ಲೋಡ್ ಶೆಡ್ಡಿಂಗ್ ತೀವ್ರಗೊಂಡರೆ ರಾಜ್ಯಕ್ಕೆ ನಷ್ಟ: ಎಂಎಲ್​ಸಿ ಎನ್​ ರವಿಕುಮಾರ್

ಸರ್ಕಾರ ರೈತರ ಜಮೀನುಗಳಿಗೆ ಸಂಪೂರ್ಣ ವಿದ್ಯುತ್ ಕಟ್ ಮಾಡುತ್ತಿದೆ. ಬೆಂಗಳೂರಿನಲ್ಲಿ ದಿನಕ್ಕೆ ನಾಲ್ಕೈದು ಬಾರಿ ವಿದ್ಯುತ್ ತೆಗೆಯುತ್ತಿದ್ದಾರೆ. ಕೈಗಾರಿಗಳಿಗೆ ವಿದ್ಯುತ್ ಸಿಗದೇ ಸಮಸ್ಯೆ ಆಗಿದೆ. ಲೋಡ್ ಶೆಡ್ಡಿಂಗ್ ತೀವ್ರಗೊಂಡರೆ ರಾಜ್ಯಕ್ಕೆ ನಷ್ಟ ಆಗಲಿದೆ ಎಂದು ಬಿಜೆಪಿ ಎಂಎಲ್​ಸಿ ಎನ್​.ರವಿಕುಮಾರ್​ ಕಿಡಿಕಾರಿದ್ದಾರೆ.

ಲೋಡ್ ಶೆಡ್ಡಿಂಗ್ ತೀವ್ರಗೊಂಡರೆ ರಾಜ್ಯಕ್ಕೆ ನಷ್ಟ: ಎಂಎಲ್​ಸಿ ಎನ್​ ರವಿಕುಮಾರ್
ಬಿಜೆಪಿ ಎಂಎಲ್​ಸಿ ಎನ್​.ರವಿಕುಮಾರ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 12, 2023 | 5:43 PM

ಬೆಂಗಳೂರು, ಅಕ್ಟೋಬರ್​​​​ 12: ಸರ್ಕಾರ ರೈತರ ಜಮೀನುಗಳಿಗೆ ಸಂಪೂರ್ಣ ವಿದ್ಯುತ್ ಕಟ್ ಮಾಡುತ್ತಿದೆ. ಬೆಂಗಳೂರಿನಲ್ಲಿ ದಿನಕ್ಕೆ ನಾಲ್ಕೈದು ಬಾರಿ ವಿದ್ಯುತ್ ತೆಗೆಯುತ್ತಿದ್ದಾರೆ. ಕೈಗಾರಿಗಳಿಗೆ ವಿದ್ಯುತ್ ಸಿಗದೇ ಸಮಸ್ಯೆ ಆಗಿದೆ. ಲೋಡ್ ಶೆಡ್ಡಿಂಗ್ ತೀವ್ರಗೊಂಡರೆ ರಾಜ್ಯಕ್ಕೆ ನಷ್ಟ ಆಗಲಿದೆ ಎಂದು ಬಿಜೆಪಿ ಎಂಎಲ್​ಸಿ ಎನ್​.ರವಿಕುಮಾರ್ (N Ravikumar)​ ಹೇಳಿದ್ದಾರೆ. ನಗರದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಅನೇಕ ಕಂಪನಿಗಳು ಬೇರೆ ರಾಜ್ಯಗಳಿಗೆ ಹೋಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ವಿದ್ಯುತ್ ಪೂರೈಕೆಯಲ್ಲಿ ಒಂದು ಕಡೆ ಸರ್ಕಾರ ವ್ಯತ್ಯಯ ಮಾಡುತ್ತಿದೆ. ಇನ್ನೊಂದು ಕಡೆ ಉಚಿತ ವಿದ್ಯುತ್ ಯೋಜನೆ ಹಳ್ಳ ಹಿಡಿದಿದೆ. ರಾಜ್ಯಾದ್ಯಂತ ನಾವು ಜನಾಂದೋಲನ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಬಿಟ್ಟು ಯಾರೂ ಹೋಗುವುದಿಲ್ಲ

ಕಾಂಗ್ರೆಸ್​ಗೆ ವಲಸೆ ಹೋಗುತ್ತಿರುವವರನ್ನು ಹಿಡಿದಿಟ್ಟುಕೊಳ್ಳುವಲ್ಲಿ ವಿಫಲರಾಗಿದ್ದೇವೆ ಎಂಬ ಸಂಸದ ಸದಾನಂದ ಗೌಡ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ತೊರೆದು ಯಾರೂ ಕಾಂಗ್ರೆಸ್​ಗೆ ಹೋಗುತ್ತಿಲ್ಲ. ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್​ ಕೂಡ ಪಕ್ಷ ತೊರೆಯಲ್ಲ.

ಇದನ್ನೂ ಓದಿ: ರಾಜ್ಯದಲ್ಲಿ ಕತ್ತಲೆ ಹರಡಿ ನಾಪತ್ತೆಯಾಗಿರುವ ಇಂಧನ ಸಚಿವ ಕೆಜೆ ಜಾರ್ಜ್​​ರನ್ನು ಹುಡುಕಿ ಕೊಡಿ: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಈಗಾಗಲೇ ನಾವು ಪೂರ್ಣಿಮಾ ಶ್ರೀನಿವಾಸ್​ ಜೊತೆ ಮಾತಾಡಿದ್ದೇವೆ. ಬೇರೆಯವರಿಗೆ ಟಿಕೆಟ್​ ಕೊಟ್ಟಿದ್ದರೆ ರಾಮಣ್ಣ ಲಮಾಣಿ ಹೋಗಿದ್ದಾರೆ. ಇನ್ನು ಯಾರೂ ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಲೋಡ್ ಶೆಡ್ಡಿಂಗ್ ಮುಂದುವರೆದರೆ ಕೈಗಾರಿಕೆ ವಲಯದಲ್ಲಿ ಕರ್ನಾಟಕ ಹಿಂದೆ ಬೀಳಲಿದೆ: ಮಾಜಿ ಸಚಿವ ಮುರುಗೇಶ್ ನಿರಾಣಿ

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ವಿಚಾರವಾಗಿ ಬೆಂಗಳೂರಿನಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯೆ ನೀಡಿದ್ದು, ಕೈಗಾರಿಕೆಗಳಿಗೆ ವಿದ್ಯುತ್ ದರ ಹೆಚ್ಚಳ ಮತ್ತು ಲೋಡ್ ಶೆಡ್ಡಿಂಗ್ ಎರಡೂ ಸಮಸ್ಯೆ ತಂದೊಡ್ಡಿವೆ. ಇದೇ ರೀತಿ ಮುಂದುವರೆದರೆ ಕರ್ನಾಟಕ ಕೈಗಾರಿಕೆ ವಲಯದಲ್ಲಿ ಹಿಂದೆ ಉಳಿಯುವ ಸಾಧ್ಯತೆ ಇದೆ. ಲೋಡ್ ಶೆಡ್ಡಿಂಗ್​ನಿಂದ ಕೈಗಾರಿಕೋದ್ಯಮಿಗಳು ಬೇರೆ ರಾಜ್ಯಗಳತ್ತ ತಿರುಗಿ ನೋಡುತ್ತಿವೆ ಎಂದಿದ್ದಾರೆ.

ರಾಜ್ಯ ಸರ್ಕಾರ ವಿರುದ್ಧ ಶಾಸಕ ಡಾ.ಅಶ್ವತ್ಥ್ ನಾರಾಯಣ ವಾಗ್ದಾಳಿ

ಮಂಡ್ಯದಲ್ಲಿ ಮಾತನಾಡಿರುವ ಶಾಸಕ ಡಾ.ಅಶ್ವತ್ಥ್ ನಾರಾಯಣ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕತ್ತಲು ಭಾಗ್ಯ ಕೊಟ್ಟಿದೆ. ಉಚಿತವಾಗಿ ವಿದ್ಯುತ್ ನೀಡುತ್ತೇವೆ ಎಂದು ಗ್ಯಾರಂಟಿ ಕೊಟ್ಟಿದ್ದರು. ಆದರೆ ರೈತರಿಗೆ ಕತ್ತಲುಭಾಗ್ಯ ಕೊಟ್ಟು ಅಧಿಕಾರದ ಅಮಲಿನಲ್ಲಿದ್ದಾರೆ. ಬಿಟ್ಟಿ ಭಾಗ್ಯ ಕೊಟ್ಟು ಜನರನ್ನು ಸಂಕಷ್ಟದ ಸ್ಥಿತಿಗೆ ಸಿಲುಕಿಸಿದ್ದಾರೆ. ಸಿದ್ದರಾಮಯ್ಯ ರೈತರನ್ನ ಉದ್ಧಾರ ಮಾಡಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ