ಶುಲ್ಕ ಸಮರಕ್ಕೆ ಎಸ್​ಎಸ್​ಎಲ್​ಸಿ ಪರೀಕ್ಷೆಯಿಂದ ವಂಚಿತಳಾದ ಪ್ರತಿಭಾನ್ವಿತ ವಿದ್ಯಾರ್ಥಿನಿ

ಕೊರಟಗೆರೆಯ ಹನುಮಂತಪುರ ನಿವಾಸಿ ಗ್ರೀಷ್ಮ ನಾಯಕ್.ಎನ್ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 2020-21 ನೇ ಸಾಲಿನ 10 ನೇ ತರಗತಿ ಅಭ್ಯಾಸ ಮಾಡುತ್ತಿದ್ದಳು. ಕಳೆದ ವರ್ಷದ ಶಾಲಾ ಶುಲ್ಕ ಮತ್ತು ವಸತಿ ಮತ್ತು ಊಟದ ಶುಲ್ಕ ಬಾಕಿಯಿರುವುದಕ್ಕೆ, ಶಾಲಾ ಸಂಸ್ಥೆ ಎಸ್ಎಸ್ಎಲ್​ಸಿ ಪರೀಕ್ಷೆಗೆ ನೋಂದಾಯಿಸಿಲ್ಲ.

ಶುಲ್ಕ ಸಮರಕ್ಕೆ ಎಸ್​ಎಸ್​ಎಲ್​ಸಿ ಪರೀಕ್ಷೆಯಿಂದ ವಂಚಿತಳಾದ ಪ್ರತಿಭಾನ್ವಿತ ವಿದ್ಯಾರ್ಥಿನಿ
ಗ್ರೀಷ್ಮ ನಾಯಕ್.ಎನ್
Follow us
| Updated By: ಸಾಧು ಶ್ರೀನಾಥ್​

Updated on:Jul 16, 2021 | 4:27 PM

ಬೆಂಗಳೂರು: ಶಾಲೆ ಶುಲ್ಕ ಪಾವತಿಸುವ ಸಮರಕ್ಕೆ ಪ್ರತಿಭಾನ್ವಿತ ವಿದ್ಯಾರ್ಥಿನಿ ಪರೀಕ್ಷೆಯಿಂದ ವಂಚಿತಳಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಗ್ರೀಷ್ಮ ನಾಯಕ್.ಎನ್ ಫೀಸ್ ಕಟ್ಟಿಲ್ಲ ಎಂದು ಖಾಸಗಿ ಶಿಕ್ಷಣ ಸಂಸ್ಥೆ ಪರೀಕ್ಷೆಗೆ ನಿರ್ಬಂಧ ಹೇರಿದೆ. ಹೀಗಾಗಿ ನೊಂದ ವಿದ್ಯಾರ್ಥಿನಿ ಡಿಸೆಂಬರ್ ನಲ್ಲಿಯೇ ಶಿಕ್ಷಣ ಸಚಿವ ಸುರೇಶ್ ಕುಮಾರ್​ ಅವರ ಬಳಿ ತನ್ನ ಸಮಸ್ಯೆಯನ್ನು ಹೇಳಿದ್ದಳು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಪರೀಕ್ಷೆ ಬರೆಯಲೇ ಬೇಕು ಎಂದು ನಿರ್ಧರಿಸಿದ ವಿದ್ಯಾರ್ಥಿನಿ ಸದ್ಯ ನ್ಯಾಯಕ್ಕಾಗಿ ಮಕ್ಕಳ ಹಕ್ಕುಗಳ ಆಯೋಗದ ಮೊರೆ ಹೋಗಿದ್ದಾಳೆ

ಕೊರಟಗೆರೆಯ ಹನುಮಂತಪುರ ನಿವಾಸಿ ಗ್ರೀಷ್ಮ ನಾಯಕ್.ಎನ್ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 2020-21 ನೇ ಸಾಲಿನ 10 ನೇ ತರಗತಿ ಅಭ್ಯಾಸ ಮಾಡುತ್ತಿದ್ದಳು. ಕಳೆದ ವರ್ಷದ ಶಾಲಾ ಶುಲ್ಕ ಮತ್ತು ವಸತಿ ಮತ್ತು ಊಟದ ಶುಲ್ಕ ಬಾಕಿಯಿರುವುದಕ್ಕೆ, ಶಾಲಾ ಸಂಸ್ಥೆ ಎಸ್ಎಸ್ಎಲ್​ಸಿ ಪರೀಕ್ಷೆಗೆ ನೋಂದಾಯಿಸಿಲ್ಲ. 9ನೇ ತರಗತಿಯಲ್ಲಿ 96% ಅಂಕ ಗಳಿಸಿದ್ದೇನೆ, ಹೀಗಾಗಿ 10 ನೇ ತರಗತಿ ಪರೀಕ್ಷೆ ಬರೆಯಲು ಅವಕಾಶ ಕೊಡಿಸಿ ಎಂದು ವಿದ್ಯಾರ್ಥಿನಿ ಗ್ರೀಷ್ಮಾ ಮನವಿ ಮಾಡಿದ್ದಾಳೆ.

ಇನ್ನು ಈ ಸಮಸ್ಯೆ ಗಮನಕ್ಕೆ ತಂದ ಮೇಲೆ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ವಿದ್ಯಾರ್ಥಿನಿಗೆ ಬರುವ ಆಗಸ್ಟ್​ನಲ್ಲಿ ಪರೀಕ್ಷೆ ತೆಗೆದುಕೊಳ್ಳಲು ತಿಳಿಸಿದ್ದಾರೆ. ಹೀಗಾಗಿ ನೊಂದ ವಿದ್ಯಾರ್ಥಿನಿ ಪ್ರಸಕ್ತ ಸಾಲಿನಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾಳೆ. ಅಲ್ಲದೆ ಕೊರೊನಾ ಸೋಂಕಿತ ಮಕ್ಕಳಿಗೂ ಎಕ್ಸಾಂ ಬರೆಯಲು ಅವಕಾಶ ನೀಡಿದ್ದೀರಾ, ಅವರಿಗೆ ಪ್ರತ್ಯೇಕ ಕೊಠಡಿ ಅಥವಾ ಕೊವಿಡ್ ಕೇರ್ ಸೆಂಟರ್​ನಲ್ಲಿ ಪರೀಕ್ಷೆ ವ್ಯವಸ್ಥೆ ಮಾಡಿದ್ದೀರಾ. ಪರೀಕ್ಷೆ ಬರೆಯುವ ಉತ್ಸಾಹ ಇರುವ ನನಗೆ ಮಾತ್ರ ಯಾಕಿಲ್ಲ ಅವಕಾಶ ಎಂದು ಗ್ರೀಷ್ಮಾ ತನ್ನ ಅಳಲನ್ನು ತೋಡಿಕೊಂಡಿದ್ದಾಳೆ.

ನೀವು ನಿಗದಿಪಡಿಸಿದ ಎಕ್ಸಾಂ ಸೆಂಟರ್​ಗೆ ಬಂದು ಪರೀಕ್ಷೆ ಎದುರಿಸಲು ಗ್ರೀಷ್ಮಾ ಸಿದ್ಧವಾಗಿದ್ದಾಳೆ ಎಂದು ಗ್ರೀಷ್ಮಾ ಪೋಷಕರು ತಿಳಿಸಿದ್ದು, ಇದೇ 19 ಮತ್ತು 22 ರಂದು ಪರೀಕ್ಷೆಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ. ಆದರೆ ಶಿಕ್ಷಣ ಇಲಾಖೆಯಿಂದ ನ್ಯಾಯ ಸಿಗದ ಕಾರಣ ಮಕ್ಕಳ ಹಕ್ಕುಗಳ ಮೊರೆ ಹೋದ ವಿದ್ಯಾರ್ಥಿನಿ ಮತ್ತು ಆಕೆಯ ಪೋಷಕರು ಇಂದು ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.

ಎಸ್​ಎಸ್​ಎಲ್​ಸಿ ಹಾಲ್ ಟಿಕೆಟ್​ಗಾಗಿ ಶಾಲೆ ಎದುರು ಕುಟುಂಬದವರಿಂದ ಧರಣಿ ಇನ್ನೇನು ಜುಲೈ 19 ಎದುರಿಗೆ ಇದೆ. ಈ ಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗುವ ದಿನ. ಅದರೆ ದುರ್ದೈವ ಅಂದ್ರೆ ಇನ್ನೂ ಅನೇಕ ವಿದ್ಯಾರ್ಥಿಗಳಿಗೆ ಹಾಲ್​ ಟಿಕೆಟ್​​ ಕೈಗೆ ಸೇರಿಲ್ಲ. ಇದಕ್ಕೆ ಶಾಲಾ ಆಡಳಿತ ಮಂಡಳಿಗಳ ದಿವ್ಯ ನಿರ್ಲಕ್ಷ್ಯ ಕಾರಣವಾಗಿದೆ. ಜೊತೆಗೆ ಅದೇಕೋ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸಹ ಈ ನತದೃಷ್ಟ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸದೆ ಮೌನಕ್ಕೆ ಶರಣಾಗಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಎಸ್​ಎಸ್​ಎಲ್​ಸಿ ಹಾಲ್ ಟಿಕೆಟ್​ಗಾಗಿ ವಿದ್ಯಾರ್ಥಿ ಕುಟುಂಬದವರು ಕಳೆದ ನಾಲ್ಕು ದಿನದಿಂದ ಶಾಲೆ ಮುಂದೆ ಧರಣಿ ಕುಳಿತಿದ್ದಾರೆ.

ಬಾಗಲಕೊಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಆಸಂಗಿ ಸರ್ಕಾರಿ ಪ್ರೌಢಶಾಲೆಯಲ್ಲಿ, ಇಬ್ಬರು ವಿದ್ಯಾರ್ಥಿಗಳ ಜತೆ ಅಜ್ಜಿ, ಮಾವ ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಶಾಲೆಯ ಮುಖ್ಯಶಿಕ್ಷಕ ಡೆಂಗ್ರೆ ಅವರನ್ನು ಕೇಳಿದರೆ ಮೂಸಾ ಅಕ್ರೂಟ ಹಾಗೂ ಮೋಸಿನ ಮೋಮಿನ್ ಎನ್ನುವ ವಿದ್ಯಾರ್ಥಿಗಳು ಫೋಟೋ ಕೊಟ್ಟಿಲ್ಲ. ಈ ಬಗ್ಗೆ ಪಾಲಕರಿಗೆ ಹೇಳಿದರೂ ಕೊನೆಗಳಿಗೆವರೆಗೂ ತಂದು ಕೊಟ್ಟಿಲ್ಲ ಹೀಗಾಗಿ ಪರೀಕ್ಷೆ ಬಗ್ಗೆ ಆಸಕ್ತಿ ಇರಲಿಕ್ಕಿಲ್ಲ ಎಂದು ನಾವು ಸುಮ್ಮನಾದೆವು. ಉಳಿದ ಎಲ್ಲಾ ವಿದ್ಯಾರ್ಥಿಗಳ ಹಾಲ್ ಟಿಕೆಟ್ ಬಂದಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಶಿಕ್ಷಣ ಇಲಾಖೆಯ ಸುತ್ತೋಲೆಗೂ ಡೋಂಟ್ ಕೇರ್; ನೋ ಫೀಸ್, ನೋ ಹಾಲ್ ಟಿಕೆಟ್ ಎಂದು ಪಟ್ಟು ಹಿಡಿದ ಖಾಸಗಿ ಶಾಲೆಗಳು

SSLC Exam 2021: ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೋಂದಾಯಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪಿಯುಸಿ ಪ್ರವೇಶ: ಸಚಿವ ಸುರೇಶ್ ಕುಮಾರ್

Published On - 9:47 am, Fri, 16 July 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!