ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿ ಘೋಷಣೆ; ಬೆಂಗಳೂರಿನ ಐವರಿಗೆ ಪ್ರಶಸ್ತಿ
ಪ್ರತಿ ವರ್ಷದಂತೆ 2023-2024ನೇ ಸಾಲಿನ ಕೆಯುಡಬ್ಲ್ಯೂಜೆ ದತ್ತಿ ನಿಧಿ ಪ್ರಶಸ್ತಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪ್ರಕಟಿಸಿದೆ. ಚಿತ್ರದುರ್ಗದಲ್ಲಿ ಏಪ್ರಿಲ್ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ
Follow us on
ಬೆಂಗಳೂರು, ಮಾರ್ಚ್.28: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿ ವರ್ಷ ಕೊಡುವ ಕೆಯುಡಬ್ಲ್ಯೂಜೆ (KUWJ) ದತ್ತಿ ನಿಧಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ದತ್ತಿನಿಧಿ ಪ್ರಶಸ್ತಿಗಳು ತಲಾ 5 ಸಾವಿರ ರೂ ನಗದು, ಪ್ರಶಸ್ತಿ ಪಲಕ ಮತ್ತು ಗೌರವ ಪುರಸ್ಕಾರಗಳನ್ನು ಹೊಂದಿರುತ್ತದೆ. ಚಿತ್ರದುರ್ಗದಲ್ಲಿ ಏಪ್ರಿಲ್ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದ್ದಾರೆ.
ಪ್ರಶಸ್ತಿಗಳ ವಿವರ
ಡಾ. ಬಾಬಾ ಸಾಹೇಬ ಅಂಬೇಡ್ಕರ್ ಪ್ರಶಸ್ತಿ: ಬಿ.ಎಂ.ಬಶೀರ್, ಮಂಗಳೂರು.
ಗೊಮ್ಮಟ ಮಾಧ್ಯಮ ಪ್ರಶಸ್ತಿ: ಕುಂತಿನಾಥ ಶ್ರೀ ಕಲಮನಿ, ಬೆಳಗಾವಿ
ಡಿವಿಜಿ ಪ್ರಶಸ್ತಿ: ವಿ.ವೆಂಕಟೇಶ್, ಬೆಂಗಳೂರು
ಸಿ.ಆರ್.ಕೃಷ್ಣರಾವ್(ಸಿಆರ್‌ಕೆ) ಪ್ರಶಸ್ತಿ: ಸಿ.ಜಿ.ಮಂಜುಳ, ಬೆಂಗಳೂರು
ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿ: ಮಲ್ಲಿಗೆ ಮಾಚಮ್ಮ, ಮೈಸೂರು.
ಅತ್ಯುತ್ತಮ ವರದಿ ಮಾಡಿದ ಮುದ್ರಣ ಹಾಗು ವಿದ್ಯುನ್ಮಾನ ಮಾಧ್ಯಮದ ವರದಿಗಾರರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಅದರಲ್ಲೂ ಅತ್ಯುತ್ತಮ ಗ್ರಾಮಾಂತರ ವರದಿ, ಮಾನವೀಯ ವರದಿ, ಅಪರಾಧ ವರದಿ, ಸ್ಕೂಪ್ ವರದಿ, ಕ್ರೀಡಾ ವರದಿ, ರಾಜಕೀಯ ವಿಮರ್ಶಾತ್ಮಕ ಲೇಖನ, ವಾರ ಪತ್ರಿಕೆಯಲ್ಲಿ ಪ್ರಕಟವಾದ ಚಿತ್ರ ಲೇಖನ, ಸುದ್ದಿ ಛಾಯಾಚಿತ್ರ, ಅರಣ್ಯ ಕುರಿತ ವರದಿ, ವನ್ಯ ಪ್ರಾಣಿಗಳ ಕುರಿತ ವರದಿ, ಆರ್ಥಿಕ ದುರ್ಬಲ ವರ್ಗದವರ ಕುರಿತ ವರದಿ, ಗ್ರಾಮೀಣ ಜನ ಜೀವನದ ವರದಿ, ಜಿಲ್ಲಾ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಅತ್ಯುತ್ತಮ ಕೃಷಿ ವರದಿ, ವಿಡಂಬನಾತ್ಮಕ ಲೇಖನ, ಪುಟ ವಿನ್ಯಾಸ, ಕೋರ್ಟ್ ವರದಿ, ಸೇನಾ ವರದಿ, ತನಿಖಾ ವರದಿಗಳಿಗೆ ಪ್ರತ್ಯೇಕ ಪ್ರಶಸ್ತಿಗಳಿವೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ಮಾಡಿ