಮ ತಡೆಯಲು ನೀತಿ ಸಂಹಿತೆ ಜಾರಿಯಾಗಿದೆ. ಅದರಂತೆ ಇದೀಗ ಪೊಲೀಸರು(Police) ಮತ್ತು ಆರ್ಟಿಓ(RTO) ಅಧಿಕಾರಿಗಳು ಚೆಕ್ಪೋಸ್ಟ್ ನಿರ್ಮಿಸಿ ಬೀಗಿ ಬಂದೋಬಸ್ತ್ ಮಾಡುತ್ತಿದ್ದಾರೆ. ಆದರೀಗ ಅವರ ವಿರುದ್ದ ರಾಜ್ಯ ಸರ್ಕಾರಿ ವಾಹನ ಚಾಲಕರ ಸಂಘವು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ನಮ್ಮ ಮೇಲೆ ದೈಹಿಕ ದೌರ್ಜನ್ಯದ ಜೊತೆಗೆ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ ಎಂದು ಎಂದು ಕಿಡಿಕಾರಿದ್ದಾರೆ. ಹೌದು ಕಾನೂನಿನ ಪ್ರಕಾರ ಚುನಾವಣಾ ಸಮಯದಲ್ಲಿ ಸರ್ಕಾರಿ ವಾಹನಗಳ ಸದ್ಬಳಕೆ ಆಗಬೇಕು. ಸಂಬಂಧ ಪಟ್ಟ ಇಲಾಖೆಯ ಮುಖ್ಯಸ್ಥರಿಗೆ ಪತ್ರ ಬರೆದು ಆ ಮೂಲಕ ವಾಹನ ಬಳಕೆ ಆಗಬೇಕು. ಅದು ಬಿಟ್ಟು ಏಕಾಏಕಿ ಗೂಂಡಾಗಳ ಹಾಗೇ ನಡು ರಸ್ತೆಯಲ್ಲಿ ವಾಹನಗಳ ವಶ ಪಡಿಸಿಕೊಳ್ಳುತ್ತಿದ್ದಾರೆ ಎಂದು ಚಾಲಕರು ಗರಂ ಆಗಿದ್ದಾರೆ.
ಅಯೋಮಯವಾದ ಸರ್ಕಾರಿ ಚಾಲಕರ ಪರಿಸ್ಥಿತಿ
ಚುನಾವಣಾ ಅಕ್ರಮ ತಡೆಯಲು ನೀತಿ ಸಂಹಿತೆ ಜಾರಿಯಾಗಿದೆ. ಅದರಂತೆ ಪೊಲೀಸರು ಎಲ್ಲಾ ಚೆಕ್ಪೋಸ್ಟ್ಗಳಲ್ಲಿ ಸರ್ಕಾರಿ ವಾಹನವನ್ನ ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೇ ಅವಾಚ್ಯ ಶಬ್ದಗಳಿಂದ ನಮ್ಮನ್ನು ನಿಂದನೆ ಮಾಡಿ ಅವಮಾನಿಸಿದ್ದಾರೆ ಎಂದು ಸರ್ಕಾರಿ ವಾಹನ ಚಾಲಕರು ಆರೋಪಿಸಿದ್ದಾರೆ. ಇತ್ತ ವಾಹನ ಕೊಟ್ಟಿಲ್ಲ ಅಂದರೆ ಪೊಲೀಸರು ಮತ್ತು ಆರ್ಟಿಓ ಅಧಿಕಾರಿಗಳು ಬಿಡಲ್ಲ. ವಾಹನ ಕೊಟ್ಟರೆ ನಮ್ಮ ಇಲಾಖೆ ಮತ್ತು ಅಧಿಕಾರಿಗಳಿಂದ ನಮಗೆ ಶಿಕ್ಷೆ ಕಟ್ಟಿಟ್ಟಬುತ್ತಿ. ಹೌದು ‘ದಯವಿಟ್ಟು ಖಾಸಗಿ ವಾಹನಗಳನ್ನು ಬಳಸಿಕೊಳ್ಳಿ ನಮ್ಮನ್ನು ಬಿಟ್ಟು ಬಿಡಿ ಎಂದು ಎಲೆಕ್ಷನ್ ಕಮೀಷನ್ಗೆ ಪತ್ರ ಬರೆಯುವ ಮೂಲಕ ರಾಜ್ಯ ಸರ್ಕಾರ ಹಾಗೂ ಸ್ವಾಮ್ಯ ಸಂಘ ಸಂಸ್ಥೆಗಳ ವಾಹನ ಚಾಲಕರ ಒಕ್ಕೂಟದ ಅಧ್ಯಕ್ಷ ವೇಣುಗೋಪಾಲ್ ಮನವಿ ಮಾಡಿದ್ದಾರೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:48 am, Wed, 5 April 23