ಬೆಂಗಳೂರು: ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ರೂ ನೀಡಲಾಗಿದೆ. ಅಲ್ಲದೆ, ವಿಶೇಷವಾಗಿ ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ ಮಾಡಲಾಗಿದೆ. ತಳಸಮುದಾಯದ ವಿಶಿಷ್ಟ ಕಲೆಗಳ ಉತ್ತೇಜನಕ್ಕೆ ಸಾಂಸ್ಕೃತಿಕ ಶಿಬಿರ ನಡೆಸುವುದಾಗಿ ಘೋಷಣೆ ಮಾಡಲಾಗಿದೆ.
ಪ್ರತೀ ವಿಭಾಗ ಮಟ್ಟದಲ್ಲಿ ಒಟ್ಟು 4 ಸಾಂಸ್ಕೃತಿಕ ಶಿಬಿರ ಆಯೋಜನೆ ಮಾಡಲಾಗುವುದು. ಕರ್ನಾಟಕದ ಹೆಸರಾಂತ ಸಾಹಿತಿಗಳ ಸಾಹಿತ್ಯ ಪ್ರಚಾರಕ್ಕೆ ಯೋಜನೆ ಕೈಗೊಳ್ಳಲಾಗುವುದು ಎಂದು ಘೋಷಿಸಲಾಗಿದೆ. ಡಾ.ಸಿದ್ದಲಿಂಗಯ್ಯ, ಡಾ.ಎಂ.ಚಿದಾನಂದಮೂರ್ತಿ, ಚನ್ನವೀರ ಕಣವಿ, ಡಾ.ಚಂದ್ರಶೇಖರ ಪಾಟೀಲ್ ಅವರ ಸಾಹಿತ್ಯ ಪ್ರಚಾರಕ್ಕಾಗಿ ಸ್ಕೀಮ್ ಘೋಷಣೆ ಮಾಡಲಾಗಿದೆ. ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಶ್ರೀ ಯೋಗಿನಾರೇಯಣಾ ಯತೀಂದ್ರರ ಜಯಂತಿ ಆಚರಣೆ ಮಾಡಲಾಗುವುದು. ಪ್ರತಿ ವರ್ಷ ಮಾ.27ರಂದು ಆಚರಣೆ ಮಾಡಲಾಗುವುದು. 4 ಸಾಂಸ್ಕೃತಿಕ ಶಿಬಿರಿ ಕಾರ್ಯಕ್ರಮ ಆಯೋಜಿಸಲಾಗುವುದು. ಹಾವೇರಿ ಜಿಲ್ಲೆಯಲ್ಲಿ ₹2 ಕೋಟಿ ವೆಚ್ಚದಲ್ಲಿ ಸಾಂಸ್ಕೃತಿ ಭವನ ನಿರ್ಮಾಣ ಮಾಡಲಾಗುವುದು. ಮಂಗಳೂರು ವಿವಿಯಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರ ಸ್ಥಾಪಿಸಲಾಗುವುದು. ನೆರೆಯ ರಾಜ್ಯ ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: Karnataka Budget 2022: ಕರ್ನಾಟಕದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್; ಯಾವ ಇಲಾಖೆಗೆ ಎಷ್ಟು ಅನುದಾನ?
ಇದನ್ನೂ ಓದಿ: Karnataka Budget 2022: ಕರ್ನಾಟಕದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ; ಐಐಟಿ ಮಾದರಿಯಲ್ಲಿ ಕೆಐಟಿ