2750.55 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದನೆ: ರಾಜ್ಯದಲ್ಲಿ ಒಟ್ಟು 8619 ಜನರಿಗೆ ಉದ್ಯೋಗವಕಾಶ ಸೃಷ್ಟಿ

50 ಕೋಟಿ ರೂ. ಗೂ ಹೆಚ್ಚು ಬಂಡವಾಳ ಹೂಡಿಕೆಯ ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇವುಗಳಿಂದ ರೂ. 1670.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 4000 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ ಎಂದು ಹೇಳಿದರು.

2750.55 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದನೆ: ರಾಜ್ಯದಲ್ಲಿ ಒಟ್ಟು 8619 ಜನರಿಗೆ ಉದ್ಯೋಗವಕಾಶ ಸೃಷ್ಟಿ
ಮುರುಗೇಶ್ ನಿರಾಣಿ
Edited By: ಆಯೇಷಾ ಬಾನು

Updated on: Sep 03, 2022 | 10:01 PM

ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ಯಮಿದಾರರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಒಟ್ಟು ₹ 2750.55 ಕೋಟಿ ರೂ. ಮೊತ್ತದ 53 ಯೋಜನೆಗಳಿಗೆ ಅನುಮೋದನೆ ನೀಡಿದೆ.

ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಶನಿವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ನಿರಾಣಿ ನೇತೃತ್ವದಲ್ಲಿ ನಡೆದ 134 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಯಿತು. ಒಟ್ಟು 53 ಯೋಜನೆಗಳಿಂದ 2750.55 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಇವುಗಳಿಂದ 8619 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದ್ದಾರೆ.

50 ಕೋಟಿ ರೂ. ಗೂ ಹೆಚ್ಚು ಬಂಡವಾಳ ಹೂಡಿಕೆಯ ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇವುಗಳಿಂದ ರೂ. 1670.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 4000 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ ಎಂದು ಹೇಳಿದರು. ಇದೇ ರೀತಿ 15 ಕೋಟಿ ರೂ. ಯಿಂದ ರೂ.50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 41 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಿಂದ
1062.01 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು ಅಂದಾಜು 4311 ಜನರಿಗೆ ಉದ್ಯೋಗಗಳು ಸೃಜನೆಯಾಗಲಿವೆ.

ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗೆ ಅನುಮೋದನೆ ನೀಡಿದ್ದು, ಇದರಿಂದ 17.85 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಒಟ್ಟು 53 ಯೋಜನೆಗಳಿಂದ ರೂ. 2750.55 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಇವುಗಳಿಂದ 8619 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ. ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಓ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಹೂಡಿಕೆ ಹಾಗೂ ಉದ್ಯೋಗಗಳು

ಉಕೇಮ್ ಅಗ್ರೀ ಇನ್ಪಾ ಲಿ. ₹497.95 ಕೋಟಿ ರೂ. ಹೂಡಿಕೆ ಮತ್ತು ಉದ್ಯೋಗ -425
ಸುಂದರಿ ಶುಗರ್ಸ್ ಲಿಮಿಟೆಡ್ – ₹402.24 ಕೋಟಿ ರೂ. ಹೂಡಿಕೆ ಮತ್ತು ಉದ್ಯೋಗ-270
ಎವರೆಸ್ಟ್ ಇಂಡಸ್ಟ್ರೀಸ್ ಲಿಮಿಟೆಡ್ ₹187 ಕೋಟಿ ರೂ. ಹೂಡಿಕೆ, ಉದ್ಯೋಗ-120
ಕೊಪ್ಪಳ ಟಾಯ್ಸ್ ಮೋಲ್ಡಿಂಗ್ ಕೋ ಪ್ರೈವೇಟ್ ಲಿಮಿಟೆಡ್-131.94 ಕೋಟಿ ರೂ.ಹೂಡಿಕೆ, ಉದ್ಯೋಗ-800
ಅಕ್ವೀಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್-118.27 ಕೋಟಿ ರೂ. ಹೂಡಿಕೆ, ಉದ್ಯೋಗ-485
ಕೆಆರ್ ಬಿಎಲ್ ಲಿಮಿಟೆಡ್-110.25 ಕೋಟಿ ರೂ. ಹೂಡಿಕೆ, ಉದ್ಯೋಗ-140
ಅಕ್ವೀಸ್ ಟಾಯ್ಸ್ ಪ್ರೈವೇಟ್ ಲಿಮಿಟೆಡ್ ಡಿಟಿಎ ಯುನಿಟ್- 72.58 ಕೋಟಿ ರೂ. ಹೂಡಿಕೆ, ಉದ್ಯೋಗ-550
ಹೆಲ್ಲಾ ಇನ್ಫ್ರಾ ಮಾರ್ಕೆಟ್ ಪ್ರೈವೇಟ್ ಲಿಮಿಟೆಡ್-71.66 ಕೋಟಿ ರೂ. ಹೂಡಿಕೆ, ಉದ್ಯೋಗ -1500
ಸಾವಿತ್ರಿ ಪ್ಲೈಬೋರ್ಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್- 49.86 ಕೋಟಿ ರೂ. ಹೂಡಿಕೆ, ಉದ್ಯೋಗ-515

Published On - 10:01 pm, Sat, 3 September 22

Web contact

TV9 Kannada

Read More
Follow Us