AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರ ಕಾಂತರಾಜ್ ವರದಿ ಸ್ವೀಕರಿಸಿ ಬಿಡುಗಡೆ ಮಾಡಬೇಕು: ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಒತ್ತಾಯ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಾತನಾಡಿದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ರಾಜ್ಯ ಸರ್ಕಾರ ಕಾಂತರಾಜ್ ವರದಿ ಸ್ವೀಕರಿಸಿ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಒತ್ತಾಯಿಸಿದ್ದಾರೆ. ಇದರಿಂದ ಭೋವಿ ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದಿದ್ದಾರೆ.

ರಾಜ್ಯ ಸರ್ಕಾರ ಕಾಂತರಾಜ್ ವರದಿ ಸ್ವೀಕರಿಸಿ ಬಿಡುಗಡೆ ಮಾಡಬೇಕು: ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಒತ್ತಾಯ
ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ
Anil Kalkere
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 15, 2024 | 10:30 PM

Share

ಬೆಂಗಳೂರು, ಜನವರಿ 15: ರಾಜ್ಯ ಸರ್ಕಾರ ಕಾಂತರಾಜ್ ವರದಿ ಸ್ವೀಕರಿಸಿ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ (Immadi Siddharameshwara swamiji) ಒತ್ತಾಯಿಸಿದ್ದಾರೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದರಿಂದ ಭೋವಿ ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಆದಷ್ಟು ಶೀಘ್ರವಾಗಿ ವರದಿ ಸ್ವೀಕಾರ ಮಾಡಿ, ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಭೋವಿ ಸಮುದಾಯದವರಿಗೆ ಈ ಬಾರಿಯ ಲೋಕಸಭಾ ಟಿಕೆಟ್ ನೀಡಲೇಬೇಕು. ಸಮುದಾಯದ ಒಬ್ಬರನ್ನ ಕೆಪಿಎಸ್​ಸಿ ಮೆಂಬರ್ ಮಾಡಬೇಕು. ಈಗಾಗಲೇ ಒಬ್ಬರ ಹೆಸರನ್ನ ಸರ್ಕಾರ ರಾಜ್ಯಪಾಲರಿಗೆ ಕಳುಹಿಸಿದೆ ಎಂಬ ಮಾಹಿತಿ ಇದೆ. ನಮ್ಮ ಸಮುದಾಯಕ್ಕೆ ಸಿದ್ದರಾಮಯ್ಯ ಅವರೇ ಈಗ ಸಿದ್ದರಾಮೇಶ್ವರ ಆಗಿದ್ದಾರೆ ಎಂದು ಹೇಳಿದ್ದಾರೆ.

ಯಾವುದೇ ಕೆಲಸವೂ ಮೇಲಲ್ಲ, ಯಾವುದೇ ಕೆಲಸವೂ ಕೀಳಲ್ಲ: ಸಿಎಂ ಸಿದ್ದರಾಮಯ್ಯ

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಲ್ಲು ಒಡೆಯುವವರು, ಗುಡಿ ಕಟ್ಟುವವರು, ವಿಗ್ರಹ ಹೊರುವವರು ನೀವು. ಆದರೆ ದೇವಸ್ಥಾನ ಪ್ರವೇಶಕ್ಕೆ ಭೋವಿ ಸಮುದಾಯದವರಿಗೆ ಅವಕಾಶವಿಲ್ಲ. ನಾರಾಯಣಗುರುಗಳು ಹೇಳಿದ ಮಾರ್ಗವನ್ನು ನೀವೆಲ್ಲರೂ ಅನುಸರಿಸಬೇಕು. ನಿಮ್ಮನ್ನು ಒಳಗೆ ಸೇರಿಸದ ದೇವಸ್ಥಾನಗಳನ್ನು ನೀವೇ ತಿರಸ್ಕರಿಸಿ ಎಂದಿದ್ದಾರೆ.

ಇದನ್ನೂ ಓದಿ: ಜೀವ ಬೆದರಿಕೆ ಇದ್ದರೆ ಪ್ರಧಾನಿ ಮೋದಿಗೆ ಪತ್ರ ಬರೆಯಲಿ: ಸಂಸದ ಸಿದ್ದೇಶ್ವರ್​ ಸ್ವಪಕ್ಷದ ನಾಯಕ ಟಾಂಗ್

ನಿಮ್ಮದೇ ಆದ ದೇವಸ್ಥಾನಗಳನ್ನ ನಿರ್ಮಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಯಾವುದೇ ಕೆಲಸವೂ ಮೇಲಲ್ಲ, ಯಾವುದೇ ಕೆಲಸವೂ ಕೀಳಲ್ಲ, ಇದೇ ಕಾರಣಕ್ಕೆ ಕಾಯಕವೇ ಕೈಲಾಸ ಅಂತಾ ಶರಣರು ಹೇಳಿದ್ದಾರೆ. ಎಲ್ಲರೂ ಉತ್ಪಾದನೆಯಲ್ಲಿ ಭಾಗವಹಿಸಬೇಕು, ಎಲ್ಲರಿಗೂ ವಿತರಿಸಬೇಕು. ನಮ್ಮ ಸರ್ಕಾರದ ಕಾರ್ಯಕ್ರಮಗಳೂ ಇದೇ ಆಶಯಕ್ಕೆ ಪೂರಕವಾಗಿವೆ. ಸಾಮಾಜಿಕ, ಆರ್ಥಿಕ ಚಟುವಟಿಕೆಗಳು ಎಲ್ಲಾ ಸಮುದಾಯಕ್ಕೆ ಸಿಗಬೇಕು. ಭೋವಿ ಸಮುದಾಯದ ಬೇಡಿಕೆಯಂತೆ ಅಧ್ಯಯನ ಪೀಠ ಸ್ಥಾಪಿಸುತ್ತೇವೆ. ನನ್ನ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತೇನೆ ಎಂದು ಹೇಳಿದ್ದಾರೆ.

ಭೋವಿ ಸಮುದಾಯಕ್ಕೆ ಲೋಕಸಭಾ ಟಿಕೆಟ್ ನೀಡುವಂತೆ ಡಿಮ್ಯಾಂಡ್ ಮಾಡಿದ ಸಚಿವ ಶಿವರಾಜ್ ತಂಗಡಗಿ

ಭೋವಿ ಸಮುದಾಯಕ್ಕೆ ಒಂದು ಲೋಕಸಭಾ ಟಿಕೆಟ್ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ವೇದಿಕೆ ಮೇಲೆ ಸಚಿವ ಶಿವರಾಜ್ ತಂಗಡಗಿ ಡಿಮ್ಯಾಂಡ್ ಮಾಡಿದ್ದಾರೆ. ಇಂದಿರಾ ಗಾಂಧಿ ಅವರ ಕಾಲದಲ್ಲಿ ಭೋವಿ ಸಮುದಾಯದವರಿಗೆ ಲೋಕಸಭಾ ಸದಸ್ಯರು ಆಗುತ್ತಿದ್ದರು. ಕೇಂದ್ರದಲ್ಲಿ ಮಂತ್ರಿಯನ್ನು ಮಾಡುತ್ತಿದ್ದರು. ಆದರೆ ಈಗ ನಮ್ಮ ಸಮುದಾಯದವರಿಗೆ ಟಿಕೆಟ್ ಕೊಡುತ್ತಿಲ್ಲ. ಈ ಬಾರಿಯ ಚುನಾವಣೆಗೆ ನಮ್ಮ ಸಮುದಾಯಕ್ಕೆ ಒಂದು ಲೋಕಸಭಾ ಟಿಕೆಟ್ ಕೊಡಿ ಎಂದಿದ್ದಾರೆ.

ಎಲ್ಲಿಯಾದರು ಟಿಕೆಟ್ ಕೊಡಿ, ನಮ್ಮ ಸಮುದಾಯದವರೆಲ್ಲಾ ಅಲ್ಲಿಗೆ ಹೋಗಿ ಕೆಲಸ ಮಾಡುತ್ತೇವೆ ಗೆದ್ದೇ ಗೆಲ್ಲಿಸುತ್ತೇವೆ. ಇದರ ಜೊತೆಗೆ ನಮ್ಮ ಸಮುದಾಯದ ಒಬ್ಬರನ್ನ KPSC ಮೆಂಬರ್ ಮಾಡಬೇಕು. ಸಿಎಂ ಸಿದ್ದರಾಮಯ್ಯ ಮೂರನೇ ಬಾರಿಗೂ ಮುಖ್ಯಮಂತ್ರಿ ಆಗಬೇಕು ಅನ್ನೋದು ನಮ್ಮ ಸಮುದಾಯದ ಆಸೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ