13 ಸದಸ್ಯರನ್ನೊಳಗೊಂಡ ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪನೆ; ರಾಜ್ಯ ಸರ್ಕಾರ ಆದೇಶ

ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರ ಜೈವಿಕ ಸಂಪನ್ಮೂಲಗಳ ಪ್ರಾಥಮಿಕ ಹಾಗೂ ಉಪ ಉತ್ಪನ್ನಗಳನ್ನು ಕಚ್ಛಾ ವಸ್ತುವಾಗಿ ಬಳಸಿಕೊಂಡು ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡ್ ಮೂಲಕ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಲಾಗಿದೆ.

13 ಸದಸ್ಯರನ್ನೊಳಗೊಂಡ ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪನೆ; ರಾಜ್ಯ ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on:Jan 19, 2022 | 8:42 PM

ಬೆಂಗಳೂರು: 13 ಸದಸ್ಯರನ್ನೊಳಗೊಂಡ ಸೆಕೆಂಡರಿ ಅಗ್ರಿಕಲ್ಚರ್ (Secondary Agriculture) ನಿರ್ದೇಶನಾಲಯ ಸ್ಥಾಪಿಸಿ ರಾಜ್ಯ ಸರ್ಕಾರ(State Government) ಆದೇಶ ನೀಡಿದೆ. ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರ ಜೈವಿಕ ಸಂಪನ್ಮೂಲಗಳ ಪ್ರಾಥಮಿಕ ಹಾಗೂ ಉಪ ಉತ್ಪನ್ನಗಳನ್ನು ಕಚ್ಛಾ ವಸ್ತುವಾಗಿ ಬಳಸಿಕೊಂಡು ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡ್ ಮೂಲಕ ಮಾರುಕಟ್ಟೆ(Market) ಕಲ್ಪಿಸುವ ಉದ್ದೇಶದಿಂದ ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಲಾಗಿದೆ. ಇಂದು ಕೃಷಿ ಇಲಾಖೆಯ ನಿರ್ದೇಶಕರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೃಷಿ ಸಚಿವ ಬಿ.ಸಿ. ಪಾಟೀಲರೊಂದಿಗೆ ಸಮಿತಿಯಲ್ಲಿ ಚರ್ಚಿಸಿ ನೀಡಿದ ಭರವಸೆಯಂತೆ ನಿರ್ದೇಶನಾಲಯ ಸ್ಥಾಪಿಸಲಾಗಿದೆ.

ಸೆಕೆಂಡರಿ ಅಗ್ರಿಕಲ್ಚರ್ ಎಂದರೆ ಏನು?

ಗ್ರಾಮೀಣ ಮಟ್ಟದಲ್ಲಿ ಗುಡಿ ಕೈಗಾರಿಕೆ ಎಂದು ಪರಿಗಣಿಸಬಹುದಾದ ಚಟುವಟಿಕೆಯು ಸ್ಥಳೀಯ ಮತ್ತು ಸುತ್ತಮುತ್ತಲಿನ ರೈತರ ಆರ್ಥಿಕ ಮಟ್ಟ ಹೆಚ್ಚಳಕ್ಕೆ ಕೊಡುಗೆ ನೀಡುತ್ತದೆ ಇದನ್ನು ಸೆಕೆಂಡರಿ ಕೃಷಿ ಎಂದು ಕರೆಯುತ್ತಾರೆ. ಸ್ಥಳೀಯವಾಗಿ ಲಭ್ಯವಾಗುವ ಮೂಲ ಹಾಗೂ ಕಚ್ಚಾ ವಸ್ತುಗಳ್ನು ಮಾನವ ಶಕ್ತಿ ಕೌಶಲ್ಯಗಳ ಮೂಲವಾಗಿ ಸದಯೋಗಪಡಿಸಿಕೊಂಡು ಅಳವಡಿಸುವ ಸಮಗ್ರ ಚಟುವಟಿಕೆಗಳನ್ನು ಸೆಕೆಂಡರಿ ಕೃಷಿ ಎಂದು ಪರಿಗಣಿಸಬಹುದು. ಜೈವಿಕ ಗೊಬ್ಬರ ಘಟಕಗಳು, ಜೇನು ಸಾಕಣೆ, ಅಣಬೆ, ರೇಷ್ಮೆ ಹುಳು ಸಾಕಣೆ, ಸಾವಯವ ಬಣ್ಣ ಅಥವಾ ಡೈ ತಯಾರಿಕೆ, ನರ್ಸರಿ ಇತ್ಯಾದಿಗಳಂತಹ ಸಣ್ಣ ಪ್ರಮಾಣದ ಚಟುವಟಿಕೆಗಳು ಸೆಕೆಂಡರಿ ಕೃಷಿಗೆ ಉತ್ತಮ ಉದಾಹರಣೆಯಾಗಿದೆ. ಸ್ಥಳೀಯವಾಗಿ ಲಭ್ಯವಾಗುವ ಮೂಲ ಅಥವಾ ಕಚ್ಛಾ ವಸ್ತುಗಳನ್ನು ಮಾನವ ಶಕ್ತಿಯನ್ನು ಸದುಪಯೋಗಪಡಿಸಿಕೊಂಡು ಅಳವಡಿಸುವ ಸಮಗ್ರ ಚಟುವಟಿಕೆಯಾಗಿರುತ್ತದೆ.

ಬೀದರ್: ತೋಟಗಾರಿಕಾ ಕಾಲೇಜಿನಲ್ಲಿ ಕೃಷಿ ಪ್ರಾಯೋಗಿಕ ಕಲಿಕೆ

ಬೀನ್ಸ್, ಹಾಗಲಕಾಯಿ, ಟೊಮೆಟೊ, ಸೊಪ್ಪು ಅಬ್ಬಬ್ಬಾ.. ಒಂದಾ.. ಎರಡಾ.. ಹತ್ತಾರು ಬೆಳೆಗಳು. ಪ್ರಾಯೋಗಿಕ ಕಲಿಕೆಯಲ್ಲೇ ವಿದ್ಯಾರ್ಥಿಗಳು ರೈತರಾಗಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಬೀದರ್ ನ ತೋಟಗಾರಿಕಾ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳು ಭಾರಿ ಸದ್ದು ಮಾಡ್ತಿದ್ದಾರೆ. ತರಕಾರಿ, ಹೂವಿನ ಗಿಡ ಬೆಳೆಸಿ, ಫಲ ಬಂದ ಮೇಲೆ ಮಾರಾಟ ಮಾಡಿ, ಹಣಗಳಿಸುತ್ತಿದ್ದಾರೆ. ತರಕಾರಿ ಬೆಳೆಯುವುದರ ಜೊತೆಗೆ ಫಲಕೊಡುವ ಸಸಿಗಳನ್ನೇ ಬೆಳೆಸಿ, ಅವುಗಳನ್ನು ರೈತರಿಗೆ ಮಾರಾಟ ಮಾಡಿ ಜೇಬು ತುಂಬಿಸಿಕೊಳ್ತಿದ್ದಾರೆ. ಈ ಮೂಲಕ ಕಾಲೇಜಿನ ಕಲಿಯುತ್ತಲೇ ಗಳಿಸುತ್ತಾ, ಬದುಕಿನಲ್ಲಿ ಸ್ವಾವಲಂಬಿಗಳಾಗಿ ಬದುಕಲು ಕಾಲೇಜಿನ ಪ್ರಾಧ್ಯಾಪಕರು ಇವರಿಗೆ ತರಬೇತಿ ನೀಡುತ್ತಿದ್ದಾರೆ.

ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಬೀದರ್ ತೋಟಗಾರಿಕಾ ಕಾಲೇಜಿನ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ 6 ತಿಂಗಳ ಪ್ರಾಯೋಗಿಕ ಕಲಿಕೆ ಕಡ್ಡಾಯ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿರುವ ಹೊಲದಲ್ಲಿ ಜೊತೆಗೆ ಪಾಲಿಹೌಸ್‌ನಲ್ಲಿ ಬೆಳೆ ಬೆಳೆಯುತ್ತಾರೆ. ಪಾಲಕ್ ಸೋಪ್ಪು, ಹಿರೇಕಾಯಿ, ಬದನೆ, ಬೆಂಡಿಕಾಯಿ, ಹೂಕೊಸು, ಟೊಮ್ಯಾಟೊ, ಸೀತಾಫಲ, ಕರಿಬೇವು, ಸೇವಂತಿಗೆ ಹೀಗೆ ವಿವಿಧ ಬಗೆಯ ತರಕಾರಿ ಬೆಳೆದು ಅದನ್ನ ಮಾರಾಟ ಮಾಡುತ್ತಾರೆ. ಬಂದ ಆದಾಯದಲ್ಲಿ ಶೇ.75 ರಷ್ಟು ಹಣವನ್ನ ತಾವಿಟ್ಟುಕೊಂಡು ಇನ್ನುಳಿದ ಶೇ.25 ರಷ್ಟು ಹಣವನ್ನ ಕಾಲೇಜಿಗೆ ಕೊಡುತ್ತಾರೆ. ವಿದ್ಯಾರ್ಥಿಗಳು ಬೆಳೆದ ಈ ತರಹೇವಾರಿ ಗಿಡಗಳಿಗೆ ಭಾರಿ ಬೇಡಿಕೆ ಬಂದಿದೆ.

ಇನ್ನು, ವಿವಿಧ ಬಗೆಯ ಸಸಿ ತಯಾರಿಸಿ ಮಾರಾಟ ಮಾಡೋದ್ರ ಜೊತೆಗೆ ಮಾರುಕಟ್ಟೆಯ ಜ್ಞಾನವನ್ನೂ ವಿದ್ಯಾರ್ಥಿಗಳು ಪಡೆಯುತ್ತಿದ್ದಾರೆ.. ಪದವಿ ಮುಗಿದ ಬಳಿಕ ಸರ್ಕಾರಿ ಕೆಲಸ ಸಿಗದಿದ್ರೂ ಕೂಡಾ ಸ್ವಾವಲಂಬಿಗಳಾಗಿ ಬದುಕಲು ವಿದ್ಯಾರ್ಥಿಗಳಿಗೆ ಇಲ್ಲಿ ತರಬೇತಿ ನೀಡಲಾಗ್ತಿದ್ದು, ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ: Covid19: ಬೆಂಗಳೂರು ಅಪಾರ್ಟ್​ಮೆಂಟ್​ನಲ್ಲಿ 27, ಹಾಸನ ಕಾಫಿತೋಟದಲ್ಲಿ 23 ಮಂದಿಗೆ ಕೊರೊನಾ ದೃಢ

ಬೀದರ್ ತೋಟಗಾರಿಕಾ ಕಾಲೇಜಿನಲ್ಲಿ ಕೃಷಿ ಪ್ರಾಯೋಗಿಕ ಕಲಿಕೆ; ರೈತರಂತೆ ಬೆಳೆ ಬೆಳೆದು ಹಣ ಸಂಪಾದಿಸಿದ ವಿದ್ಯಾರ್ಥಿಗಳು

Published On - 8:37 pm, Wed, 19 January 22

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ