ಅಕ್ಟೋಬರ್ 3ಕ್ಕೆ ಶಿವಮೊಗ್ಗದಲ್ಲಿ ರಾಜ್ಯಮಟ್ಟದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ; ಪ್ರಶಸ್ತಿ ಪಡೆಯುವ ಹಿರಿಯ ಪತ್ರಕರ್ತರ ಹೆಸರು ಇಲ್ಲಿದೆ
ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರಾತಿನಿಧಿಕ ಸಂಘಟನಾ ಸಂಸ್ಥೆಯಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತನ್ನ ಸಮುದಾಯಕ್ಕೆ ನ್ಯಾಯವೊದಗಿಸುವ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ 90 ವರ್ಷಗಳ ಸಾರ್ಥಕ ಹೆಜ್ಜೆಗಳೊಂದಿಗೆ ಮುನ್ನಡೆಯುತ್ತಿದೆ. ಹಿರಿಯ ಪತ್ರಕರ್ತರೂ, ಖ್ಯಾತ ಸಾಹಿತಿಗಳೂ ಆಗಿದ್ದ ಡಿ.ವಿ ಗುಂಡಪ್ಪ(ಡಿವಿಜಿ) ಅವರು ಸ್ಥಾಪಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಚನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಿಂದ ಪತ್ರಕರ್ತರ ಹಿತ ಕಾಯುವಲ್ಲಿ ಮುನ್ನಡೆದಿದೆ. ಜೊತೆಗೆ ಪತ್ರಕರ್ತರ ಬೌದ್ಧಿಕ ಉನ್ನತೀಕರಣಕ್ಕಾಗಿ ಸಂದರ್ಭಾನುಸಾರವಾಗಿ ಅನೇಕ ಚಟುವಟಿಕೆಗಳನ್ನು ರಾಜ್ಯದಾದ್ಯಂತ ನಡೆಸುವ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ಗುಣಾತ್ಮಕ ಕೊಡುಗೆಯನ್ನು ನೀಡುತ್ತಿದೆ.
ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರಾತಿನಿಧಿಕ ಸಂಘಟನಾ ಸಂಸ್ಥೆಯಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತನ್ನ ಸಮುದಾಯಕ್ಕೆ ನ್ಯಾಯವೊದಗಿಸುವ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಪತ್ರಕರ್ತರನ್ನು ಗುರುತಿಸಿ ಗೌರವಿಸುವ ಮೂಲಕ ಅವರನ್ನು ವೃತ್ತಿಪರವಾಗಿ ಇನ್ನಷ್ಟು ಪ್ರೋತ್ಸಾಹಿಸುವ ಕೆಲಸ ಸಂಘದ ಅತ್ಯಂತ ಮಹತ್ವದ ಚಟುವಟಿಕೆಗಳಲ್ಲಿ ಒಂದು. ಈ ನಿಟ್ಟಿನಲ್ಲಿ ತಮ್ಮ ವರದಿಗಾರಿಕೆಗಳಿಗೆ ವಿವಿಧ ಪ್ರಶಸ್ತಿಗಳು, ದತ್ತಿನಿಧಿ ಪ್ರಶಸ್ತಿಗಳು ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳನ್ನು ಸಂಘವು ತನ್ನ ಸದಸ್ಯ ಕಾರ್ಯನಿರತ ಪತ್ರಕರ್ತರಿಗೆ ನೀಡುತ್ತಾ ಪ್ರೋತ್ಸಾಹಿಸುತ್ತಿದೆ.
ಪತ್ರಕರ್ತರನ್ನು ಉತ್ತೇಜಿಸಲು ಮತ್ತು ಗೌರವಿಸುವ ನಿಟ್ಟಿನಲ್ಲಿ ಸಂಘದಲ್ಲಿ ಹಿರಿಯ ಸಾಧಕ ಪತ್ರಕರ್ತರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿಗಳನ್ನು ಸ್ಥಾಪಿಸಿದ್ದಾರೆ. ರಾಜ್ಯ ಸಂಘವು ಆಹ್ವಾನಿತ ಉತ್ತಮ ವರದಿಗಳಿಗೆ ಪ್ರಶಸ್ತಿ ನೀಡುವುದಲ್ಲದೆ, ದತ್ತಿನಿಧಿ ಪ್ರಶಸ್ತಿಗಳ ಮೂಲಕ ಹಿರಿಯ, ಪ್ರತಿಭಾವಂತ ಪತ್ರಕರ್ತರನ್ನು ಉತ್ತೇಜಿಸುವ, ಗೌರವಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಾ ಬಂದಿದೆ.
ಇದುವರೆಗೂ ಈ ಎಲ್ಲ ಪ್ರಶಸ್ತಿಗಳನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ವಾರ್ಷಿಕ ಸಮ್ಮೇಳನಗಳಲ್ಲಿ ನೀಡಲಾಗುತ್ತಿತ್ತು. ಆದರೆ ಈ ಬಾರಿ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗಳನ್ನು ಇನ್ನಷ್ಟು ಘನತೆಯಿಂದ ವಿತರಿಸಬೇಕೆಂಬ ಉದ್ದೇಶದಿಂದ ಮಲೆನಾಡಿನ ಹೆಬ್ಬಾಗಿಲು, ಪತ್ರಿಕೋದ್ಯಮಕ್ಕೆ ತನ್ನದೇ ಆದ ಪ್ರತಿಭೆಗಳನ್ನು ಕೊಟ್ಟ ಹೆಗ್ಗಳಿಕೆ ಹೊಂದಿರುವ ಶಿವಮೊಗ್ಗದಲ್ಲಿ ಪ್ರದಾನ ಮಾಡಲಾಗುತ್ತಿದೆ.
ಈ ಸಮಾರಂಭದ ನಿರ್ವಹಣೆ ಮತ್ತು ಆತಿಥ್ಯವನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವಹಿಸಿಕೊಂಡಿದೆ. ಅ.03 ರ ಭಾನುವಾರ ಸಂಜೆ 5ಕ್ಕೆ ಶಿವಮೊಗ್ಗ ನಗರದ ಕಂಟ್ರಿ ಕ್ಲಬ್ನ ಆವರಣದಲ್ಲಿ ಆಯೋಜನೆಗೊಂಡಿರುವ ವರ್ಣರಂಜಿತ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ಸಂಘವು ಗುರುತಿಸಿರುವ ಪತ್ರಕರ್ತರಿಗೆ ನೀಡಲಾಗುತ್ತಿದೆ.
ಕಾರ್ಯಕ್ರಮದ ವಿವರ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿಯಾದ ಬಿ.ಎಸ್.ಯಡಿಯೂರಪ್ಪ ಅವರು ನೆರವೇರಿಸಲಿದ್ದಾರೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಪತ್ರಕರ್ತರಿಗೆ ಆಸರೆಯಾಗಿ ನಿಂತ ಯಡಿಯೂರಪ್ಪರವರನ್ನು ಇದೇ ಸಂದರ್ಭದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಗುತ್ತಿದೆ. ಇದೇ ವೇದಿಕೆಯಲ್ಲಿ ಶಿವಮೊಗ್ಗ ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ‘ಸಿಹಿಮೊಗೆ ಮಾಧ್ಯಮ’ ಹೆಸರಿನ ವಿಶೇಷ ಸ್ಮರಣ ಸಂಚಿಕೆಯನ್ನು ಸಂಸದರಾದ ಬಿ.ವೈ.ರಾಘವೇಂದ್ರ ಅವರು ಬಿಡುಗಡೆ ಮಾಡಲಿದ್ದಾರೆ.
ಪತ್ರಿಕಾ ಛಾಯಾಗ್ರಾಹಕರ ಸಹಭಾಗಿತ್ವದಲ್ಲಿ ವಿಶೇಷ ಛಾಯಾಚಿತ್ರ ಪ್ರದರ್ಶನವನ್ನು ಸಹ ಆಯೋಜಿಸಲಾಗಿದ್ದು, ವಿಧಾನ ಪರಿಷತ್ ಸದಸ್ಯಎಸ್.ರುದ್ರೇಗೌಡ ಅವರು ಉದ್ಘಾಟಿಸಲಿದ್ದಾರೆ. ಪ್ರಶಸ್ತಿಗಳನ್ನು ಜಿಲ್ಲಾ ಉಸ್ತುವಾರಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರದಾನ ಮಾಡಲಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಆಶಯನುಡಿಗಳನ್ನಾಡಲಿದ್ದು, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರೂ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರೂ ಆದ ಕೆ.ವಿ.ಶಿವಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ.ಕೆ.ಸಂಗಮೇಶ್ವರ, ಕೆ.ಬಿ.ಅಶೋಕ ನಾಯ್ಕ, ಕುಮಾರ್ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಆರ್.ಪ್ರಸನ್ನಕುಮಾರ್, ಕರ್ನಾಟಕ ಆರ್ಯವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಮಹಾಪೌರರಾದ ಸುನೀತಾಅಣ್ಣಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಾತ್ಯಾತೀತ ಜನತಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಗೋಪಾಲ್ ಎಸ್. ಯಡಗೆರೆ ಪಾಲ್ಗೊಳ್ಳಲಿದ್ದಾರೆ.
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷರಾದ ಬಿ.ವಿ.ಮಲ್ಲಿಕಾರ್ಜುನಯ್ಯ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಏಷ್ಯಾ ವಿಭಾಗದ ಸಂಚಾಲಕ ಹೆಚ್.ಬಿ. ಮದನಗೌಡ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎನ್.ರವಿಕುಮಾರ್ಟೆಲೆಕ್ಸ್ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ಹಿಂದೂಸ್ಥಾನಿ ಗಾಯಕ ಉಸ್ತಾದ್ ಹುಮಾಯೂನ್ ಹರ್ಲಾಪುರ ಮತ್ತು ಸಂಗಡಿಗರಿಂದ ವಚನಗಾಯನ ನಡೆಯಲಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2019ನೇ ಸಾಲಿನ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಪಡೆಯುವವರ ಪಟ್ಟಿ ಡಿವಿಜಿ ಪ್ರಶಸ್ತಿ: ರವಿ ಹೆಗಡೆ, ಸಂಪಾದಕರು, ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್ ಎಚ್.ಎಸ್.ದೊರೆಸ್ವಾಮಿ ಪ್ರಶಸ್ತಿ: ಬಿ.ಎಂ.ಹನೀಫ್, ಪ್ರಜಾವಾಣಿ ಗೊಮ್ಮಟ ಮಾಧ್ಯಮ ಪ್ರಶಸ್ತಿ: ಎಸ್.ಎನ್.ಅಶೋಕ್ಕುಮಾರ್, ಸಂಪಾದಕರು, ಗೊಮ್ಮಟವಾಣಿ ಪಾಟೀಲ್ ಪುಟ್ಟಪ್ಪ ಪ್ರಶಸ್ತಿ : ಎಸ್.ಕೆ.ಶೇಷಚಂದ್ರಿಕ, ಹಿರಿಯ ಪತ್ರಕರ್ತರು ಎಸ್.ವಿ.ಜಯಶೀಲರಾವ್ ಪ್ರಶಸ್ತಿ: ಅ.ಚ.ಶಿವಣ್ಣ, ಹಿರಿಯ ಪತ್ರಕರ್ತರು ಪಿ.ಆರ್.ರಾಮಯ್ಯ ಪ್ರಶಸ್ತಿ: ಯು.ಎಸ್.ಶೆಣೈ, ಸಂಪಾದಕರು, ಕುಂದಪ್ರಭ ಗರುಡನಗಿರಿ ನಾಗರಾಜ್ ಪ್ರಶಸ್ತಿ: ಕೆ.ಆರ್.ಮಂಜುನಾಥ್, ಸಂಪಾದಕರು, ಮಲೆನಾಡ ಮಂದಾರ ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ : ಕೋಡಿ ಹೊಸಳ್ಳಿ ರಾಮಣ್ಣ, ಹಿರಿಯ ಪತ್ರಕರ್ತರು ಕಿಡಿ ಶೇಷಪ್ಪ ಪ್ರಶಸ್ತಿ: ಕೆ.ಎಂ.ರೇಖಾ, ಸಂಪಾದಕರು, ಹೊಸಪೇಟೆ ಟೈಮ್ಸ್ ಪಿ.ರಾಮಯ್ಯ ಪ್ರಶಸ್ತಿ: ರೇವಣ್ಣಸಿದ್ದಯ್ಯ ಮಹಾನುಭವಿಮಠ, ಸಂಪಾದಕರು, ಶಿಡ್ಲು ಪತ್ರಿಕೆ ಯಶೋಧಮ್ಮ ಜಿ.ನಾರಾಯಣ ಪ್ರಶಸ್ತಿ: ರಶ್ಮಿ, ಬ್ಯೂರೊ ಮುಖ್ಯಸ್ಥೆ ಪ್ರಜಾವಾಣಿ, ಹುಬ್ಬಳ್ಳಿ ಎಂ.ನಾಗೇಂದ್ರರಾವ್ ಪ್ರಶಸ್ತಿ: ಶಾಂತಕುಮಾರ್ ಕೆ.ಎನ್.ಬ್ಯೂರೊ ಮುಖ್ಯಸ್ಥ, ವಿಜಯವಾಣಿ, ಶಿವಮೊಗ್ಗ ಮಿಂಚು ಶ್ರೀನಿವಾಸ್ ಪ್ರಶಸ್ತಿ: ರಾಮಸ್ವಾಮಿ ಹುಲಕೋಡು, ವಿಜಯಕರ್ನಾಟಕ ಹೆಚ್.ಎಸ್ರಂಗಸ್ವಾಮಿ ಪ್ರಶಸ್ತಿ: ಪಿ.ಸುನೀಲ್ಕುಮಾರ್ ಸಂಪಾದಕರು ‘ಸಿಟಿ ಹೈಲೈಟ್ಸ್’ ಬೆಂಗಳೂರು
ಸಂಘದ ವಿಶೇಷ ಪ್ರಶಸ್ತಿಗಳು ಪ್ರಹ್ಲಾದಗುಡಿ, ವರದಿಗಾರರು, ಕನ್ನಡ ಪ್ರಭ, ರಾಯಚೂರು ಮುನಿವೆಂಕಟೇಗೌಡ, ಹಿರಿಯ ಪತ್ರಕರ್ತರು, ಕೋಲಾರ ಎಂ.ಕೆ ರಾಘವೇಂದ್ರ ಮೇಗರವಳ್ಳಿ, ವಿಜಯಕರ್ನಾಟಕ, ತೀರ್ಥಹಳ್ಳಿ