ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ಹಾಗೂ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ

ಗಾಣಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮವನ್ನು ಸ್ಥಾಪಿಸಲು ಹಾಗೂ ಈಡಿಗ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ಹಾಗೂ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ
ಬಸವರಾಜ ಬೊಮ್ಮಾಯಿ
Follow us
ಆಯೇಷಾ ಬಾನು
|

Updated on:Feb 20, 2023 | 4:53 PM

ಬೆಂಗಳೂರು: ಗಾಣಿಗ ಅಭಿವೃದ್ಧಿ ನಿಗಮ ಹಾಗೂ ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗಾಣಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮವನ್ನು ಸ್ಥಾಪಿಸಲು ಹಾಗೂ ಈಡಿಗ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

“ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಫೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಇನ್ನೆರಡು ದಿನಗಳಲ್ಲಿ ನಾರಾಯಣ ಗುರು ನಿಗಮ ರಚನೆ; ಟ್ವೀಟ್ ಮೂಲಕ ಬಿಲ್ಲವ ಸಮುದಾಯಕ್ಕೆ ಸಚಿವ ಕೋಟ ಶ್ರೀನಿವಾಸ್ ಭರವಸೆ

ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದ ಹಿಂದುಳಿದ ಜಾತಿಗಳ ಪೈಕಿ‌ ಒಂದಾಗಿರುವ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಸಾರಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕೆಂಬುದು ಸಮುದಾಯದ ಬಹುಕಾಲದ ಬೇಡಿಕೆಯಾಗಿತ್ತು. ಸಮುದಾಯದ ಈ ಬೇಡಿಕೆ ಈಡೇರಿಕೆಗಾಗಿ ಕೆಲ ದಿನಗಳ ಹಿಂದಷ್ಟೇ ಸಚಿವ ವಿ ಸುನಿಲ್ ಕುಮಾರ್ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಸ್ವಾಮೀಜಿಗಳು ಮತ್ತು ಸಮುದಾಯದ ಮುಖಂಡರ ಜೊತೆ ಭೇಟಿಯಾಗಿ ನಿಗಮ ಸ್ಥಾಪನೆಗೆ ಮನವಿ ಸಲ್ಲಿಸಿದ್ದರು. ಬಜೆಟ್ ನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಿಎಂ ಬೊಮ್ಮಾಯಿ ನೀಡಿದ ಭರವಸೆ ಈಗ ಕಾರ್ಯ ರೂಪಕ್ಕೆ ಬಂದಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಇಂಧನ ಮತ್ತು ಕನ್ನಡ ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್, ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸ್ಪಂದಿಸುವ ಮೂಲಕ ಸರ್ಕಾರ ನುಡಿದಂತೆ ನಡೆದಿದೆ. ಇದಕ್ಕಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:41 pm, Mon, 20 February 23