ಬೆಂಗಳೂರು: ಕಿಕ್ಕಿರಿದು ತುಂಬಿದ್ದ ಸರ್ಕಾರಿ ಬಸ್ನಿಂದ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿನಿ ನಿನ್ನೆ ಮೃತಪಟ್ಟ ದಾರಣ ಘಟನೆಯೊಂದು ಹಾವೇರಿ (Haveri) ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರ ಗ್ರಾಮದಲ್ಲಿ ಸಂಭವಿಸಿತ್ತು. ಈ ಕುರಿತಾಗಿ ಸಾರಿಗೆ ಮತ್ತು ಮುಜರಾಯಿ ಸಚಿವರು ತೀವ್ರ ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲನಾ ಸಿಬ್ಬಂದಿಗಳಿಗೆ ಕೆಲ ಸೂಕ್ತ ನಿರ್ದೇಶನಗಳನ್ನು ನೀಡುವ ಮೂಲಕ ಕರ್ನಾಟಕ ರಾಜ್ಯ ಸಾರಿಗೆ ನಿಗಮ (KSRTC) ಸುತ್ತೋಲೆ ಹೊರಡಿಸಿದೆ.
ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ, ಪ್ರಯಾಣಿಸುವ ಪ್ರಯಾಣಿಕರ ಸುರಕ್ಷತೆಯು ನಮ್ಮ ಆದ್ಯ ಕರ್ತವ್ಯವಾಗಿರುತ್ತದೆ ಆದರೆ, ಜೂನ್ 12ರಂದು ವಾ.ಕ.ರ.ಸಾ ಸಂಸ್ಥೆಯ ಹಾವೇರಿ ವಿಭಾಗದ ಹಾನಗಲ್ ಘಟಕದ ವಾಹನವು ಕಾರ್ಯಾಚರಣೆಯಲ್ಲಿರುವಾಗ ಓರ್ವ ವಿದ್ಯಾರ್ಥಿನಿಯು ವಾಹನದಿಂದ ಕೆಳಗೆ ಬಿದ್ದು, ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟಿರುವಂತಹ ದುರಾದೃಷ್ಟಕರ ಘಟನೆ ವರದಿಯಾಗಿದೆ.
ಇದನ್ನೂ ಓದಿ: Haveri News: ಬಸ್ ರಶ್‌ಗೆ ಬಾಲಕಿ ಬಲಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ದುರಂತ ಅಂತ್ಯ
ಈ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು ತೀವ್ರ ವಿಷಾದ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಈ ರೀತಿಯ ಅವಘಡಗಳು ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ, ನಡೆಯದಂತೆ ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಅದರಂತೆ, ಕರ್ತವ್ಯ ನಿರ್ವಹಿಸುತ್ತಿರುವ ಚಾಲನಾ ಸಿಬ್ಬಂದಿಗಳಿಗೆ ಈ ಕೆಳಕಂಡಂತೆ ಸೂಕ್ತ ನಿರ್ದೇಶನಗಳನ್ನು ಸಹ ನೀಡಲಾಗಿದೆ.
ಇದನ್ನೂ ಓದಿ: ನಾವು ನಷ್ಟ ಮಾಡಿ ನಿಮ್ಮನ್ನು ಲಾಭದಲ್ಲಿ ಇಡಬೇಕಾ: ಬಿಲ್ ಕಟ್ಟಿ ಎಂದ ಹೆಸ್ಕಾಂ ಎಂಡಿಗೆ ಕೈಗಾರಿಕೋದ್ಯಮಿಗಳ ಪ್ರಶ್ನೆ
ಈ ಎಲ್ಲಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರ್ನಾಟಕ ರಾಜ್ಯ ಸಾರಿಗೆ ನಿಗಮ ಸೂಚನೆ ನೀಡಿದೆ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:37 pm, Tue, 13 June 23