ಬೆಂಗಳೂರು: PES ಕಾಲೇಜಿನ 8ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ (suicide) ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಗರದ ಹೊಸಕೆರೆಹಳ್ಳಿಯಲ್ಲಿ ಘಟನೆ ನಡೆದಿದೆ. ಪಿಇಎಸ್ ಕಾಲೇಜಿನ ಬಿ ಟೆಕ್ ಸೆಕೆಂಡ್ ಸೆಮಿಸ್ಟರ್ ವಿದ್ಯಾರ್ಥಿ ಆದಿತ್ಯ ಪ್ರಭು ಆತ್ಮಹತ್ಯೆ ಮಾಡಿಕೊಂಡಾತ. ಸ್ಥಳಕ್ಕೆ ಗಿರಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇವತ್ತು ಕಾಲೇಜಿನಲ್ಲಿ ಪರೀಕ್ಷೆ ಇತ್ತು. ಆದಿತ್ಯ ಪರೀಕ್ಷೆ ವೇಳೆ ಮೊಬೈಲ್ ಬಳಸುತಿದ್ದ ಎಂಬ ಆರೋಪ ಮಾಡಲಾಗಿದೆ. ಈ ಸಂಬಂಧ ಕಾಲೇಜಿನಲ್ಲಿ ಕೌನ್ಸಿಲಿಂಗ್ ಹಾಗೂ ಮೊಬೈಲ್ ಬಳಸುತಿದ್ದ ಕುರಿತಾಗಿ ಆತನ ಕುಟುಂಬಸ್ಥರಿಗೆ ಮಾಹಿತಿ ನೀಡುತ್ತಿರುವ ಈ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಸದ್ಯ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಲಿದ್ದಾರೆ. ಪಿಇಎಸ್ ಕಾಲೇಜಿಗೆ ಡಾಗ್ ಸ್ಕ್ವಾಡ್ ಆಗಮಿಸಿದೆ.
ಪ್ರಕರಣ ಕುರಿತಾಗಿ ಬೆಂಗಳೂರಿನಲ್ಲಿ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಪ್ರತಿಕ್ರಿಯೆ ನೀಡಿದ್ದು, 8ನೇ ಮಹಡಿಯಿಂದ ಬಿದ್ದು ಆದಿತ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇವತ್ತು ಪಿಇಎಸ್ ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆ ವೇಳೆ ಮೊಬೈಲ್ ಬಳಸುತ್ತಿದ್ದ ಅನ್ನೋ ಆರೋಪ ಇದೆ. ಈ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ಮೃತ ವಿದ್ಯಾರ್ಥಿ ಆದಿತ್ಯ ಪ್ರಭು ಮೂಲತಃ ಮಂಗಳೂರಿನವನು. ಮೃತ ಆದಿತ್ಯ ಪ್ರಭು ಬಿಟೆಕ್ 2ನೇ ಸೆಮಿಸ್ಟರ್ ಓದುತ್ತಿದ್ದ. ಎಲ್ಲಾ ಆಯಾಮದಲ್ಲೂ ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಬಿಬಿಎಂಪಿ ಲಾರಿ ಹರಿದು ಮಹಿಳೆಗೆ ಗಂಭೀರ ಗಾಯವಾಗಿರುವಂತಹ ಘಟನೆ ಬೆಂಗಳೂರಿನ ಹಡ್ಸನ್ ಸರ್ಕಲ್ ಬಳಿ ನಡೆದಿದೆ. ಗಾಯಾಳು ಮಹಿಳೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದು, ಬಿಬಿಎಂಪಿ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಲಸೂರು ಗೇಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮೈಸೂರು ಕೃಷ್ಣರಾಜ ಪೊಲೀಸರು ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ. ದೊರೆಸ್ವಾಮಿ ಬಂಧಿತ ಆರೋಪಿ. ಇನ್ಸಪೆಕ್ಟರ್ ಮಹೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, 2001ರಲ್ಲಿ ಗಂಧದ ಮರ ಕಳ್ಳತನ ಆರೋಪದಡಿ ಬಂಧಿಸಲಾಗಿತ್ತು.
ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಗೆ ಬಂದಿದ್ದ ದೊರೆಸ್ವಾಮಿ, ನಂತರ ನ್ಯಾಯಾಲಯಕ್ಕೂ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದೀಗ ಶ್ರೀರಂಗಪಟ್ಟಣ ಕರಿಘಟ್ಟದಲ್ಲಿ ವಾಸವಾಗಿದ್ದ ಆರೋಪಿಯನ್ನು ಬಂಧಿಸಿ ಮತ್ತೆ ಜೈಲಿಗೆ ಕಳುಹಿಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:32 pm, Mon, 17 July 23