ಹಂತ ಹಂತವಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಬೇಕಿತ್ತು: ಎಮ್ ಮದನ್ ಗೋಪಾಲ್

ಯೂನಿವರ್ಸಲ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ನಡೆದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಸವಾಲುಗಳು ಮತ್ತು ಅವಕಾಶಗಳ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ಘೋಷಣೆ ಮಾಡಿದ ಕೂಡಲೇ ಕಾಲೇಜಿಗಳಲ್ಲಿ ಅನುಷ್ಠಾನ ಬರುತ್ತೆ ಅಂತಾ ನನಗೆ ಅನಿಸುತ್ತಿಲ್ಲ ಎಂದು ತಿಳಿಸಿದರು.

ಹಂತ ಹಂತವಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಬೇಕಿತ್ತು: ಎಮ್ ಮದನ್ ಗೋಪಾಲ್
ಎಮ್. ಮದನ್ ಗೋಪಾಲ್
Follow us
TV9 Web
| Updated By: preethi shettigar

Updated on:Mar 19, 2022 | 7:01 PM

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಂತ ಹಂತವಾಗಿ ಜಾರಿಗೆ ತರಬಹುದಿತ್ತು. ಉನ್ನತ ಶಿಕ್ಷಣ ಮಟ್ಟದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (National Education Policy) ಜಾರಿ ಮಾಡುವುದಕ್ಕೂ ಮೊದಲು ಸ್ವಲ್ಪ ಯೋಚನೆ ಮಾಡಬೇಕಿತ್ತು ಎಂದು ರಾಷ್ಟ್ರೀಯ ಶಿಕ್ಷಣ ನೀತಿಯ ಕರ್ನಾಟಕ ಟಾಸ್ಕ್ ಫೋರ್ಸ್​ನ(Task Force) ಚೇರ್ಮನ್ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಎಮ್. ಮದನ್ ಗೋಪಾಲ್(M. Madan Gopal) ಅವರು ಅಭಿಪ್ರಾಯಪಟ್ಟಿದ್ದಾರೆ.

ಯೂನಿವರ್ಸಲ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ನಡೆದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಸವಾಲುಗಳು ಮತ್ತು ಅವಕಾಶಗಳ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ಘೋಷಣೆ ಮಾಡಿದ ಕೂಡಲೇ ಕಾಲೇಜಿಗಳಲ್ಲಿ ಅನುಷ್ಠಾನ ಬರುತ್ತೆ ಅಂತಾ ನನಗೆ ಅನಿಸುತ್ತಿಲ್ಲ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ನಿಯಮಾವಳಿಯ ಬಗ್ಗೆ ಸಾರ್ವಜನಿಕ ವೇದಿಕೆಗಳಲ್ಲಿ ಹೆಚ್ಚಿನ ಚರ್ಚೆಯಾಗಬೇಕಿದೆ. ಮುಂದಿನ ವರ್ಷ ಮೊದಲ ಹಂತವಾಗಿ ನರ್ಸರಿ ಮಟ್ಟದಲ್ಲಿ ಈ ನೀತಿ ಜಾರಿ ಮಾಡಬೇಕು. ತರಗತಿ ಮೂರರಿಂದ ಹೊಸ ಶಿಕ್ಷಣ ನೀತಿ ಜಾರಿ ಮಾಡುವಾಗ ನಾವು ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.

ಶಾಲಾ ಮಟ್ಟದ ಶೈಕ್ಷಣಿಕ ಸುಧಾರಣೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆದರೆ ಉನ್ನತ ಶಿಕ್ಷಣ ಮಟ್ಟದಲ್ಲಿ ಸರ್ಕಾರ ಇನ್ನಷ್ಟು ಗಮನಹರಿಸಬೇಕಿತ್ತು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಂಪೂರ್ಣವಾಗಿ ಮತ್ತು ಸಮಗ್ರವಾಗಿ ಅರ್ಥಮಾಡಿಕೊಂಡು ಕಾರ್ಯರೂಪಕ್ಕೆ ತರುವಲ್ಲಿ ನಾವು ಎಡವುತ್ತಿದ್ದೇವೆ ಎಂದು ಹೇಳಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಮತ್ತು ಜವಾಬ್ದಾರಿಯನ್ನು ಅತ್ಯಂತ  ವಿವರವಾಗಿ ಚರ್ಚಿಸಲಾಗಿದೆ. ತರಗತಿ-3, ತರಗತಿ -6 ಮತ್ತು ತರಗತಿ-9ರ ಹಂತಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಚಿಂತನೆ ನಡೆಸುವ ಅಗತ್ಯವಿದೆ ಎಂದು ಅವರು ಅಭಿಮತ ವ್ಯಕ್ತಪಡಿಸಿದರು.

ಇನ್ನು ಸಿಇಎಸ್‍ಎಸ್ ನಿರ್ದೇಶಕರಾದ ಪ್ರೊ. ಗೌರೀಶ್ ಜೋಶಿ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿ ಕೇಂದ್ರಿತವಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಒಟ್ಟಾರೆ ಸೂತ್ರಗಳನ್ನು ಅತ್ಯಂತ ನಿಖರವಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ತಿಳಿಸಿದರು.

ಸಮಾಜದ ವಿವಿಧ ವರ್ಗಗಳಾದ ಸಾಮಾಜಿಕ, ಆರ್ಥಿಕ ವರ್ಗದ ಜೊತೆ ಬೇರೆ ಬೇರೆ ವರ್ಗಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ವಿಶೇಷ ಶೈಕ್ಷಣಿಕ ವಲಯ ಸೃಷ್ಟಿಸಬೇಕಿದೆ. ಕೇವಲ ತಯಾರಿ ಹಂತವನ್ನೇ ಮುಂದುವರೆಸಿಕೊಂಡು ಹೋದರೆ ಅದು ತಯಾರಿ ಹಂತದಲ್ಲಿಯೇ ಇರುತ್ತದೆ. ನಾವೀಗ ರಾಷ್ಟ್ರೀಯ ಶೈಕ್ಷಣಿಕ ನೀತಿಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕಿರುವ ಹಂತದಲ್ಲಿದ್ದೇವೆ. ಕೇಂದ್ರ ರೂಪಿಸಿರುವ ಉನ್ನತ ಶಿಕ್ಷಣದ ನೀತಿಯನ್ನು ಸಹ ಕೂಲಂಕುಷವಾಗಿ ಅಧ್ಯಯನ ನಡೆಸಬೇಕಿದೆ. ಹಾಗೇ ಮಾರ್ಪಾಡುಗಳಿದ್ದರೆ ಬದಲಾವಣೆ ಮಾಡಿಕೊಂಡು ಶೀಘ್ರದಲ್ಲಿಯೇ ಜಾರಿಗೊಳಿಸಬೇಕಾಗಿದೆ ಎಂದು ಪ್ರೊ. ಗೌರೀಶ್ ಜೋಶಿ ಹೇಳಿದರು.

ಈ ಸಂವಾದ ಕಾರ್ಯಕ್ರಮದಲ್ಲಿ ಯೂನಿವರ್ಸಲ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ಆರ್. ಉಪೇಂದ್ರ ಶೆಟ್ಟಿಯವರು ಹಾಗೂ ದಕ್ಷಿಣ ಭಾರತದ ವಿವಿಧ ಕಾಲೇಜಿನ ಪ್ರಾಂಶುಪಾಲರುಗಳು ಸೇರಿದಂತೆ ಶಿಕ್ಷಣ ಸಂಸ್ಥೆಯ ಭೋಧಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:

Lake Conservation: ಜನರ ಪಾಲುದಾರಿಕೆಯಿಂದ ಕೆರೆ ಸಮೃದ್ಧಿ ಯೋಜನೆಯ ಆಶಯಕ್ಕೆ ಹೊಸ ವೇಗ ಬಂತು: ಮದನ್ ಗೋಪಾಲ್

ಉತ್ತರಾಖಂಡ್​​ನಲ್ಲಿ ಕೆಲಸ ನೋಡಿ ಮೋದಿಗೆ ವೋಟ್ ಹಾಕ್ತೀವಿ ಅಂದ್ರು, ಇದ್ರಲ್ಲಿ‌ ನನ್ನ ಪ್ಲಾನು-ಪಾತ್ರ ಏನೂ ಇಲ್ಲ ಎಂದ ಉಸ್ತುವಾರಿ ಪ್ರಹ್ಲಾದ್ ಜೋಶಿ

Published On - 6:56 pm, Sat, 19 March 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ