Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿ

ಒಟ್ಟು ಆರು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು 120 ಟ್ರೋಫಿಗಳನ್ನು ವಿಜೇತರಿಗೆ ವಿತರಿಸಲಾಗುವುದು. ಫಿಡೆಯ ಇತ್ತೀಚಿನ ನಿಯಮಗಳ ಪ್ರಕಾರ ಪಂದ್ಯಾವಳಿ ನಡೆಯಲಿದ್ದು, ಸ್ವಿಸ್ ವ್ಯವಸ್ಥೆಯನ್ನು ಅನುಸರಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿ
ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿ
Follow us
TV9 Web
| Updated By: Ganapathi Sharma

Updated on: Jan 03, 2024 | 2:43 PM

ಬೆಂಗಳೂರು, ಜನವರಿ 3: ಬೆಂಗಳೂರಿನ ಪ್ರತಿಷ್ಠಿತ ಯೂನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ ಯುನಿವರ್ಸಲ್ ಫಸ್ಟ್ ಏಜ್ ಮಕ್ಕಳ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯನ್ನು (Chess Tournament) ಜನವರಿ 7 ರಂದು ಆಯೋಜಿಸಿದೆ. ಸುಮಾರು 400 ಉದಯೋನ್ಮುಖ ಚೆಸ್ ಆಟಗಾರರು ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ವಿವಿಧ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಗಳ ತರಬೇತಿ ನೀಡುತ್ತಿರುವ ಯೂನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ ಆಯೋಜಿಸುತ್ತಿರುವ ಈ ಚೆಸ್ ಪಂದ್ಯಾವಳಿ 7ರಂದು ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಲಿದೆ. ಪಂದ್ಯಾವಳಿಯ ಒಟ್ಟು ಸುತ್ತುಗಳ ಸಂಖ್ಯೆ ಮತ್ತು ಸುತ್ತಿನ ವೇಳಾಪಟ್ಟಿಯನ್ನು ಅದೇ ದಿನ ಪ್ರಕಟಿಸಲಾಗುತ್ತದೆ.

ಈ ಬಗ್ಗೆ ಮಾಹಿತಿ ನೀಡಿರುವ ಸಂಸ್ಥೆಯ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ, ಈ ಪಂದ್ಯಾವಳಿಯು ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಉಪಕ್ರಮದ ಭಾಗವಾಗಿ ನಡೆಯಲಿದೆ. ಕಾಲೇಜಿನ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗವು ಕೆಎಸ್​​ಸಿಎ ಮತ್ತು ಬಿಯುಡಿಸಿಎ ಸಹಯೋಗದೊಂದಿಗೆ ಕಾಲೇಜಿನ ಗುರುರಾಯನಪುರ, ಕೋಳೂರು, ರಾಮೋಹಳ್ಳಿ ಕ್ಯಾಂಪಸ್​​​ನಲ್ಲಿ ಪಂದ್ಯಾವಳಿ ಆಯೋಜಿಸಿದೆ ಎಂದು ತಿಳಿಸಿದ್ದಾರೆ.

ಒಟ್ಟು ಆರು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು 120 ಟ್ರೋಫಿಗಳನ್ನು ವಿಜೇತರಿಗೆ ವಿತರಿಸಲಾಗುವುದು. ಫಿಡೆಯ ಇತ್ತೀಚಿನ ನಿಯಮಗಳ ಪ್ರಕಾರ ಪಂದ್ಯಾವಳಿ ನಡೆಯಲಿದ್ದು, ಸ್ವಿಸ್ ವ್ಯವಸ್ಥೆಯನ್ನು ಅನುಸರಿಸಲಾಗುವುದು.

7 ವರ್ಷ, 9 ವರ್ಷ, 11 ವರ್ಷ, 13 ವರ್ಷ, 15 ವರ್ಷ ಮತ್ತು 19 ವರ್ಷ ವಯಸ್ಸಿನ ಬಾಲಕ ಮತ್ತು ಬಾಲಕಿಯರು ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಪ್ರತಿ ವಿಭಾಗದಲ್ಲಿ 10 ಟ್ರೋಫಿಗಳನ್ನು ನೀಡಲಾಗುವುದು.

ಇದನ್ನೂ ಓದಿ: ಗಿಂಬಳದ ಹಿಂದೆ ಬಿದ್ದಿದ್ದ ಸರ್ಕಾರಿ ನೌಕರ ಬಿಲ್ಡಪ್ ಕೊಟ್ಟು ಮದುವೆಗೆ ಸಜ್ಜಾಗಿದ್ದ, ವರದಕ್ಷಿಣೆ ದಾಹವೂ ಸೇರಿಕೊಂಡಾಗ… ಏನಾಯ್ತು ನೋಡಿ

ಶ್ರೀಪಾದ್ ಕೆ.ವಿ. ಅವರು ಕಾರ್ಯಕ್ರಮದ ಮುಖ್ಯ ತೀರ್ಪುಗಾರರಾಗಿರಲಿದ್ದಾರೆ. ಆಸಕ್ತರು ಜನವರಿ 5, 2024 ರ 6 ಗಂಟೆಯೊಳಗೆ ನೋಂದಣಿ ಮಾಡಿಕೊಳ್ಳಬಹುದು. “ಸ್ಥಳದಲ್ಲಿ ನೋಂದಣಿ ಅವಕಾಶವಿಲ್ಲ” ಎಂದು ಸಂಘಟಕರು ಸ್ಪಷ್ಟಪಡಿಸಿದ್ದಾರೆ.

ಭಾಗವಹಿಸುವ ಎಲ್ಲಾ ಆಟಗಾರರಿಗೆ ಇ – ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ. ಸಮೀಪದ ಚಲ್ಲಘಟ್ಟ ಮೆಟ್ರೊ ನಿಲ್ದಾಣದಿಂದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಪ್ರಯಾಣ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ