ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷನ ವಿರುದ್ಧ ಸಾಲು ಸಾಲು ಆರೋಪ; ಸರ್ಕಾರದಿಂದ ಮತ್ತೊಂದು ನೋಟಿಸ್

| Updated By: ಆಯೇಷಾ ಬಾನು

Updated on: Jul 26, 2023 | 3:43 PM

ಶಾಂತ ಎ ತಿಮ್ಮಯ್ಯ ಅವರ ವಿರುದ್ಧ ಎರಡು ಗಂಭೀರ ಆರೋಪಗಳು ಕೇಳಿಬಂದಿದ್ದು ಈ ಹಿಂದೆಯೇ ನೋಟಿಸ್ ಜಾರಿಯಾಗಿತ್ತು. ಈಗ ಮತ್ತೊಂದು ನೋಟಿಸ್ ಜಾರಿಯಾಗಿದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷನ ವಿರುದ್ಧ ಸಾಲು ಸಾಲು ಆರೋಪ; ಸರ್ಕಾರದಿಂದ ಮತ್ತೊಂದು ನೋಟಿಸ್
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಜುಲೈ 26: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಂತ ಎ ತಿಮ್ಮಯ್ಯ ಅವರ ವಿರುದ್ಧ ಸಾಲು ಸಾಲು ಆರೋಪಗಳು ಕೇಳಿ ಬಂದಿವೆ. ಈ ಹಿನ್ನಲೆ ಸರ್ಕಾರದಿಂದ ಕೆಎಸ್ ಪಿಸಿಬಿ ಚೇರ್ ಮನ್ ಗೆ ಮತ್ತೊಂದು ನೋಟಿಸ್ ನೀಡಲಾಗಿದೆ. ಶಾಂತ ಎ ತಿಮ್ಮಯ್ಯ ಅವರ ವಿರುದ್ಧ ಎರಡು ಗಂಭೀರ ಆರೋಪಗಳು ಕೇಳಿಬಂದಿದ್ದು ಈ ಹಿಂದೆಯೇ ನೋಟಿಸ್ ಜಾರಿಯಾಗಿತ್ತು. ಈಗ ಮತ್ತೊಂದು ನೋಟಿಸ್ ಜಾರಿಯಾಗಿದೆ.

ಶಾಂತ ಎ ತಿಮ್ಮಯ್ಯ ವಿರುದ್ಧ ಕಾನೂನು ಬಾಹಿರವಾಗಿ ಹುದ್ದೆ ಅಲಂಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಇದರ ಜೊತೆಗೆ ಮಂಡಳಿಯ ಪ್ರಚಾರಕ್ಕಾಗಿ ಜಾಹೀರಾತು ನೀಡುವಲ್ಲೂ 17 ಕೋಟಿ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಸರ್ಕಾರದಿಂದ ಈ ಹಿಂದೆಯೇ ನೋಟಿಸ್ ಜಾರಿಯಾಗಿತ್ತು. ಇದೀಗ ರಾಜ್ಯ ಸರ್ಕಾರ ಶಾಂತ ಎ ತಿಮ್ಮಯ್ಯಗೆ ಮತ್ತೊಂದು ನೋಟಿಸ್ ಜಾರಿ ಮಾಡಿದೆ. ಸರ್ಕಾರದ ಗಮನಕ್ಕೆ ತರದೇ ಸದಸ್ಯ ಕಾರ್ಯದರ್ಶಿ ಸೂರಿ ಪಾಯಲ್ ನೇಮಕ ಹಾಗೂ ಅವರನ್ನ ಕೆಲವೇ ದಿನಗಳಲ್ಲಿ ಆ ಹುದ್ದೆಯಿಂದ ತೆರುವುಗೊಳಿಸಿದ್ದಕ್ಕೆ ನೋಟಿಸ್ ನೀಡಿದೆ.

ಸರ್ಕಾರದ ಪೂರ್ವಾನುಮತಿ ಪಡೆಯದೇ ಪದೇ ಪದೇ ಸದಸ್ಯ ಕಾರ್ಯದರ್ಶಿಗಳ ನೇಮಕದ ಬಗ್ಗೆ ಹಾಗೂ ಕರ್ತವ್ಯಲೋಪವೆಸಗಿದ್ದು ಒಂದು ವಾರದೊಳಗೆ ಸ್ಪಷ್ಟ ಉತ್ತರ ನೀಡುವಂತೆ ಅರಣ್ಯಜೀವಿಪರಿಸ್ಥಿತಿ ಹಾಗೂ ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿಯಿಂದ ನೋಟಿಸ್ ಜಾರಿ ಮಾಡಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ