ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ (Pourakarmikas) ಭರ್ತಿಗಾಗಿ 11,307 ಸಂಖ್ಯಾತಿರಿಕ್ತ ಹುದ್ದೆಗಳನ್ನು ಸೃಜಿಸಿ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. I.P.D ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಹೇಳಿದ್ದರು. ಇದಕ್ಕೂ ಮುನ್ನ ಬೆಂಗಳೂರಿನ ಆರ್. ಟಿ ನಗರದ ಸಿಎಂ ನಿವಾಸದ ಮುಂದೆ ಪೌರಕಾರ್ಮಿಕರು ಪ್ರತಿಭಟನೆ ಮಾಡಿದ್ದರು.
ಬೆಂಗಳೂರಿನಲ್ಲಿ 26 ಸಾವಿರ ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆದರೆ ಸರ್ಕಾರಕ್ಕೆ 8 ಸಾವಿರ ಕಾರ್ಮಿಕರನ್ನು ಖಾಯಂ ಮಾಡುವ ಅವಕಾಶವಿದೆ. ಆದರೆ ಸರ್ಕಾರ 1 ಸಾವಿರ ಪೌರಕಾರ್ಮಿಕರನ್ನ ಖಾಯಂ ಮಾಡಲಾಗಿದೆ. ಉಳಿದ 7 ಸಾವಿರ ಪೌರಕಾರ್ಮಿಕರ ಖಾಯಮಾತಿಗೆ ಒತ್ತಾಯ ಮಾಡಿದರು.
ಇದನ್ನೂ ಓದಿ: ರಾಜ್ಯದಲ್ಲಿರುವ 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು : ಸಿಎಂ ಬೊಮ್ಮಾಯಿ ಭರವಸೆ
ಈ ಹಿಂದ ವಿವಿಧ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ರಾಜ್ಯದಲ್ಲಿ ಹಲವು ಕಡೆ ಪ್ರತಿಭಟನೆ ಮಾಡಿದ್ದರು. ಬೆಂಗಳೂರಿನಲ್ಲಿ ಫ್ರೀಡಂಪಾರ್ಕ್ನಲ್ಲಿ ಕೂಡ ಅಹೋರಾತ್ರಿಯೂ ಧರಣಿ ನಡೆಸಿದ್ದು, ಲಿಖಿತ ರೂಪದ ಆದೇಶ ಪ್ರತಿ ಬಂದ ಬಳಿಕ ಧರಣಿ ಕೈಬಿಡುತ್ತೇವೆಂದು ಪ್ರತಿಭಟನಕಾರರು ಹೇಳಿದ್ದರು.
ಆಗ ಸಿಎಂ ಬಸವರಾಜ ಬೊಮ್ಮಾಯಿ, ಪೌರಕಾರ್ಮಿಕರ ಜೊತೆಗೆ ಎಲ್ಲಾ ಮಾತನಾಡಿದ್ದೇನೆ. ಸಹಾನುಭೂತಿಯಿಂದ ಮಾನವೀಯತೆಯಿಂದ ಕ್ರಮಕೈಗೊಂಡು ಹೊಸ ಕಾನೂನು ಮಾಡಬೇಕು ಎಂದು ಅಂದುಕೊಂಡಿದ್ದೇವೆ. 3 ತಿಂಗಳಲ್ಲಿ ಯಾವ ರೀತಿ ನೇಮಕಾತಿ ಮಾಡಬೇಕೆಂದು ಚರ್ಚೆ ಮಾಡುತ್ತೇವೆ. ಪೌರ ಕಾರ್ಮಿಕರು, ಅಧಿಕಾರಿಗಳ ಜಂಟಿ ಸಮಿತಿ ಮಾಡಿದ್ದೇವೆ. ಪೌರಕಾರ್ಮಿಕರ ಸಂರಕ್ಷಣೆ, ಹೆಲ್ತ್, ಶಿಕ್ಷಣದ ಬಗ್ಗೆ ಕಾನೂನು ಕಾನೂನನ್ನು ರಚನೆ ಮಾಡಬೇಕು. ಮುಂದಿನ ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.