AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ ಹೆಸರು ಬದಲಾವಣೆ ಬೇಡ: ಸಿಎಂಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಿಳಿಮಲೆ ಮನವಿ

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಸರ್ಕಾರ ಮುಂದಾಗಿದೆ. ಈ ಕುರಿತಾಗಿ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಆದರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಬದಲಾಯಿಸುವ ಪ್ರಸ್ತಾಪವನ್ನು ವಿರೋಧಿಸಿದ್ದಾರೆ.

ದಕ್ಷಿಣ ಕನ್ನಡ ಹೆಸರು ಬದಲಾವಣೆ ಬೇಡ: ಸಿಎಂಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಿಳಿಮಲೆ ಮನವಿ
ಪುರುಷೋತ್ತಮ ಬಿಳಿಮಲೆ, ಡಿಕೆ ಶಿವಕುಮಾರ್​​Image Credit source: facebook
ಕಿರಣ್​ ಸೂರ್ಯ
| Edited By: |

Updated on:Oct 01, 2026 | 8:40 PM

Share

ಮುಖ್ಯಾಂಶಗಳು

  • ದಕ್ಷಿಣ ಕನ್ನಡ ಹೆಸರು ಬದಲಾವಣೆ ಪ್ರಸ್ತಾಪದಿಂದ ಸರ್ಕಾರ ಹಿಂದೆ ಸರಿಯಲಿ
  • ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪುರುಷೋತ್ತಮ ಬಿಳಿಮಲೆ ಆಗ್ರಹ
  • ಸಿಎಂ ಡಿಕೆ ಶಿವಕುಮಾರ್​​ಗೆ ಮನವಿ

ಬೆಂಗಳೂರು, ಅಕ್ಟೋಬರ್​​ 01: ‘ಶತಮಾನಗಳಿಂದಲೂ ತುಳು ಮತ್ತು ಕನ್ನಡ ಭಾಷೆಗಳ ಸಹಬಾಳ್ವೆ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ‘ಮಂಗಳೂರು’ ಎಂದು ಬದಲಾಯಿಸುವ ಪ್ರಸ್ತಾಪದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ. ಈ ಕುರಿತು ಅವರು ಸಿಎಂ ಡಿಕೆ ಶಿವಕುಮಾರ್​ಗೆ ಮನವಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಎನ್ನುವುದು ಕೇವಲ ಆಡಳಿತಾತ್ಮಕ ಹೆಸರಲ್ಲ

ಈ ಕುರಿತಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ‘ದಕ್ಷಿಣ ಕನ್ನಡ ಎನ್ನುವುದು ಕೇವಲ ಒಂದು ಆಡಳಿತಾತ್ಮಕ ಹೆಸರಲ್ಲ. ಅದು ಈ ಭಾಗದ ಶ್ರೀಮಂತ ಐತಿಹಾಸಿಕ ಹಿನ್ನೆಲೆ, ಭಾಷಿಕ ಸಾಮರಸ್ಯ ಹಾಗೂ ಅಖಂಡ ಕರ್ನಾಟಕದೊಂದಿಗಿನ ಅವಿನಾಭಾವ ಸಂಬಂಧವನ್ನು ಬಿಂಬಿಸುವ ವಿಶಿಷ್ಟ ಗುರುತಾಗಿದೆ’ ಎಂದು ಅವರು ಹೇಳಿದ್ದಾರೆ.

ಕನ್ನಡದೊಂದಿಗಿನ ಭಾವನಾತ್ಮಕ ನಂಟಿಗೆ ಧಕ್ಕೆ

‘ತುಳು ಭಾಷೆ ಮತ್ತು ಸಂಸ್ಕೃತಿಗೆ ವಿಶಿಷ್ಟ ಸ್ಥಾನವಿರುವ ಈ ಪ್ರದೇಶದಲ್ಲಿ ಕನ್ನಡವೂ ಜನಜೀವನದ ಅವಿಭಾಜ್ಯ ಅಂಗವಾಗಿದೆ ಎಂದಿರುವ’ ಬಿಳಿಮಲೆ, ಈ ಎರಡೂ ಭಾಷೆಗಳ ಸಹಬಾಳ್ವೆ ದಕ್ಷಿಣ ಕನ್ನಡದ ವೈಶಿಷ್ಠವಾಗಿದ್ದು, ಕನ್ನಡದೊಂದಿಗೆ ಭಾವನಾತ್ಮಕ ನಂಟನ್ನು ಹೊಂದಿರುವ ಈ ಜಿಲ್ಲೆಯ ಹೆಸರನ್ನು ಬದಲಾಯಿಸುವ ಅವಶ್ಯಕತೆ ಇಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ: ಡಿಕೆಶಿ ಮಹತ್ವದ ಘೋಷಣೆ

‘ಹೆಸರಿನ ಬದಲಾವಣೆಯಿಂದ ಈ ಪ್ರದೇಶದ ಕನ್ನಡದೊಂದಿಗಿನ ಮಾನಸಿಕ ಸಂಬಂಧಕ್ಕೂ ಧಕ್ಕೆಯಾಗುವ ಸಾಧ್ಯತೆ ಇದೆ. ರಾಜ್ಯದ ಭಾಷಿಕ ಸಾಮರಸ್ಯದ ದೃಷ್ಠಿಯಿಂದಲೂ ಈ ಕ್ರಮವನ್ನು ಮರುಪರಿಶೀಲಿಸಬೇಕಾದ ಅವಶ್ಯಕತೆಯಿದೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LIVE TV

ಸಚಿವ ಸಂಪುಟದಲ್ಲಿ ಚರ್ಚೆ

ಇನ್ನು ಸೆಪ್ಟೆಂಬರ್​​ನಲ್ಲಿ ಮಂಗಳೂರಿನಲ್ಲಿ ಚೊಚ್ಚಲ ಸಂಪುಟ ಸಭೆ ಮಾಡಲಾಗಿತ್ತು. ಕರಾವಳಿ ಜಿಲ್ಲೆಗಳಿಗೆ ಬಂಪರ್ ಗಿಫ್ಟ್ ನೀಡಲಾಗಿದೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣಕ್ಕೆ ಕರಡು ಪ್ರಕಟಿಸಿದೆ. ಜನಾಭಿಪ್ರಾಯ ಸಂಗ್ರಹಿಸಲು 1ತಿಂಗಳು ಕಾಲಾವಕಾಶ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:24 pm, Thu, 1 October 26

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ