AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಅಸಲಿಗೆ ಏನಾಯ್ತು? ಪೊಲೀಸರು ಹೇಳಿದ್ದೇನು? ಇಲ್ಲಿದೆ ಮಾಹಿತಿ

ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಇಬ್ಬರು ಯುವತಿಯರು ಗಾಯಗೊಂಡಿದ್ದಾರೆ. ಈ ಘಟನೆ ವಿರುದ್ಧ ಮಾಲಾಧಾರಿಗಳು ಪ್ರತಿಭಟನೆ ನಡೆಸಿದ್ದು, ಅನ್ಯ ಕೋಮಿನವರ ಪ್ರದೇಶದಿಂದಲೇ ಕಲ್ಲುಗಳು ತೂರಿ ಬಂದಿವೆ ಎಂದು ಆರೋಪಿಸಿದ್ದಾರೆ. ಪೊಲೀಸರು ಎಫ್‌ಐಆರ್ ದಾಖಲಿಸಿ, ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ್ದಾರೆ. ಅಸಲಿಗೆ ಅಲ್ಲೇನಾಯ್ತು? ಪೊಲೀಸರು ಹೇಳಿದ್ದೇನು ಎಂಬ ಮಾಹಿತಿ ಇಲ್ಲಿದೆ.

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಅಸಲಿಗೆ ಏನಾಯ್ತು? ಪೊಲೀಸರು ಹೇಳಿದ್ದೇನು? ಇಲ್ಲಿದೆ ಮಾಹಿತಿ
ಓಂ ಶಕ್ತಿ ಮಾಲಾಧಾರಿಗಳು
Shivaprasad B
| Edited By: |

Updated on: Jan 05, 2026 | 6:34 AM

Share

ಬೆಂಗಳೂರು, ಜನವರಿ 5: ‘ಓಂ ಓಂ ಶಕ್ತಿಯೇ, ಆದಿಪರಾಶಕ್ತಿಯೇ, ಓಂ ಶಕ್ತಿ, ಜಯ ಶಕ್ತಿ’ ಎನ್ನುತ್ತಾ ಓಂ ಶಕ್ತಿ ಮಾಲಾಧಾರಿಗಳು ಶಕ್ತಿ ದೇವಿಯ ಜಪ ಮಾಡ್ತಾ ತಮಟೆಗೆ ಸದ್ದಿಗೆ ಹೆಜ್ಜೆ ಹಾಕುತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡು ಭಕ್ತಿಯಲ್ಲಿ ಪರವಶರಾಗಿದ್ದರು. ಕ್ಷಣಾರ್ಧದಲ್ಲೇ ಇಡೀ ಪ್ರದೇಶದಲ್ಲೇ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಭಕ್ತರು ದಿಕ್ಕಾಪಾಲಾದರು. ಭಾನುವಾರ ರಾತ್ರಿ 8-30 ಗಂಟೆ ಸುಮಾರಿಗೆ ವಿಎಸ್ ಗಾರ್ಡನ್​ ಬಳಿ ಮಾಲಾಧಾರಿಗಳು ಬರುತ್ತಿದ್ದಂತೆಯೇ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಕಲ್ಲೇಟು ಓಂ ಶಕ್ತಿ ಮಾಲಾಧಾರಿ ಯುವತಿಯರ ತಲೆಗೆ ಬಡಿದು ನೆತ್ತರು ಹರಿದಿದೆ.

ಕಲ್ಲು ತೂರಾಟದ ಬೆನ್ನಲ್ಲೇ, ಕೆರಳಿದ ಮಾಲಾಧಾರಿಗಳು ಜೆಜೆ ನಗರ ಪೊಲೀಸ್ ಸ್ಟೇಷನ್ ಬಳಿಯೇ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ಅನ್ಯ ಕೋಮಿನವರು ಬೇಕಂದೇ ಕಲ್ಲೆಸೆದಿದ್ದಾರೆ. ಕಿಡಿಗೇಡಿಗಳನ್ನ ಬಂಧಿಸಿ. ಪ್ರತಿ ದಿನ ಭಯದಲ್ಲೇ ಜೀವನ ನಡೆಸುತ್ತಿದ್ದೇವೆ. ನಮ್ಮ ಏರಿಯಾಗೂ ಅವರ ಏರಿಯಾ ನಡುವೆ ಗೋಡೆ ನಿರ್ಮಿಸಬೇಕು ಎಂದು ಆಗ್ರಹಿಸಿದ್ದಾರೆ.

‘ಕತ್ತಲೆಯಲ್ಲಿ ಕಲ್ಲು ತೂರಿದ್ದಾರೆ’

ಓಂ ಶಕ್ತಿ ಮಾಲಾಧಾರಿಗಳು ಮೆರವಣಿಗೆ ಮಾಡುತ್ತಿದ್ದಾಗ, ರಾತ್ರಿ 8.10ರ ಸುಮಾರಿಗೆ ಕತ್ತಲೆಯಲ್ಲಿ ಕಲ್ಲು ತೂರಾಟ ನಡೆದಿದೆಎ ಎಂದು ಗಾಯಾಳು ಯುವತಿ ಸಂಬಂಧಿ ಹೇಳಿದ್ದಾರೆ. ‘ಟಿವಿ9’ ಜೊತೆ ಮಾತನಾಡಿದ ವರದರಾಜ್, ನಮ್ಮ ಮಗಳ ತಲೆ ಮೇಲೆ ಕಲ್ಲು ಬಿದ್ದಿದ್ದು ಗಾಯಗೊಂಡಿದ್ದಾಳೆ. ಅನ್ಯಕೋಮಿನವರ ಏರಿಯಾದಿಂದ ಕಲ್ಲುಗಳು ಬಂದು ನಮ್ಮ ಮೇಲೆ ಬಿದ್ದಿವೆ. ಕತ್ತಲೆಯಾದ್ದರಿಂದ ಯಾರು ಕಲ್ಲು ತೂರಿದ್ದಾರೆ ಎಂಬುದು ನಮಗೆ ಗೊತ್ತಾಗಿಲ್ಲ ಎಂದಿದ್ದಾರೆ.

ಎಫ್​ಐಆರ್ ದಾಖಲು, ಆರೋಪಿಗಳ ಬಂಧನಕ್ಕೆ ಬಲೆ

ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ, ಓಂ ಶಕ್ತಿ ಮಾಲಾಧಾರಿಗಳ ಅಧ್ಯಕ್ಷ ಶಶಿಕುಮಾರ್ ದೂರಿನನ್ವಯ ಎಫ್​ಐಆರ್ ದಾಖಲಾಗಿದೆ. ಪೊಲೀಸ್ ಸ್ಟೇಷನ್ ಬಳಿ ಪ್ರತಿಭಟನಾಕಾರರನ್ನು ಮನವೊಲಿಸಲು ಪೊಲೀಸರು ಹರಸಾಹಸ ಪಟ್ಟರು. ಆರೋಪಿಗಳನ್ನು ಬಂಧಿಸುವ ಭರವಸೆ ಕೊಟ್ಟು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂದು ಸಂಸದ ಪಿಸಿ ಮೋಹನ್ ಭೇಟಿ ನೀಡಿದ್ದಾರೆ. ಈ ಕ್ಷೇತ್ರದಲ್ಲಿ ಭಯದಿಂದ ಬದುಕುವ ಪರಿಸ್ಥಿತಿ ಇದೆ. ತೇರು ತಗೊಂಡು ಹೋಗಬಾರದಾ? ಮಾಲೆ ಹಾಕಬಾರದಾ? ಎಂದು ಅವರು ಕಿಡಿಕಾರಿದ್ದಾರೆ.

ಪೊಲೀಸರು ಹೇಳಿದ್ದೇನು?

ಕಲ್ಲೆಸೆತದಲ್ಲಿ ಇಬ್ಬರು ಯುವತಿಯರ ತಲೆಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಗಾಗಲೇ ವರದಿ ತರಿಸಿಕೊಳ್ಳಲಾಗಿದ್ದು, ಎಫ್​ಐಆರ್ ದಾಖಲಿಸಲಾಗಿದೆ. ಇಬ್ಬರು ಇನ್ಸ್​ಪೆಕ್ಟರ್​ಗಳ ತಂಡ ಪ್ರಕರಣದ ತನಿಖೆ ಮಾಡುತ್ತೆ. ಆರೋಪಿಗಳನ್ನು ಅರೆಸ್ಟ್ ಮಾಡುವ ಕೆಲಸ ಆಗುತ್ತದೆ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಎರಡೂ ಏರಿಯಾ ಮಧ್ಯೆ ಗೋಡೆ ನಿರ್ಮಿಸಿ: ಅನ್ಯಕೋಮಿನವರ ಕಿರುಕುಳಕ್ಕೆ ರೋಸಿ ಹೋದ ಹಿಂದೂಗಳು

ಕಲ್ಲುತೂರಾಟದ ಬಳಿಕ ಜೆಜೆ ನಗರ ಬೂದಿ ಮುಚ್ಚಿದ ಕೆಂಡದಂತಿದೆ. ಏರಿಯಾದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದು, ನಿನ್ನೆ ರಾತ್ರಿಯಿಂದಲೇ 2 ಕೆಎಸ್​ಆರ್​ಪಿ ತುಕಡಿ ನಿಯೋಜಿಸಿದ್ದು, ಹೆಜ್ಜೆ ಹೆಜ್ಜೆಗೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ