ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ಆರಂಭ, ವಿದ್ಯಾರ್ಥಿಗಳ ಮೇಲಿನ FIR ಹಿಂಪಡೆಯುವಂತೆ ಆಗ್ರಹ

ಹಣ ವರ್ಗಾವಣೆ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳ ಮೇಲೆ ದಾಖಲಿಸಿದ ಎಫ್​ಐಆರ್ ಹಿಂಪಡೆಯುವಂತೆ ಆಗ್ರಹಿಸಲಾಗುತ್ತಿದೆ.

ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ಆರಂಭ, ವಿದ್ಯಾರ್ಥಿಗಳ ಮೇಲಿನ FIR ಹಿಂಪಡೆಯುವಂತೆ ಆಗ್ರಹ
ಬೆಂಗಳೂರು ವಿಶ್ವವಿದ್ಯಾಲಯ
Follow us
TV9 Web
| Updated By: Rakesh Nayak Manchi

Updated on:May 30, 2022 | 2:40 PM

ಬೆಂಗಳೂರು: ಹಣ ವರ್ಗಾವಣೆ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯ (Bengaluru University)ದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ (Protest) ಆರಂಭಗೊಂಡಿದ್ದು, ವಿವಿಯ ಕೇಂದ್ರ ಕಚೇರಿ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು (Students) ಜಮಾಯಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ವೇಣುಗೋಪಾಲ್ ಅಕ್ರಮ (Illegal)ವಾಗಿ 28 ಕೋಟಿ ಮೊತ್ತದ ಬಿಲ್‌ಗೆ ಅನುಮೋದನೆ ನೀಡಿದ್ದಾರೆ ಎಂದು ವಿಶ್ವವಿದ್ಯಾಲಯದ  ಸಿಬ್ಬಂದಿ, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿ FIR ಹಾಕಲಾಗಿದ್ದು, ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಬಸವಕಲ್ಯಾಣದ ಮೂಲ ಅನುಭವ ಮಂಟಪಕ್ಕಾಗಿ ಜೂನ್ 12ರಂದು ಪ್ರತಿಭಟನೆ; ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗಶ್ರೀ

ಎಫ್​ಐಆರ್ ಬಗ್ಗೆ ಮಾತನಾಡಿದ ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿ ಗೋಪಾಲ್, ನ್ಯಾಯ ಕೇಳಲು ಹೋದ ವಿದ್ಯಾರ್ಥಿಗಳ ಮೇಲೆ ಕಂಪ್ಲೇಟ್ ಕೊಟ್ಟಿದ್ದಾರೆ. ವಿದ್ಯಾರ್ಥಿಗಳು ನ್ಯಾಯ ಕೇಳುವುದು ತಪ್ಪಾ?  ಉಪ ಕುಲಪತಿ ಪ್ರೊ.ವೇಣುಗೋಪಾಲ್ ಇರೋದೆ ಇನ್ನು ಹತ್ತು ದಿನ ಮಾತ್ರ. ಹಣವನ್ನ ವರ್ಗಾವಣೆಗೆ ಮುಂದಾದ ಉಪ ಕುಲಪತಿಯವರನ್ನು ನಾವು ಪ್ರಶ್ನೆ ಮಾಡಿದ್ದೇವೆ. ಆದರೆ, ವಿದ್ಯಾರ್ಥಿಗಳ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿ ಎಫ್ಐಆರ್ ಹಾಕಿದ್ದಾರೆ. ದೌರ್ಜನ್ಯ ಆರೋಪದ ಅಡಿ ಹಂಗಾಮಿ ವಿತ್ತಾಧಿಕಾರಿ ವಿತ್ತ ವಿಜಯಲಕ್ಷ್ಮಿ ದೂರು ನೀಡಿದ್ದಾರೆ. ಕೂಡಲೇ ವಿದ್ಯಾರ್ಥಿಗಳ ಮೇಲಿನ ದೂರು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ವಿವಿ ಸಂಶೋಧನಾ ವಿದ್ಯಾರ್ಥಿ ಚಂದ್ರು ಪೆರಿಯಾರ್ ಮಾತನಾಡಿ, ವೇಣುಗೋಪಾಲ್ ಬಂದ ಮೇಲೆ ಬೆಂಗಳೂರು ವಿವಿ ಅನೇಕ ಭ್ರಷ್ಟಚಾರವಾಗಿದೆ. ವಿಸಿ ವೇಣುಗೋಪಾಲ್ ತಮ್ಮ ಸಂಬಂಧಿಕರಿಗೆ ತರಾತುರಿಯ ಟೆಂಡರ್ ನೀಡಲು ಮುಂದಾಗಿದ್ದಾರೆ. ಹಂಗಾಮಿ ವಿತ್ತಾಧಿಕಾರಿ ರಾತ್ರೊ ರಾತ್ರಿ ಹಣ ಬಿಡುಗಡೆ ಮಾಡಿಸಿಕೊಳ್ಳುತ್ತಾರೆ. ಇದನ್ನ ಪ್ರಶ್ನೆ ಮಾಡಲು ಬಂದ ವಿದ್ಯಾರ್ಥಿಗಳ ಮೇಲೆ ಕಂಪ್ಲೇಟ್ ನೀಡುತ್ತಾರೆ. ನಾವು ಉಪ ಕುಲಪತಿ ಮೇಲೆ 2 ಸಾವಿರ ಕೇಸ್ ಹಾಕುತ್ತೆವೆ. ನಿನ್ನೆ ಗಲಾಟೆಯಾಗಿದೆ ಸಂಜೆ ಎಪ್ಐಆರ್ ಮಾಡಿದ್ದಾರೆ. ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ದೂರು ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಮೇಲಿನ ಎಫ್ಐಆರ್ ವಾಪಸ್ ಪಡೆಯವರೆಗೂ ಹೋರಾಟ ಮಾಡುತ್ತೇವೆ. ವಿತ್ತ ಅಧಿಕಾರಿ ಜಯಲಕ್ಷ್ಮಿ ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ವೇಣುಗೋಪಾಲ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಬರೋಬ್ಬರಿ 28 ಕೋಟಿ ಮೊತ್ತದ ಬಿಲ್​ಗೆ ಉಪ ಕುಲಪತಿ ವೇಣುಗೋಪಾಲ್ ಅವರು ಮೇ 26ರಂದು ಅನುಮೋದನೆ ಮಾಡಿಕೊಂಡಿದ್ದಾರೆ.  ಕಚೇರಿ ಅವಧಿ ಮುಗಿದ ಬಳಿಕವೂ ಅನುಮೋದನೆ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಸಿಂಡಿಕೇಟ್ ಸಭೆ ಮಾಡದೆ ಅನುಮೋದನೆ ಪಡೆದಿದ್ದಾರೆಂದು ಆರೋಪಿಸಲಾಗಿದೆ. ಜೂನ್ 11ಕ್ಕೆ ಪ್ರೊ.ವೇಣುಗೋಪಾಲ್ ಅವಧಿ ಅಂತ್ಯವಾಗಲಿದ್ದು, ಈ ಸಂದರ್ಭದಲ್ಲಿ ಇಷ್ಟು ದೊಡ್ಡ ಮೊತ್ತ ಅನುಮೋದನೆ ಮಾಡಿಕೊಂಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:10 pm, Mon, 30 May 22

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ