105 ಶಾಲೆಗಳನ್ನು ದತ್ತು ಪಡೆಯಲು ಸತ್ವಂ ಕನ್ಸಲ್ಟಿಂಗ್ ಸಂಸ್ಥೆ ಜೊತೆ ರಾಜ್ಯ ಸರ್ಕಾರ ಒಪ್ಪಂದ

ಮೆ. ಸತ್ವಂ ಕನ್ಸಲ್ಟಿಂಗ್ ಸಂಸ್ಥೆಯು ಶಾಲಾ ಶಿಕ್ಷಣ ಇಲಾಖೆಯ 105 ಶಾಲೆಗಳನ್ನು ದತ್ತು ಪಡೆಯುವ ಒಪ್ಪಂದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಸಹಿ ಹಾಕಲಾಯಿತು.

105 ಶಾಲೆಗಳನ್ನು ದತ್ತು ಪಡೆಯಲು ಸತ್ವಂ ಕನ್ಸಲ್ಟಿಂಗ್ ಸಂಸ್ಥೆ ಜೊತೆ ರಾಜ್ಯ ಸರ್ಕಾರ ಒಪ್ಪಂದ
ಶಾಲಾ ಮಕ್ಕಳು (ಸಂಗ್ರಹ ಚಿತ್ರ)
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Sep 21, 2022 | 10:19 PM

ಬೆಂಗಳೂರು: ಮೆ. ಸತ್ವಂ ಕನ್ಸಲ್ಟಿಂಗ್ ಸಂಸ್ಥೆಯು ಶಾಲಾ (schools) ಶಿಕ್ಷಣ ಇಲಾಖೆಯ 105 ಶಾಲೆಗಳನ್ನು ದತ್ತು ಪಡೆಯುವ ಒಪ್ಪಂದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಸಹಿ ಹಾಕಲಾಯಿತು. ರೇಸ್ ಕೋರ್ಸ್ ಸರ್ಕಾರಿ ನಿವಾಸದಲ್ಲಿ ಈ ಕುರಿತು ಮಾತುಕತೆ ನಡೆದಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್, ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಸತ್ವಂ ಸಂಸ್ಥೆಯ ಸಿಇಒ ಶ್ರೀಕೃಷ್ಣ ಮತ್ತು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕಿ ಬಿ.ಬಿ.ಕಾವೇರಿ ಉಪಸ್ಥಿತರಿದ್ದರು.

ಉದ್ಯಮಿಗಳು ದೇಣಿಗೆ ನೀಡಿ ತೃಪ್ತರಾಗಬಾರದು: ಸಿಎಂ ಬೊಮ್ಮಾಯಿ 

ಉದ್ಯಮಿಗಳು ದೇಣಿಗೆ ನೀಡಿ ತೃಪ್ತರಾಗಬಾರದು. ಸರ್ಕಾರಿ ಕಾಲೇಜುಗಳಿಗೆ ಭೇಟಿ ನೀಡಿ ಅನುಭವ ಹಂಚಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಮಾತನಾಡಿದ ಅವರು ತಮ್ಮ ಅನುಭವ ಹಂಚಿಕೊಂಡ್ರೆ ಮಕ್ಕಳ ಆತ್ಮವಿಶ್ವಾಸ ಹೆಚ್ಚುತ್ತದೆ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಂದ ಬರುವ ಮಕ್ಕಳ ಆತ್ಮವಿಶ್ವಾಸ ಹೆಚ್ಚುತ್ತದೆ. ಸುಂದರ ಸಮಾಜ ಸೃಷ್ಟಿಸುವ ಕೆಲಸಕ್ಕೆ ಎಲ್ಲರೂ ಹೆಗಲು ನೀಡಬೇಕು. ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಸಾಮಾಜಿಕ ನ್ಯಾಯ ಪಾಲಿಸಬೇಕಾಗುತ್ತೆ.

ಆಗ ಮಾತ್ರ ಸಮಾನತೆಯ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳಬಹುದು. ಉದ್ಯಮಿಗಳು ಸಮಾಜದ ಬಗ್ಗೆ ಕಳಕಳಿ ಇಟ್ಟುಕೊಳ್ಳಬೇಕು. ಕಳಕಳಿ ಇಟ್ಟುಕೊಂಡು ದುರ್ಬಲರ ಏಳಿಗೆಗೆ ಮುಂದಾಗಬೇಕು. ಸರ್ಕಾರಿ ಕಾಲೇಜುಗಳು ಕೂಡ ನಮಗೆ ಸೇರಿದ್ದು ಎನ್ನುವ ಅಭಿಮಾನ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಬೊಮ್ಮಾಯಿ ಕರೆ ನೀಡಿದರು.

22 ಕಾಲೇಜುಗಳ ಅಭಿವೃದ್ಧಿಗೆ ಉದ್ಯಮಿಗಳ ಒಲವು:

ಇನ್ನೂ ಸಮಾವೇಶದಲ್ಲಿ 22 ಸರಕಾರಿ ಡಿಗ್ರಿ ಕಾಲೇಜುಗಳ ಅಭಿವೃದ್ಧಿಗೆ ವಿವಿಧ ಉದ್ಯಮಿಗಳು ಒಲವು ತೋರಿದ್ದಾರೆ. ಮುಂಬರುವ ದಿನಗಳಲ್ಲಿ ರಾಜ್ಯದ ಉಳಿದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೂ ನೆರವು ನೀಡುವ ಭರವಸೆ ನೀಡಲಾಗಿದೆ. ಶೌಚಾಲಯ, ಪ್ರಯೋಗಾಲಯ, ಗ್ರಂಥಾಲಯ ಮತ್ತು ಇತರ ಸಾಧನ ಸಲಕರಣೆಗಳ ವ್ಯವಸ್ಥೆಗೆ ಸಹಕಾರ ನೀಡಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:13 pm, Wed, 21 September 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್