AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ದೆಹಲಿಯಿಂದ ಬೆಂಗಳೂರಿಗೆ ಬಂದ ಖಡ್ಗ

ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಭವ್ಯ ಪ್ರತಿಮೆಗೆ 85 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ನೋಯಿಡಾದ ಪದ್ಮಭೂಷಣ ಪುರಸ್ಕೃತ ಶಿಲ್ಪಿಗಳಾದ ರಾಮ್ ವಾನಜಿ ಸುತರ್ ಅವರು ಈ ಪ್ರತಿಮೆಯನ್ನು ಮಾಡಿಕೊಡುತ್ತಿದ್ದಾರೆ’ ಎಂದರು.

ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ದೆಹಲಿಯಿಂದ ಬೆಂಗಳೂರಿಗೆ ಬಂದ ಖಡ್ಗ
ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ದೆಹಲಿಯಿಂದ ಬೆಂಗಳೂರಿಗೆ ಬಂದ ಖಡ್ಗ
TV9 Web
| Edited By: |

Updated on: May 02, 2022 | 8:44 PM

Share

ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ (Statue) ಭಾಗವಾದ 700 ಕೆ.ಜಿ. ತೂಕದ ಖಡ್ಗವು ದೆಹಲಿಯಿಂದ ಬೆಂಗಳೂರನ್ನು ತಲುಪಿದೆ. ವಿಶೇಷ ಟ್ರಕ್​ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನೆರೆದಿದ್ದ ಪುರೋಹಿತರು, ಸಚಿವರ ನೇತೃತ್ವದಲ್ಲಿ ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆಯನ್ನು ನೆರವೇರಿಸಿದರು. ಜತೆಗೆ, ಈ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಎಲ್ಲ ಕಾರ್ಮಿಕ ಸಿಬ್ಬಂದಿಗೂ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕೆಐಎನಲ್ಲಿ 23 ಎಕರೆ ವಿಸ್ತಾರದಲ್ಲಿ ಕೆಂಪೇಗೌಡರ ಸ್ಮರಣಾರ್ಥ ಹೆರಿಟೇಜ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಭವ್ಯ ಪ್ರತಿಮೆಗೆ 85 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ನೋಯಿಡಾದ ಪದ್ಮಭೂಷಣ ಪುರಸ್ಕೃತ ಶಿಲ್ಪಿಗಳಾದ ರಾಮ್ ವಾನಜಿ ಸುತರ್ ಅವರು ಈ ಪ್ರತಿಮೆಯನ್ನು ಮಾಡಿಕೊಡುತ್ತಿದ್ದಾರೆ ಎಂದರು. ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಕತ್ತಿಯು (ಖಡ್ಗ) ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದ್ದು, ನವಭಾರತಕ್ಕೊಂದು ಸಂಕೇತವಾಗಿದೆ. ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿಗೆ ಬಂದಿಳಿಯುವವರಿಗೆ ಕೆಂಪೇಗೌಡರ ಬೃಹದಾಕಾರದ ಪ್ರತಿಮೆಯ ನೋಟವೇ ಒಂದು ದಿವ್ಯ ಅನುಭೂತಿಯನ್ನು ಮಾಡುವಂತಿರಬೇಕು ಎನ್ನುವುದು ಸರಕಾರದ ಉದ್ದೇಶವಾಗಿದೆ ಎಂದು ಅವರು ಬಣ್ಣಿಸಿದರು.

ಈ ಸಂದರ್ಭದಲ್ಲಿ ಅಮೆರಿಕದ ಅಕ್ಕ ಕನ್ನಡ ಕೂಟಗಳ ಮುಖ್ಯಸ್ಥ ಡಾ. ಅಮರನಾಥ್ ಗೌಡ, ಪ್ರಾಧಿಕಾರದ ಆಯುಕ್ತ ವಿನಯ್ ದೀಪ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಪ್ರಾಧಿಕಾರದ ನಿರ್ದೇಶಕರು  ಉಪಸ್ಥಿತರಿದ್ದರು.

ಇನ್ನಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ