ಕರ್ನಾಟಕ ಛತ್ರ ನಿರ್ಮಾಣ ಮತ್ತು ದೇವಸ್ಥಾನ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ
ಶೃಂಗೇರಿ ಶಾರದಾಂಬಾ ದೇವಸ್ಥಾನ ಸೇರಿದಂತೆ ಕೆಲ ಪ್ರಮುಖ ದೇವಸ್ಥಾನಗಳಲ್ಲಿ ಛತ್ರ ಮತ್ತು ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.
ಬೆಂಗಳೂರು: ರಾಜ್ಯದ ಕೆಲ ಪ್ರಮುಖ ಪ್ರಸಿದ್ಧ ದೇವಸ್ಥಾನಗಳಲ್ಲಿ ಛತ್ರ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಶಬರಿಮಲೆ, ಮಂತ್ರಾಲಯ, ಸವದತ್ತಿಯ ರೇಣುಕಾ ಯಲ್ಲಮ್ಮ, ಶೃಂಗೇರಿ ಶಾರದಾಂಬಾ ದೇವಸ್ಥಾನ ಸೇರಿದಂತೆ ಕೆಲ ಪ್ರಮುಖ ದೇವಸ್ಥಾನಗಳಲ್ಲಿ ಛತ್ರ ಮತ್ತು ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.
ಸರ್ಕಾರ ಅನುದಾನ ಬಿಡಿಗಡೆ ಮಾಡಿದ ದೇವಸ್ಥಾನಗಳು
- ಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣ ಮಾಡುವುದಕ್ಕೆ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.
- ಮಂತ್ರಾಲಯ ಛತ್ರ ಅಭಿವೃದ್ದಿಗೆ ರಾಜ್ಯ ಸರ್ಕಾರದಿಂದ 4 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ.
- ಮಹಾರಾಷ್ಟ್ರದ ಪಂಡರಾಪುರದಲ್ಲಿರುವ ಕರ್ನಾಟಕ ಛತ್ರಕ್ಕೆ 3 ಕೋಟಿ ರೂ. ಮತ್ತು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿರುವ ಸಿದ್ಧಗಿರಿ ಮಠಕ್ಕೆ 3 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ.
- ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ 3 ಕೋಟಿ ರೂ ಬಿಡುಗಡೆ.
- ಕಲ್ಬುರ್ಗಿ ಜಿಲ್ಲೆಯ ಗಾಣಗಾಪುರ ದತ್ತಾತ್ರೇಯಸ್ವಾಮಿ ದೇವಾಲಯಕ್ಕೆ 3 ಕೋಟಿ ರೂ. ಬಿಡುಗಡೆ
- ಕುಣಿಗಲ್ ತಾಲೂಕಿನ ಯಡಿಯೂರು ಸಿದ್ಧಲಿಂಗೇಶ್ವರಸ್ವಾಮಿ ದೇವಾಲಯಕ್ಕೆ 3 ಕೋಟಿ ರೂ.
- ಶೃಂಗೇರಿ ಶಾರದಾಂಬಾ ದೇವಸ್ಥಾನಕ್ಕೆ 3 ಕೋಟಿ ರೂ. ಹಾಗೂ
- ಹೂವಿನ ಹಡಗಲಿ ತಾಲೂಕಿನ ಮೈಲಾರ ಸಿದ್ಧಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ 3 ಕೋಟಿ ರೂ. ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
Published On - 8:17 pm, Wed, 3 August 22