ಸರ್ಕಾರಿ ಬಸ್​ನಿಂದ ಬಿದ್ದು ವಿದ್ಯಾರ್ಥಿನಿ ಸಾವು: ಮುಂಜಾಗ್ರತೆ ಕ್ರಮ ಕೈಗೊಳ್ಳಲುವಂತೆ ಕರಾರಸಾನಿ ಸೂಚನೆ

ಸರ್ಕಾರಿ ಬಸ್​ನಿಂದ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿನಿ ನಿನ್ನೆ ಮೃತಪಟ್ಟ ಹಿನ್ನೆಲೆ ಪ್ರಯಾಣಿಸುವ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ಸಾರಿಗೆ ನಿಗಮ ಸುತ್ತೋಲೆ ಹೊರಡಿಸಿದೆ.

ಸರ್ಕಾರಿ ಬಸ್​ನಿಂದ ಬಿದ್ದು ವಿದ್ಯಾರ್ಥಿನಿ ಸಾವು: ಮುಂಜಾಗ್ರತೆ ಕ್ರಮ ಕೈಗೊಳ್ಳಲುವಂತೆ ಕರಾರಸಾನಿ ಸೂಚನೆ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 13, 2023 | 7:37 PM

ಬೆಂಗಳೂರು: ಕಿಕ್ಕಿರಿದು ತುಂಬಿದ್ದ ಸರ್ಕಾರಿ ಬಸ್​ನಿಂದ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿನಿ ನಿನ್ನೆ ಮೃತಪಟ್ಟ ದಾರಣ ಘಟನೆಯೊಂದು ಹಾವೇರಿ (Haveri) ಜಿಲ್ಲೆಯ ಹಾನಗಲ್​ ತಾಲೂಕಿನ ಕುಸನೂರ ಗ್ರಾಮದಲ್ಲಿ ಸಂಭವಿಸಿತ್ತು. ಈ ಕುರಿತಾಗಿ ಸಾರಿಗೆ ಮತ್ತು ಮುಜರಾಯಿ ಸಚಿವರು ತೀವ್ರ ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲನಾ ಸಿಬ್ಬಂದಿಗಳಿಗೆ ಕೆಲ ಸೂಕ್ತ ನಿರ್ದೇಶನಗಳನ್ನು ನೀಡುವ ಮೂಲಕ ಕರ್ನಾಟಕ ರಾಜ್ಯ ಸಾರಿಗೆ ನಿಗಮ (KSRTC) ಸುತ್ತೋಲೆ ಹೊರಡಿಸಿದೆ.

ಸುತ್ತೋಲೆಯಲ್ಲಿ ಏನಿದೆ?

ಸಾರಿಗೆ ಸಂಸ್ಥೆಗಳ ಬಸ್​ಗಳಲ್ಲಿ, ಪ್ರಯಾಣಿಸುವ ಪ್ರಯಾಣಿಕರ ಸುರಕ್ಷತೆಯು ನಮ್ಮ ಆದ್ಯ ಕರ್ತವ್ಯವಾಗಿರುತ್ತದೆ ಆದರೆ, ಜೂನ್​ 12ರಂದು ವಾ.ಕ.ರ.ಸಾ ಸಂಸ್ಥೆಯ ಹಾವೇರಿ ವಿಭಾಗದ ಹಾನಗಲ್‌ ಘಟಕದ ವಾಹನವು ಕಾರ್ಯಾಚರಣೆಯಲ್ಲಿರುವಾಗ ಓರ್ವ ವಿದ್ಯಾರ್ಥಿನಿಯು ವಾಹನದಿಂದ ಕೆಳಗೆ ಬಿದ್ದು, ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟಿರುವಂತಹ ದುರಾದೃಷ್ಟಕರ ಘಟನೆ ವರದಿಯಾಗಿದೆ.

ಇದನ್ನೂ ಓದಿ: Haveri News: ಬಸ್‌ ರಶ್‌ಗೆ ಬಾಲಕಿ ಬಲಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ದುರಂತ ಅಂತ್ಯ

ಈ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು ತೀವ್ರ ವಿಷಾದ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಈ ರೀತಿಯ ಅವಘಡಗಳು ಸಾರಿಗೆ ಸಂಸ್ಥೆಯ ಬಸ್​ಗಳಲ್ಲಿ, ನಡೆಯದಂತೆ ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಅದರಂತೆ, ಕರ್ತವ್ಯ ನಿರ್ವಹಿಸುತ್ತಿರುವ ಚಾಲನಾ ಸಿಬ್ಬಂದಿಗಳಿಗೆ ಈ ಕೆಳಕಂಡಂತೆ ಸೂಕ್ತ ನಿರ್ದೇಶನಗಳನ್ನು ಸಹ ನೀಡಲಾಗಿದೆ.

ಇದನ್ನೂ ಓದಿ: ನಾವು ನಷ್ಟ ಮಾಡಿ ನಿಮ್ಮನ್ನು ಲಾಭದಲ್ಲಿ ಇಡಬೇಕಾ: ಬಿಲ್ ಕಟ್ಟಿ ಎಂದ ಹೆಸ್ಕಾಂ ಎಂಡಿಗೆ ಕೈಗಾರಿಕೋದ್ಯಮಿಗಳ ಪ್ರಶ್ನೆ

  • ಚಾಲನಾ ಸಿಬ್ಬಂದಿಗಳು ವಾಹನವನ್ನು ಘಟಕದಿಂದ ಕಾರ್ಯಾಚರಣೆಗೆ ತೆಗೆದುಕೊಂಡು ಹೋಗುವ ಮೊದಲು ವಾಹನದ ಬಾಗಿಲುಗಳು ಸುಸ್ಥಿತಿಯಲ್ಲಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು.
  • ಪ್ರತಿಯೊಂದು ಬಸ್‌ ನಿಲ್ದಾಣಗಳಲ್ಲಿ ವಾಹನದ ನಿರ್ವಾಹಕರು ವಾಹನದ ಹಿಂದಿನ ಬಾಗಿಲನ್ನು ಮುಚ್ಚಿರುವ ಬಗ್ಗೆ ಖಾತ್ರಿಪಡಿಸಿಕೊಂಡು ಚಾಲಕರಿಗೆ ಸೂಚನೆ ನೀಡಿದ ನಂತರವೇ ಚಾಲಕರು ವಾಹನವನ್ನು ಚಾಲನೆ ಮಾಡಬೇಕು.
  • ವಾಹನದ ಪುಟ್‌ಬೋರ್ಡ್‌ನಲ್ಲಿ ಪ್ರಯಾಣಿಕರು ನಿಂತು ಪ್ರಯಾಣಿಸಲು ಅವಕಾಶ ನೀಡದಂತೆ ಕ್ರಮಕೈಗೊಳ್ಳಬೇಕು.
  • ಚಾಲಕರು ವಾಹನದ ಮುಂದಿನ ಹಿಂದಿನ ಬಾಗಿಲನ್ನು ಮುಚ್ಚಿರುವ ಬಗೆ, ಖಾತ್ರಿಸಿಕೊಂಡು ವಾಹನ ಚಾಲನೆ ಮಾಡಬೇಕು.
  • ಬಸ್​ ನಿಲ್ದಾಣ ತಲುವುವ ಮುಂಚೆ ವಾಹನದ ಬಾಗಿಲನ್ನು ತೆರೆಯದೆ ಬಸ್‌ ನಿಲ್ದಾಣ ಅಥವಾ ನಿಲುಗಡೆ ಸ್ಥಳದಲ್ಲಿ, ಬಸ್‌ ನಿಲ್ಲಿಸಿದ ನಂತರ ಬಾಗಿಲನ್ನು ತೆರೆದು ಪ್ರಯಾಣಿಕರನ್ನು ಇಳಿಸಬೇಕು.

ಈ ಎಲ್ಲಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರ್ನಾಟಕ ರಾಜ್ಯ ಸಾರಿಗೆ ನಿಗಮ ಸೂಚನೆ ನೀಡಿದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:37 pm, Tue, 13 June 23

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ