ವಿದ್ಯಾರ್ಥಿನಿ ಸಾವಿಗೆ ಶರಣಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ: ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​

ಅವಕಾಶಗಳು ಆಕಾಶದಷ್ಟು ಇವೆ. ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಮಾರ್ಗಗಳು ಕೂಡ ಇವೆ. ದೃಢ ಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಕಲ್ಪ ಅವರಂತೆ ಜೀವ ತೆಗೆದುಕೊಳ್ಳಬಾರದು. ಇದು ನನ್ನ ಕಳಕಳಿಯ ಮನವಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ವಿದ್ಯಾರ್ಥಿನಿ ಸಾವಿಗೆ ಶರಣಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ: ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
Follow us
TV9 Web
| Updated By: preethi shettigar

Updated on:Nov 27, 2021 | 1:24 PM

ಬೆಂಗಳೂರು: ವೈದ್ಯೆ ಆಗಬೇಕು ಎಂದು ಕನಸು ಕಂಡಿದ್ದ ವಿದ್ಯಾರ್ಥಿನಿಯೊಬ್ಬರು ದ್ವಿತೀಯ ಪಿಯುಸಿಯಲ್ಲಿ ಶೇ.96ರಷ್ಟು ಅಂಕ ಗಳಿಸಿದ್ದರೂ ಅವರಿಗೆ ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬಾರದೇ ಸರಕಾರಿ ಸೀಟು ಸಿಗಲಿಲ್ಲ. ಈ ಕಾರಣಕ್ಕೆ ಆ ಹೆಣ್ಣುಮಗಳು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಚನ್ನಪಟ್ಟಣ ಗ್ರಾಮದ ಸಂಕಲ್ಪ ಎಂಬ ವಿದ್ಯಾರ್ಥಿನಿ ಸಾವಿಗೆ ಶರಣಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಹೀಗೆ ಜೀವವನ್ನು ಕೊನೆ ಮಾಡಿಕೊಂಡ ಆ ಯುವತಿಯ ದುರ್ಮರಣ ಎಲ್ಲರಿಗೂ ಪಾಠ ಆಗಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕು ಹಾಗೂ ಉನ್ನತ ಶಿಕ್ಷಣ ಬಡ, ಸಾಮಾನ್ಯ ಮಕ್ಕಳಿಗೂ ಸಿಗಬೇಕು ಎನ್ನುವ ಕಾಳಜಿಯ ಜತೆಗೆ, ಯಾರೇ ವಿದ್ಯಾರ್ಥಿಗಳು ಸೀಟು ಸಿಗಲಿಲ್ಲ ಎನ್ನುವ ಕಾರಣಕ್ಕೆ ಸಂಕಲ್ಪ ಅವರಂತೆ ಬದುಕನ್ನು ಕೊನೆ ಮಾಡಿಕೊಳ್ಳಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಅವಕಾಶಗಳು ಆಕಾಶದಷ್ಟು ಇವೆ. ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಮಾರ್ಗಗಳು ಕೂಡ ಇವೆ. ದೃಢ ಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಕಲ್ಪ ಅವರಂತೆ ಜೀವ ತೆಗೆದುಕೊಳ್ಳಬಾರದು. ಇದು ನನ್ನ ಕಳಕಳಿಯ ಮನವಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರಕಾರವೂ ಇಂತಹ ನಿಲುವಿಗೆ ಬರಲಿ. ರಾಜ್ಯದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸಂಕಲ್ಪ ಅವರ ಹಾದಿ ಹಿಡಿಯುವುದನ್ನು ತಪ್ಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ಡಿಸೆಂಬರ್​ 27 ರಂದು ನಡೆದ ಘಟನೆ ಇದಾಗಿದೆ. ಆದರೆ ಸಂಕಲ್ಪ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನು ನಿಖರವಾದ ಕಾರಣ ತಿಳಿದು ಬಂದಿಲ್ಲ. ಪೊಲೀಸ್ ಕೂಡ ವಿದ್ಯಾರ್ಥಿನಿ ಸಾವಿಗೆ ನಿಜವಾದ ಕಾರಣ ಏನು ಎಂಬ ಬಗ್ಗೆ ಸ್ಪಷ್ಟನೆ ನೀಡಿಲ್ಲ.

ಇದನ್ನೂ ಓದಿ: ತಾಯಿಯ ಮೊಬೈಲ್‌ಗೆ ‌ಮೆಸೇಜ್ ಕಳುಹಿಸಿ ಹದಿಹರೆಯದ ಬಾಲಕಿ ಕೆರೆಗೆ ಹಾರಿ ಆತ್ಮಹತ್ಯೆ

ಕಾಸರಗೋಡಿನಲ್ಲಿ ಮಲಯಾಳೀಕರಣ ನಡೆದಿಲ್ಲ: ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದ ಅಶ್ರಫ್​ಗೆ ಅಭಿನಂದನೆ ತಿಳಿಸಿದ ಹೆಚ್​ಡಿಕೆ

Published On - 12:30 pm, Sat, 27 November 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ