ಆನ್ಲೈನ್ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್! ಲೋನ್ ಕಟ್ಟಿಲ್ಲವೆಂದು ಟಾರ್ಚರ್, ನೇಣಿಗೆ ಶರಣಾದ ವಿದ್ಯಾರ್ಥಿ
ಆನ್ಲೈನ್ ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್ ಹುಷಾರ್. ಲೋನ್ ಕಟ್ಟಿಲ್ಲ ಎಂದು ಚೀನಾ ಮೂಲದ ಆ್ಯಪ್ ಕಂಪನಿ ಟಾರ್ಚರ್ ನೀಡಿದ್ದು, ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ನಗರದ ಹೆಚ್ಎಂಟಿ ಕ್ವಾರ್ಟರ್ಸ್ನಲ್ಲಿ ನಡೆದಿದೆ.
ಬೆಂಗಳೂರು: ಚೀನಾ ಆ್ಯಪ್ (China app) ಮೂಲಕ ಲೋನ್ ಪಡೆದಿದ್ದ ವಿದ್ಯಾರ್ಥಿ ನೇಣಿಗೆ ಶರಣಾಗಿರುವಂತಹ ಘಟನೆ ನಗರದ ಹೆಚ್ಎಂಟಿ ಕ್ವಾರ್ಟರ್ಸ್ನಲ್ಲಿ ನಡೆದಿದೆ. ತೇಜಸ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸ್ನೇಹಿತ ಮಹೇಶ್ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದಿದ್ದ. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಲೋನ್ ಕೊಟ್ಟವರು ಟಾರ್ಚರ್ ನೀಡುತ್ತಿದ್ದರಂತೆ. ಹಾಗಾಗಿ ಡೆತ್ ನೋಟ್ ಬರೆದಿಟ್ಟು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ತಾಯಿಯ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
‘ಅಪ್ಪ ಅಮ್ಮ ನನ್ನನ್ನ ಕ್ಷಮಿಸಿ. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿಯಿಲ್ಲ’ ‘ಮಾಡಿರುವ ಸಾಲ ತೀರಿಸಲು ಆಗುವುದಿಲ್ಲ, ಇದು ನನ್ನ ಕೊನೆ ತೀರ್ಮಾನ’ ‘ಥ್ಯಾಂಕ್ಸ್ ಗುಡ್ ಬೈ’ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಜಾಲಹಳ್ಳಿ ಪೊಲೀಸ್ ಠಾಣೆಗೆ ತೇಜಸ್ ಪೋಷಕರು ದೂರು ನೀಡಿದಿದ್ದಾರೆ.
ಇದನ್ನೂ ಓದಿ: Chikkaballapur News: ವೈದ್ಯನಾಗಬೇಕೆಂಬ ಕನಸು ಕಂಡಿದ್ದ ವಿದ್ಯಾರ್ಥಿ, ಕನಸು ನನಸಾಗದೇ ಆತ್ಮಹತ್ಯೆಗೆ ಶರಣು
ಲಾರಿ ಹರಿದು ಪಾದಚಾರಿ ಸ್ಥಳದಲ್ಲೇ ಸಾವು
ಬೆಳಗಾವಿ: ಲಾರಿಹರಿದು ಪಾದಚಾರಿ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಯರಗಟ್ಟಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದಿದೆ. ಸಂತೋಷ್ ಹಿರೇಮಠ(24) ಮೃತ ಪಾದಚಾರಿ. ಲಾರಿ ಬರ್ತಿದ್ದನ್ನು ನೋಡಿ ಡ್ರೈವರ್‌ಗೆ ನಿಲ್ಲುವಂತೆ ಹೇಳಿ ಮುಂದೆ ಹೋಗಿದ್ದಾರೆ. ಪಾದಚಾರಿ ರಸ್ತೆ ಕ್ರಾಸ್ ಮಾಡಿದ್ದಾನೆ ಅಂತಾ ಚಾಲಕ ಲಾರಿ ಚಲಾಯಿಸಿದ್ದಾನೆ. ಈ ವೇಳೆ ಲಾರಿ ಚಕ್ರಕ್ಕೆ ಪಾದಚಾರಿ ಸಿಲುಕಿ ಸಾವನ್ನಪ್ಪಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಇದನ್ನೂ ಓದಿ: Ramanagara News: ಕೆಎಸ್ಆರ್ಟಿಸಿ ಬಸ್ಗೆ ಬೈಕ್ ಡಿಕ್ಕಿ; ವಿದ್ಯಾರ್ಥಿ ಸಾವು
ನೇಣು ಹಾಕಿಕೊಂಡು ಚಿತ್ರಕಲಾ ಶಿಕ್ಷಕ ಆತ್ಮಹತ್ಯೆ
ಬಾಗಲಕೋಟೆ: ನೇಣು ಹಾಕಿಕೊಂಡು ಚಿತ್ರಕಲಾ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ನಡೆದಿದೆ. ರಂಗನಾಥ ಕಂಬಾರ(38) ನೇಣಿಗೆ ಶರಣಾದ ಶಿಕ್ಷಕ. ಮೊರಾರ್ಜಿ ದೇಸಾಯಿ ವಸತಿ ಶಾಲೆ ಶಿಕ್ಷಕರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಗುಳೇದಗುಡ್ಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:54 pm, Wed, 12 July 23