Vande Bharat Express: ಬೆಂಗಳೂರಿನಲ್ಲಿ ವಂದೇ ಭಾರತ್ ರೈಲಿಗೆ ಕಲ್ಲೇಟು, ಪ್ರಯಾಣಿಕರಿಗೆ ಗಾಯ, ರೈಲ್ವೆ ಇಲಾಖೆಯಿಂದ ಕಠಿಣ ಕ್ರಮದ ಎಚ್ಚರಿಕೆ

ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದ ಮೈಸೂರು-ಚನೈ ವಂದೇ ಭಾರತ ಎಕ್ಸಪ್ರೆಸ್ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ಕೆ ಆರ್​ ಪುರಂ ಮತ್ತು ಬೆಂಗಳೂರು ಕಂಟೋನ್​​ಮೆಂಟ್​​ ರೇಲ್ವೆ ನಿಲ್ದಾಣದ ಮಧ್ಯೆ ನಡೆದಿದೆ.

Vande Bharat Express: ಬೆಂಗಳೂರಿನಲ್ಲಿ ವಂದೇ ಭಾರತ್ ರೈಲಿಗೆ ಕಲ್ಲೇಟು, ಪ್ರಯಾಣಿಕರಿಗೆ ಗಾಯ, ರೈಲ್ವೆ ಇಲಾಖೆಯಿಂದ ಕಠಿಣ ಕ್ರಮದ ಎಚ್ಚರಿಕೆ
ಮೈಸೂರು-ಚನೈ ವಂದೇ ಭಾರತ ಎಕ್ಸಪ್ರೆಸ್ ರೈಲು
Follow us
ವಿವೇಕ ಬಿರಾದಾರ
|

Updated on: Feb 26, 2023 | 9:09 AM

ಬೆಂಗಳೂರು: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಚಾಲನೆ ನೀಡಿದ್ದ ಮೈಸೂರು-ಚನೈ ವಂದೇ ಭಾರತ ಎಕ್ಸಪ್ರೆಸ್ (Chennai-Mysuru Vande Bharat Express)​​ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ಕೆ ಆರ್​ ಪುರಂ (KR Puram) ಮತ್ತು ಬೆಂಗಳೂರು ಕಂಟೋನ್​​ಮೆಂಟ್​​ (Bengaluru cantonment) ರೇಲ್ವೆ ನಿಲ್ದಾಣದ ಮಧ್ಯೆ ನಡೆದಿದೆ. ಘಟನೆಯಲ್ಲಿ ರೈಲಿನ 2 ಗಾಜಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ನೈಋತ್ಯ ರೈಲ್ವೆ (South western Railway) ಇಲಾಖೆ ತಿಳಿಸಿದೆ. ಸದ್ಯ ಕಿಡಿಗೇಡಿಗಳಿಗಾಗಿ ರೇಲ್ವೆ ಪೊಲೀಸರು ಬಲೆ ಬೀಸಿದ್ದಾರೆ. ಈ ಬಗ್ಗೆ ರೇಲ್ವೆ ಇಲಾಖೆ ವಿಷಾದ ವ್ಯಕ್ತಪಡಿಸಿದೆ. ಈ ಬಗ್ಗೆ ಬೆಂಗಳೂರು ರೇಲ್ವೆ ವಿಭಾಗೀಯ ಕಚೇರಿ ಇಲಾಖೆಗೆ ಸಂಬಂಧದಿಸಿದ ವಸ್ತುಗಳಿಗೆ ಹಾನಿಯುಂಟು ಮಾಡಿದರೆ, ಅಂತವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಇನ್ನು ಜನವರಿ ಮತ್ತು ಫೆಬ್ರವರಿಯಲ್ಲಿ ಒಟ್ಟು 21 ಕಲ್ಲು ತೂರಾಟ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರು ವಿಭಾಗದಲ್ಲಿ ಇನ್ನೂ 13 ಪ್ರಕರಣಗಳು ದಾಖಲಾಗಿವೆ ಎಂದು ನೈರುತ್ಯ ರೇಲ್ವೆ ಇಲಾಖೆ ಮಾಹಿತಿ ನೀಡಿದೆ. ಎರಡು ವಾರಗಳ ಹಿಂದೆ, ಶುಕ್ರವಾರ ಸಿಕಂದ್ರಾಬಾದ್​-ವಿಶಾಖಪಟ್ಟಣಂ ವಂದೇ ಭಾರತ ಎಕ್ಸಪ್ರೆಸ್​ ರೈಲು ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ಮೂಲಕ ಹಾದು ಹೋಗುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಿದ್ದರು. ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ, ಕಲ್ಲು ತೂರಾಟದಿಂದಾಗಿ ಒಂದು ಕಿಟಕಿಗೆ ಹಾನಿಯಾಗಿದೆ.

ಈ ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲಾಗಿದೆ. ಇದನ್ನು ಕಳೆದ ವರ್ಷ 2022ರ ನವೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದರು. ಈ ರೈಲು ಬೆಂಗಳೂರು, ಮೈಸೂರಿನಿಂದ, ತಮಿಳುನಾಡಿನ ಚೆನ್ನೈಗೆ ಸಂಪರ್ಕಿಸುತ್ತದೆ. ಇದನ್ನು ಮೇಕ್-ಇನ್-ಇಂಡಿಯಾ ಉಪಕ್ರಮದ ಅಡಿಯಲ್ಲಿ ತಯಾರು ಮಾಡಲಾಗಿದೆ.

ಸದ್ಯ ರೈಲ್ವೇ ಪೊಲೀಸರು ಸ್ಥಳೀಯ ಪೊಲೀಸರ ಜೊತೆಗೂಡಿ ಕಂಟೋನ್ಮೆಂಟ್ ಹಾಗೂ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸರು ಬೆಳಗ್ಗೆ 8.30 ರಿಂದ ವಂದೇ ಭಾರತ್ ರೈಲು ಬಂದು, ಹೋಗವವರೆಗು ಟ್ರ್ಯಾಕ್ ಪ್ಯಾಟ್ರೋಲಿಂಗ್ (ಗಸ್ತು) ಮಾಡುತ್ತಿದ್ದಾರೆ. ಟ್ಯಾನರಿ ರಸ್ತೆ ಬ್ರಿಡ್ಜ್, ಕಲ್ಲಪಲ್ಲಿ ಸ್ಮಶಾನ, ಜೀವನಹಳ್ಳಿ ಸೇರಿ ಹಲವೆಡೆ ಕಡೆ ಗಸ್ತು ತಿರುಗುತ್ತಿದ್ದಾರೆ. ಹಾಗೇ ಬೆಂಗಳೂರು ಸಿಟಿ, ಕೆಂಗೇರಿ, ಹೆಜ್ಜಾಲ, ಕಂಟೋನ್ಮೆಂಟ್ ನಿಂದ ಸಿಟಿ ಹೊರ ಭಾಗದಲ್ಲೂ ಟ್ರ್ಯಾಕ್ ಪ್ಯಾಟ್ರೋಲಿಂಗ್ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ