ಖಾದಿ ಬೋರ್ಡ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ನಿರಾಕರಣೆ; ಎಕ್ಸ್ ಸೆಂಟರ್ ಸಿಬ್ಬಂದಿ ವಿರುದ್ಧ ಅಭ್ಯರ್ಥಿಗಳ ಆಕ್ರೋಶ
ಇಂದು (ಮಾರ್ಚ್ 12) ಮಧ್ಯಾಹ್ನ ಮೂರು ಗಂಟೆಗೆ ಆರಂಭವಾಗಬೇಕಿದ್ದ ಪರೀಕ್ಷೆ ಆರಂಭವಾಗಿಲ್ಲ. ಹೀಗಾಗಿ ಪರೀಕ್ಷಾ ಕೇಂದ್ರ ಅಂತ ಗುರುತಿಸಿದ್ರು ಪರೀಕ್ಷೆ ಬರೆಯಲು ಅವಕಾಶ ನೀಡದ ಆಡಳಿತ ಮಂಡಳಿ, ಗೀತಂ ಯೂನಿವರ್ಸಿಟಿ ವಿರುದ್ಧ ನೂರಾರು ಅಭ್ಯರ್ಥಿಗಳು ಆಕ್ರೋಶಗೊಂಡಿದ್ದಾರೆ.
ಬೆಂಗಳೂರು: ತಾಂತ್ರಿಕ ಕಾರಣ ಹೇಳಿ ಖಾದಿ ಬೋರ್ಡ್ ಪರೀಕ್ಷೆ(Khadi board exams) ಬರೆಯಲು ವಿದ್ಯಾರ್ಥಿಗಳಿಗೆ(Students) ನಿರಾಕರಿಸಲಾಗಿದೆ. ಹೀಗಾಗಿ ಪರೀಕ್ಷೆ(Exam) ಬರೆಯಲು ಅವಕಾಶ ನೀಡದ ಎಕ್ಸ್ ಸೆಂಟರ್ ಸಿಬ್ಬಂದಿ ವಿರುದ್ಧ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿವರ್ಸಿಟಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು (ಮಾರ್ಚ್ 12) ಮಧ್ಯಾಹ್ನ ಮೂರು ಗಂಟೆಗೆ ಆರಂಭವಾಗಬೇಕಿದ್ದ ಪರೀಕ್ಷೆ ಆರಂಭವಾಗಿಲ್ಲ. ಹೀಗಾಗಿ ಪರೀಕ್ಷಾ ಕೇಂದ್ರ ಅಂತ ಗುರುತಿಸಿದ್ರು ಪರೀಕ್ಷೆ ಬರೆಯಲು ಅವಕಾಶ ನೀಡದ ಆಡಳಿತ ಮಂಡಳಿ, ಗೀತಂ ಯೂನಿವರ್ಸಿಟಿ ವಿರುದ್ಧ ನೂರಾರು ಅಭ್ಯರ್ಥಿಗಳು ಆಕ್ರೋಶಗೊಂಡಿದ್ದಾರೆ.
ಸಾವಿರಾರು ಕನಸ್ಸು ಕಟ್ಟಿಕೊಂಡು ಬಂದಿದ್ದು, ಪರೀಕ್ಷೆ ಬರೆಯಲು ಕೊಡುತ್ತಿಲ್ಲ. ತಮಗೆ ನ್ಯಾಯ ಕೊಡಿಸುವಂತೆ ಕಾಲೇಜು ಮುಂದೆ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ.
ಬಳ್ಳಾರಿಯಲ್ಲಿಯೂ ಪರೀಕ್ಷೆ ಮುಂದೂಡಿಕೆ
ಬಳ್ಳಾರಿಯ ಆರ್ವೈಎಂಇಎಸ್ ಕಾಲೇಜಿನಲ್ಲಿ ನಡೆಯಬೇಕಾಗಿದ್ದ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಪರೀಕ್ಷೆ ಮುಂದೂಡಲಾಗಿದೆ. ‘ಸಿ’ ಗ್ರೂಪ್ ಹುದ್ದೆಗಳಿಗೆ ಇಂದು ಮದ್ಯಾಹ್ನ 3 ರಿಂದ ಸಂಜೆ 5:15 ರವರೆಗೆ ನಡೆಯಬೇಕಾಗಿದ್ದ ಪರೀಕ್ಷೆ ಮುಂದೂಡಲಾಗಿದೆ. ತಾಂತ್ರಿಕ ದೋಷದಿಂದ ಪರೀಕ್ಷೆ ನಡೆದಿಲ್ಲ. ಹೀಗಾಗಿ ಪರೀಕ್ಷಾರ್ಥಿಗಳು ಪರದಾಟ ನಡೆಸಿದ್ದು, 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ಮುಂಜಾನೆಯಿಂದ ಪರೀಕ್ಷೆ ಬರೆಯಲು ಕಾದು ಕಾದು ಸುಸ್ತಾಗಿದ್ದು, ಸಂಜೆ 5:30ರವರೆಗೂ ಪರೀಕ್ಷೆ ನಡೆದಿಲ್ಲ. ಈಗ ಟಿಸಿಎಸ್ ಸಂಸ್ಥೆ ಪರೀಕ್ಷೆ ಮುಂದೂಡಿದೆ. ಮುಂದಿನ ದಿನಾಂಕ ವೆಬ್ ಸೈಟ್ನಲ್ಲಿ ಪ್ರಕಟಿಸುವುದಾಗಿ ಹೇಳಿಕೆ ನೀಡಿದೆ.
ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಬೆಂಗಳೂರು: ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಪದವಿ ಪೂರ್ವ ಶಿಕ್ಷಣ ಮಂಡಳಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಮಾಡಿದೆ. ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.
ಈ ಹಿಂದೆ ಏಪ್ರಿಲ್ 16 ರಿಂದ ಮೇ 6ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿರುವ ಬಗ್ಗೆ ಪದವಿಪೂರ್ವ ಶಿಕ್ಷಣ ಮಂಡಳಿ ಘೋಷಣೆ ಮಾಡಿತ್ತು. ಆದ್ರೆ ದ್ವಿತೀಯ PU ಪರೀಕ್ಷೆ ಸಂದರ್ಭದಲ್ಲಿ JEE ಮುಖ್ಯ ಪರೀಕ್ಷೆ ಹಿನ್ನೆಲೆ ಪರಿಷ್ಕೃತ ವೇಳಾಪಟ್ಟಿ ಸಿದ್ಧ ಮಾಡಲಾಗಿದೆ. ಸದ್ಯ ಏಪ್ರಿಲ್ 22ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ದಿನಾಂಕ ಘೋಷಿಸಿದೆ. ಈ ಹಿಂದೆ ವೇಳಾಪಟ್ಟಿಯ ಬಗ್ಗೆ ಅಕ್ಷೇಪಣೆ ಸಲಿಸಲು ಮಾರ್ಚ್ 5 ಸಂಜೆ 5 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿತ್ತು. ಸದ್ಯ ಯಾವುದೇ ಅಕ್ಷೇಪಣೆಗಳಿಲ್ಲದ ಕಾರಣ ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.
ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ ಏಪ್ರಿಲ್ 22ರಂದು ವ್ಯವಹಾರ ಅಧ್ಯಯನ ಪರೀಕ್ಷೆ ಏಪ್ರಿಲ್ 23ರಂದು ಗಣಿತ ಪರೀಕ್ಷೆ, ಏಪ್ರಿಲ್ 25ರಂದು ಅರ್ಥಶಾಸ್ತ್ರ ಏಪ್ರಿಲ್ 26ರಂದು ಮನಃಶಾಸ್ತ್ರ, ರಾಸಾಯನ ಶಾಸ್ತ್ರ ಪರೀಕ್ಷೆ ಏಪ್ರಿಲ್ 27ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ ಏಪ್ರಿಲ್ 27ರಂದು ಉರ್ದು, ಸಂಸ್ಕೃತ, ಫ್ರೆಂಚ್ ಏಪ್ರಿಲ್ 28ರಂದು ಕನ್ನಡ, ಅರೇಬಿಕ್ ಭಾಷಾ ಪರೀಕ್ಷೆ ಮೇ 2ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ ಮೇ 5ರಂದು ಇಂಗ್ಲಿಷ್ ಭಾಷಾ ಪರೀಕ್ಷೆ ಮೇ 10ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ ಮೇ 12ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ ಮೇ 14ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ಮೇ 17ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಮೇ 17ರಂದು ಹೋಮ್ ಸೈನ್ಸ್, ಮೇ 18ರಂದು ಹಿಂದಿ ಪರೀಕ್ಷೆ
ಇದನ್ನೂ ಓದಿ: ಮೈಸೂರು: ಮಗನ ಸಾವಿನ ಹಿಂದೆ ಸೊಸೆ ಕೈವಾಡವಿರುವ ಶಂಕೆ, ಒಂದು ತಿಂಗಳ ಹಿಂದೆ ಹೂತಿಟ್ಟಿದ್ದ ಶವ ಹೊರಗೆ ತೆಗೆದು ಪರೀಕ್ಷೆ
ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆಗೆ ಅಡ್ಡೆಯಾದ ಬೀದರ್; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ
Published On - 5:38 pm, Sat, 12 March 22