ಸರ್ಕಾರದ ಆದೇಶ ಆಜಾನ್​ಗೆ ಅನ್ವಯ ಆಗುವುದಿಲ್ಲ; ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್ ಷಫಿ ಸಾ-ಆದಿ

ಬೆಳಗ್ಗೆ 5 ಗಂಟೆಗೆ ಕೂಗುವ ಆಜಾನ್ ಅದು ಪ್ರಾರ್ಥನೆ ಅಲ್ಲ. ಬೆಳಗ್ಗೆ 5 ಗಂಟೆಗೆ ಕೂಗುವುದು ಪ್ರಾರ್ಥನೆಗೆ ಕರೆಯುವ ಸಂದೇಶ. ಸುಪ್ರೀಂಕೋರ್ಟ್ ಆದೇಶದಲ್ಲೂ ಆಜಾನ್ ಬಗ್ಗೆ ವಿರೋಧ ಇಲ್ಲ.

ಸರ್ಕಾರದ ಆದೇಶ ಆಜಾನ್​ಗೆ ಅನ್ವಯ ಆಗುವುದಿಲ್ಲ; ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್ ಷಫಿ ಸಾ-ಆದಿ
ಪ್ರಾತಿನಿಧಿಕ ಚಿತ್ರ (ಪಿಟಿಐ)
Follow us
TV9 Web
| Updated By: sandhya thejappa

Updated on:May 12, 2022 | 12:39 PM

ಬೆಂಗಳೂರು: ಮಸೀದಿಗಳಲ್ಲಿ ಆಜಾನ್​ (Azan) ನಿಷೇಧಿಸಬೇಕೆಂದು ಈಗಾಗಲೇ ಹಿಂದೂ ಸಂಘಟನೆ ಕಾರ್ಯಕರ್ತರು ಸರ್ಕಾರಕ್ಕೆ ಮನವಿ ಮಾಡಿದ್ದರು. ಮನವಿಯನ್ನು ಸ್ವೀಕರಿಸಿದ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಇನ್ನು ಮುಂದೆ ಲೌಡ್ಸ್ಪೀಕರ್ (Loud Speaker) ಬಳಸುವವರು 15 ದಿನಗಳ ಒಳಗೆ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ತಿಳಿಸಿದೆ. ಜೊತೆಗೆ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಸದಂತೆ ಸೂಚನೆ ನೀಡಿದೆ. ಈ ಆದೇಶಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಸರ್ಕಾರದ ಆದೇಶ ಆಜಾನ್ಗೆ ಅನ್ವಯ ಆಗುವುದಿಲ್ಲ ಎಂದಿದ್ದಾರೆ.

ಬೆಳಗ್ಗೆ 5 ಗಂಟೆಗೆ ಕೂಗುವ ಆಜಾನ್ ಅದು ಪ್ರಾರ್ಥನೆ ಅಲ್ಲ. ಬೆಳಗ್ಗೆ 5 ಗಂಟೆಗೆ ಕೂಗುವುದು ಪ್ರಾರ್ಥನೆಗೆ ಕರೆಯುವ ಸಂದೇಶ. ಸುಪ್ರೀಂಕೋರ್ಟ್ ಆದೇಶದಲ್ಲೂ ಆಜಾನ್ ಬಗ್ಗೆ ವಿರೋಧ ಇಲ್ಲ. ಆಜಾನ್ಗೆ ನಾವು ಧ್ವನಿವರ್ಧಕ ಮೂಲಕವೇ ಕರೆಯಬೇಕು. ಸರ್ಕಾರದ ಆದೇಶ ಏನಿದೆ ಅದನ್ನ ಪಾಲನೆ ಮಾಡುತ್ತೇವೆ. ಆದರೆ ಆಜಾನ್ಗೆ ತಡೆಯಿಲ್ಲ ಎಂದು ಮೊಹಮ್ಮದ್ ಷಫಿ ಸಾ-ಆದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧ: ಅಜಾನ್ ವಿರುದ್ಧ ಹನುಮಾನ್ ಚಾಲೀಸಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸುವ ನಿರ್ದೇಶನಗಳ ಭಾಗವಾಗಿ 15 ದಿನಗಳಲ್ಲಿ ಅಧಿಕಾರಿಗಳಿಂದ ಲಿಖಿತ ಅನುಮತಿಯನ್ನು ಪಡೆಯಲು ಧ್ವನಿ-ಉತ್ಪಾದಿಸುವ ಉಪಕರಣಗಳ ಎಲ್ಲಾ ಬಳಕೆದಾರರನ್ನು ಸರ್ಕಾರ ಕೇಳಿದೆ. ಒಂದು ಧ್ವನಿವರ್ಧಕ ಅಥವಾ ಲೌಡ್ ಸ್ಪೀಕರ್ ರಾತ್ರಿಯಲ್ಲಿ (ರಾತ್ರಿ 10.00 ರಿಂದ ಬೆಳಗ್ಗೆ 6.00 ರ ನಡುವೆ) ಸಂವಹನಕ್ಕಾಗಿ ಮುಚ್ಚಿದ ಆವರಣಗಳನ್ನು ಹೊರತುಪಡಿಸಿ ಬೇರೆಲ್ಲೂ ಬಳಸಬಾರದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಅನುಮತಿ ಪಡೆಯದವರು, ಸ್ವಯಂಪ್ರೇರಣೆಯಿಂದ ಧ್ವನಿವರ್ಧಕಗಳು ಮತ್ತು ಧ್ವನಿ-ಉತ್ಪಾದಿಸುವ ಉಪಕರಣಗಳನ್ನು ತೆಗೆದುಹಾಕಬೇಕು. ಇಲ್ಲವೇ ನೀಡಲಾದ ಗಡುವಿನಿಂದ 15 ದಿನಗಳಲ್ಲಿ ಗೊತ್ತುಪಡಿಸಿದ ಪ್ರಾಧಿಕಾರದಿಂದ ಅದನ್ನು ತೆಗೆದುಹಾಕಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಹೇಳಿದೆ. ಅಧಿಸೂಚನೆಯು 2002 ರ ಸರ್ಕಾರಿ ಆದೇಶವನ್ನು ಉಲ್ಲೇಖಿಸಿದ್ದು, ಶಬ್ದ ಮಾಲಿನ್ಯವನ್ನು ಕಡಿಮೆ ಮಾಡುವ ಜವಾಬ್ದಾರಿಯಾಗಿ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ
Image
ಕೇರಳದ ಮಕ್ಕಳಲ್ಲಿ ಟೊಮೆಟೊ ಜ್ವರ: ಕರ್ನಾಟಕ-ಕೇರಳ ಗಡಿಯಲ್ಲಿ ಕಟ್ಟೆಚ್ಚರಕ್ಕೆ ಸೂಚನೆ
Image
ಪಿಎಸ್ಐ ಹಗರಣದ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ; ಪರೀಕ್ಷೆಯ ಒಂದೊಂದು ವಿಧಾನಕ್ಕೆ ಒಂದೊಂದು ರೇಟ್ ಫಿಕ್ಸ್!
Image
NEET PG 2022: ನೀಟ್ ಪರೀಕ್ಷೆ ಮುಂದೂಡಲು ಆರೋಗ್ಯ ಸಚಿವರಿಗೆ ಐಎಂಎ ಮನವಿ
Image
Sarkaru Vaari Paata Review: ಒಂದೊಳ್ಳೆಯ ಕಥೆಗೆ ಬೇಕಿತ್ತು ಇನ್ನಷ್ಟು ಒಳ್ಳೆಯ ಟ್ರೀಟ್​ಮೆಂಟ್

 

Published On - 12:37 pm, Thu, 12 May 22

‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ