AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2750.55 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದನೆ: ರಾಜ್ಯದಲ್ಲಿ ಒಟ್ಟು 8619 ಜನರಿಗೆ ಉದ್ಯೋಗವಕಾಶ ಸೃಷ್ಟಿ

50 ಕೋಟಿ ರೂ. ಗೂ ಹೆಚ್ಚು ಬಂಡವಾಳ ಹೂಡಿಕೆಯ ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇವುಗಳಿಂದ ರೂ. 1670.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 4000 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ ಎಂದು ಹೇಳಿದರು.

2750.55 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದನೆ: ರಾಜ್ಯದಲ್ಲಿ ಒಟ್ಟು 8619 ಜನರಿಗೆ ಉದ್ಯೋಗವಕಾಶ ಸೃಷ್ಟಿ
ಮುರುಗೇಶ್ ನಿರಾಣಿ
TV9 Web
| Updated By: ಆಯೇಷಾ ಬಾನು|

Updated on:Sep 03, 2022 | 10:01 PM

Share

ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ಯಮಿದಾರರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಒಟ್ಟು ₹ 2750.55 ಕೋಟಿ ರೂ. ಮೊತ್ತದ 53 ಯೋಜನೆಗಳಿಗೆ ಅನುಮೋದನೆ ನೀಡಿದೆ.

ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಶನಿವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ನಿರಾಣಿ ನೇತೃತ್ವದಲ್ಲಿ ನಡೆದ 134 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಯಿತು. ಒಟ್ಟು 53 ಯೋಜನೆಗಳಿಂದ 2750.55 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಇವುಗಳಿಂದ 8619 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದ್ದಾರೆ.

50 ಕೋಟಿ ರೂ. ಗೂ ಹೆಚ್ಚು ಬಂಡವಾಳ ಹೂಡಿಕೆಯ ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇವುಗಳಿಂದ ರೂ. 1670.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 4000 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ ಎಂದು ಹೇಳಿದರು. ಇದೇ ರೀತಿ 15 ಕೋಟಿ ರೂ. ಯಿಂದ ರೂ.50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 41 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಿಂದ 1062.01 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು ಅಂದಾಜು 4311 ಜನರಿಗೆ ಉದ್ಯೋಗಗಳು ಸೃಜನೆಯಾಗಲಿವೆ.

ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗೆ ಅನುಮೋದನೆ ನೀಡಿದ್ದು, ಇದರಿಂದ 17.85 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಒಟ್ಟು 53 ಯೋಜನೆಗಳಿಂದ ರೂ. 2750.55 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಇವುಗಳಿಂದ 8619 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ. ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಓ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಹೂಡಿಕೆ ಹಾಗೂ ಉದ್ಯೋಗಗಳು

ಉಕೇಮ್ ಅಗ್ರೀ ಇನ್ಪಾ ಲಿ. ₹497.95 ಕೋಟಿ ರೂ. ಹೂಡಿಕೆ ಮತ್ತು ಉದ್ಯೋಗ -425 ಸುಂದರಿ ಶುಗರ್ಸ್ ಲಿಮಿಟೆಡ್ – ₹402.24 ಕೋಟಿ ರೂ. ಹೂಡಿಕೆ ಮತ್ತು ಉದ್ಯೋಗ-270 ಎವರೆಸ್ಟ್ ಇಂಡಸ್ಟ್ರೀಸ್ ಲಿಮಿಟೆಡ್ ₹187 ಕೋಟಿ ರೂ. ಹೂಡಿಕೆ, ಉದ್ಯೋಗ-120 ಕೊಪ್ಪಳ ಟಾಯ್ಸ್ ಮೋಲ್ಡಿಂಗ್ ಕೋ ಪ್ರೈವೇಟ್ ಲಿಮಿಟೆಡ್-131.94 ಕೋಟಿ ರೂ.ಹೂಡಿಕೆ, ಉದ್ಯೋಗ-800 ಅಕ್ವೀಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್-118.27 ಕೋಟಿ ರೂ. ಹೂಡಿಕೆ, ಉದ್ಯೋಗ-485 ಕೆಆರ್ ಬಿಎಲ್ ಲಿಮಿಟೆಡ್-110.25 ಕೋಟಿ ರೂ. ಹೂಡಿಕೆ, ಉದ್ಯೋಗ-140 ಅಕ್ವೀಸ್ ಟಾಯ್ಸ್ ಪ್ರೈವೇಟ್ ಲಿಮಿಟೆಡ್ ಡಿಟಿಎ ಯುನಿಟ್- 72.58 ಕೋಟಿ ರೂ. ಹೂಡಿಕೆ, ಉದ್ಯೋಗ-550 ಹೆಲ್ಲಾ ಇನ್ಫ್ರಾ ಮಾರ್ಕೆಟ್ ಪ್ರೈವೇಟ್ ಲಿಮಿಟೆಡ್-71.66 ಕೋಟಿ ರೂ. ಹೂಡಿಕೆ, ಉದ್ಯೋಗ -1500 ಸಾವಿತ್ರಿ ಪ್ಲೈಬೋರ್ಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್- 49.86 ಕೋಟಿ ರೂ. ಹೂಡಿಕೆ, ಉದ್ಯೋಗ-515

Published On - 10:01 pm, Sat, 3 September 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​