AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕೊವಿಡ್ ರೂಲ್ಸ್ ಜಾರಿ ಸಾಧ್ಯತೆ: ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿಯಿಂದ ಪ್ರಸ್ತಾವನೆ

ಸದ್ಯ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮತ್ತೆ ಪ್ರಸ್ತಾವನೆ ಸಲ್ಲಿಸಲಿದೆ. ಪ್ರಸ್ತಾವನೆಯಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲು ಮನವಿ ಮಾಡಬಹುದು.

ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕೊವಿಡ್ ರೂಲ್ಸ್ ಜಾರಿ ಸಾಧ್ಯತೆ: ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿಯಿಂದ ಪ್ರಸ್ತಾವನೆ
ನೈಟ್​ ಕರ್ಫ್ಯೂ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Dec 05, 2021 | 9:24 AM

Share

ಬೆಂಗಳೂರು: ನಗರದಲ್ಲಿ ಕಳೆದ ನಾಲ್ಕು ದಿನಗಳಿಂದ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕೊವಿಡ್ ರೂಲ್ಸ್ ಜಾರಿಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಶೀಘ್ರದಲ್ಲೇ ಬಿಬಿಎಂಪಿಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಲಿದೆ. ಕಳೆದ ವಾರ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸರ್ಕಾರ ಒಪ್ಪಿದೆ. ಸಭೆ ಸಮಾರಂಭಗಳಿಗೆ ಜನರ ಮಿತಿ ನಿಗದಿ ಮಾಡುವುದು ಮತ್ತು 2 ಡೋಸ್ ಲಸಿಕೆ ಕಡ್ಡಾಯ ಮಾಡಲು ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು.

ಸದ್ಯ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮತ್ತೆ ಪ್ರಸ್ತಾವನೆ ಸಲ್ಲಿಸಲಿದೆ. ಪ್ರಸ್ತಾವನೆಯಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲು ಮನವಿ ಮಾಡಬಹುದು. ಮಾಲ್, ಚಿತ್ರಮಂದಿರ, ಕಲ್ಯಾಣ ಮಂಟಪ, ರೆಸ್ಟೋರೆಂಟ್, ಹೋಟೆಲ್ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಪ್ರವೇಶ ನೀಡುವಂತೆ ಬಿಬಿಎಂಪಿ ತನ್ನ ಪ್ರಸ್ತಾವನೆಯಲ್ಲಿ ತಿಳಿಸುವ ಸಾಧ್ಯತೆ ಹೆಚ್ಚಿದೆ.

ನವೆಂಬರ್ ತಿಂಗಳಲ್ಲಿ 160 ರ ಆಸುಪಾಸಿನಲ್ಲಿದ್ದ ಸೋಂಕಿತರ ಸಂಖ್ಯೆ, ಡಿಸೆಂಬರ್ 1ರಂದು 165ಕ್ಕೆ ಏರಿದೆ. ಇನ್ನು ಡಿಸೆಂಬರ್ 2ಕ್ಕೆ 206, ಡಿಸೆಂಬರ್ 3 ರಂದು 212, ಡಿಸೆಂಬರ್ 4 ರಂದು 207 ಸೋಂಕಿತರ ಸಂಖ್ಯೆ ಕಂಡುಬಂದಿದೆ. ಇಂದು ಕೂಡಾ ಸೋಂಕಿತರ ಸಂಖ್ಯೆ 200 ಗಡಿ ದಾಟುವ ಸಾಧ್ಯತೆಯಿದೆ.

35 ಸಿಬ್ಬಂದಿಗೆ ಕೊವಿಡ್ ಟೆಸ್ಟ್ ವೈದ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದ 35 ಸಿಬ್ಬಂದಿಗೆ ಬಿಬಿಎಂಪಿ ಕೊವಿಡ್ ಟೆಸ್ಟ್ ಮಾಡಿಸಿದೆ. ನ.19, 20, 21 ಮೂರು ದಿನ ಸಮ್ಮೇಳನ ನಡೆದಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಮ್ಮೇಳನ ನಡೆದಿದೆ. ಸಮ್ಮೇಳನದಲ್ಲಿ ಭಾಗಿಯಾಗಿದ್ದ ವೈದ್ಯನಿಗೆ ಒಮಿಕ್ರಾನ್ ತಗುಲಿದ ಹಿನ್ನೆಲೆ ಅತಿಥಿ ಉಪಚಾರ ಮಾಡಿದ್ದ ಸಿಬ್ಬಂದಿಗೆ ಬಿಬಿಎಂಪಿ ಕೊವಿಡ್ ಟೆಸ್ಟ್ ಮಾಡಿಸಿದೆ.

10 ದಿನದಲ್ಲಿ 286 ಮಕ್ಕಳಿಗೆ ಕೊರೊನಾ ಬೆಂಗಳೂರಿನಲ್ಲಿ 10 ದಿನದಲ್ಲಿ 286 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 19 ವರ್ಷದೊಳಗಿನ 286 ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರಲ್ಲಿ 9 ವರ್ಷದೊಳಗಿನ 85 ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ.

ಇದನ್ನೂ ಓದಿ

ಶಿವರಾಂ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ; ಬನಶಂಕರಿ ಚಿತಾಗಾರದಲ್ಲಿ ನಡೆಯಲಿದೆ ಅಂತ್ಯಕ್ರಿಯೆ

ಅಪರೂಪದ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿರುವ ಭಾರತೀಯ ಮೂಲದ ಎಜಾಜ್ ಪಟೇಲ್ ಹೆಸರು ಕ್ರಿಕೆಟ್ ಇತಿಹಾಸದಲ್ಲಿ ಅಜರಾಮರ!

Published On - 8:46 am, Sun, 5 December 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್