Bengaluru Metro: ಮೆಟ್ರೋ ಸಂಚಾರ ಇರಲ್ಲ; ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕಠಿಣ ನಿರ್ಬಂಧ
Bangalore Unlock Guidelines: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಠಿಣ ನಿರ್ಬಂಧ ಇದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದರು. ಜತೆಗೆ ಬೆಂಗಳೂರು ನಗರದಲ್ಲಿ ಮೆಟ್ರೋ ಸಂಚಾರಕ್ಕೂ ಅವಕಾಶವಿಲ್ಲ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಸೋಮವಾರದಿಂದ ( ಜೂನ್ 14) ಲಾಕ್ಡೌನ್ ಸಡಿಲಿಕೆಯಾದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಠಿಣ ನಿರ್ಬಂಧ ಇದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದರು. ಜತೆಗೆ ಬೆಂಗಳೂರು ನಗರದಲ್ಲಿ ಮೆಟ್ರೋ ಸಂಚಾರಕ್ಕೂ ಅವಕಾಶವಿಲ್ಲ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯಾದ್ಯಂತ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳ ಸಂಚಾರಕ್ಕೆ ನಿರ್ಬಂಧವಿದೆ. ಆದರೆ ಖಾಸಗಿ ವಾಹನಗಳಲ್ಲಿ ಅಂತರ್ ಜಿಲ್ಲಾ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ರಾಜ್ಯದಲ್ಲಿ ಆಟೋ, ಟ್ಯಾಕ್ಸಿಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗಷ್ಟೇ ಅವಕಾಶ ನೀಡಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಆದರೆ ಬೆಂಗಳೂರು ನಗರದಲ್ಲಿ ಮೆಟ್ರೋ ಸಂಚಾರಕ್ಕೂ ಅವಕಾಶವಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
ನಿರ್ಮಾಣ ಚಟುವಟಿಕೆ ಆರಂಭಿಸಲು ಅನುಮತಿ ನೀಡಲಾಗುತ್ತದೆ. ಸಿಮೆಂಟ್, ಸ್ಟೀಲ್ ಅಂಗಡಿ ತೆಗೆಯಲು ಅವಕಾಶವಿದೆ. ಎಲ್ಲ ಕಾರ್ಖಾನೆ ಶೇ 50 ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ. ಗಾರ್ಮೆಂಟ್ಸ್ ಶೇ 30 ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಮದ್ಯ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುವುದು. ಬಾರ್ ಮತ್ತು ರೆಸ್ಟೋರೆಂಟ್, ವೈನ್ ಸ್ಟೋರ್, ಎಂಎಸ್ಐಎಲ್ಗಳಲ್ಲಿ ಮಧ್ಯಾಹ್ನ 2ರವರೆಗೆ ಪಾರ್ಸೆಲ್ ಅವಕಾಶವಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.
Work From Home: ತನ್ನ ಉದ್ಯೋಗಿಗಳಿಗೆ ಶಾಶ್ವತವಾಗಿ ವರ್ಕ್ ಫ್ರಂ ಹೋಂ ಅವಕಾಶ ನೀಡಿದ ಫೇಸ್ಬುಕ್
( Strict Restrictions on Bangalore Metro if there is no lockdown in Bengaluru from June 14)