ಪ್ರಾಣಿ ವಧೆಗೆ ಸ್ಟನ್ನಿಂಗ್ ಕಡ್ಡಾಯ?; ಹಲಾಲ್, ಜಟ್ಕಾ ವಿವಾದದ ನಡುವೆ ಪಶುಸಂಗೋಪನಾ ಇಲಾಖೆ ಮಹತ್ವದ ಆದೇಶ

ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನುಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ (stunning) ಕಡ್ಡಾಯವಾಗಿ ಇರಲಿದೆ. ಪಶುಸಂಗೋಪನಾ‌ ಇಲಾಖೆಯಿಂದ ಈ ಬಗ್ಗೆ ಆದೇಶ ನೀಡಲಾಗಿದೆ.

ಪ್ರಾಣಿ ವಧೆಗೆ ಸ್ಟನ್ನಿಂಗ್ ಕಡ್ಡಾಯ?; ಹಲಾಲ್, ಜಟ್ಕಾ ವಿವಾದದ ನಡುವೆ ಪಶುಸಂಗೋಪನಾ ಇಲಾಖೆ ಮಹತ್ವದ ಆದೇಶ
Edited By:

Updated on: Apr 02, 2022 | 12:43 PM

ಬೆಂಗಳೂರು: ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿಚಾರದ ನಡುವೆ ಪಶು ಸಂಗೋಪನಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ ಎಂದು ಹೇಳಲಾಗಿತ್ತು. ಅದರಂತೆ, ಇನ್ನು ಮುಂದೆ ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸೂಚನೆ ನೀಡಲಾಗಿದೆ. ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನುಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ (stunning) ಕಡ್ಡಾಯವಾಗಿ ಇರಲಿದೆ. ಪಶುಸಂಗೋಪನಾ‌ ಇಲಾಖೆಯಿಂದ ಈ ಬಗ್ಗೆ ಆದೇಶ ನೀಡಲಾಗಿದೆ ಎಂದು ತಿಳಿಸಲಾಗಿತ್ತು.

ಆದರೆ, ಈ ಮಧ್ಯೆ ಇದೀಗ ಸ್ಟನ್ನಿಂಗ್ ಕಡ್ಡಾಯ ನಿಯಮ ಆದೇಶವನ್ನು ನಾವು ಹೊರಡಿಸಿಲ್ಲ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ. ನಮ್ಮ ಇಲಾಖೆಯಿಂದ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಟಿವಿ9ಗೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿಕೆ ನೀಡಿದ್ದಾರೆ. ಸ್ಟನ್ನಿಂಗ್ ಕಡ್ಡಾಯ ಆದೇಶ ಮಾಡಿಲ್ಲ. ಪತ್ರ ಬರೆದಿದ್ದಾರೆ ಅಷ್ಟೇ. ಹಲಾಲ್ ಕಟ್ ಮಾಡಬಾರದು ಎಂದು ಪತ್ರ ಬರೆದಿದ್ದಾರೆ ಅಷ್ಟೇ. ಯಾವುದೇ ರೀತಿಯ ಆದೇಶವನ್ನು ಹೊರಡಿಸಿಲ್ಲ. ಪತ್ರದ ಬಗ್ಗೆ ನಾನು ಪರಿಶೀಲನೆ ಮಾಡುತ್ತೇನೆ ಎಂದು ಪ್ರಭು ಚೌಹಾಣ್ ತಿಳಿಸಿದ್ದಾರೆ.

ಪ್ರಾಣಿ ವಧೆ ಮಾಡುವ ಮುನ್ನ ಸ್ಟನ್ನಿಂಗ್ ಮಾಡಿಸಲೇಬೇಕು ಎಂದು ಹೇಳಲಾಗಿತ್ತು. ಕೋಳಿ, ಕುರಿ ಅಂಗಡಿಗಳಿಗೆ ಈ ಬಗ್ಗೆ ಸುತ್ತೋಲೆ ಹೊರಡಿಸಿ ಪಶುಸಂಗೋಪನಾ ಇಲಾಖೆ ಆದೇಶ ಹೊರಡಿಸಿದೆ ಎಂದು ತಿಳಿಸಲಾಗಿತ್ತು. Stunning ಎಂದರೆ, ಪ್ರಾಣಿಗಳನ್ನು ವಧೆ ಮಾಡುವ ಮೊದಲು ಪ್ರಜ್ಞೆ ತಪ್ಪಿಸುವ ವಿಧಾನ ಆಗಿದೆ. ಪ್ರಜ್ಞೆ ತಪ್ಪಿಸುವುದರಿಂದ ಪ್ರಾಣಿಗಳನ್ನು ಸಾಯಿಸುವಾಗ‌ ಅವುಗಳಿಗೆ ನೋವು ತಿಳಿಯುವುದಿಲ್ಲ. ಯಾವುದೇ ಅಂಗಡಿಗಳಲ್ಲಿ ಇದನ್ನು ಪಾಲನೆ ಮಾಡದ ಹಿನ್ನೆಲೆ, ಅನೇಕ ದೂರುಗಳು ಪಶು ಸಂಗೋಪನಾ ಇಲಾಖೆಗೆ ಬಂದಿದ್ದವು. ಹೀಗಾಗಿ ಈಗ ಆದೇಶ ಹೊರಡಿಸಲಾಗಿದೆ ಎಂದು ಸುದ್ದಿಯಾಗಿತ್ತು.

ಆಹಾರಕ್ಕಾಗಿ ಪ್ರಾಣಿವಧೆ ಮಾಡುವಾಗ ಹಿಂಸೆ ನೀಡಬಾರದು. ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕು. ಬೆಂಗಳೂರು ವ್ಯಾಪ್ತಿಯಲ್ಲಿ ‘ಸ್ಟನ್ನಿಂಗ್’ ಮಾಡುವುದು ಕಡ್ಡಾಯ ಎಂದು ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಉಮಾಪತಿ ತಿಳಿಸಿದ್ದರು. ಪ್ರಾಣಿಗಳಿಗೆ ಹಿಂಸೆ ನೀಡಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮೀರಿದರೆ 50 ಸಾವಿರದಿಂದ 1 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು ಎಂದು ತಿಳಿಸಲಾಗಿತ್ತು.

ಇದನ್ನೂ ಓದಿ: ಸ್ಟನ್ನಿಂಗ್ ಕಡ್ಡಾಯ ನಿಯಮ ಆದೇಶವನ್ನು ನಮ್ಮ ಇಲಾಖೆಯಿಂದ ಹೊರಡಿಸಿಲ್ಲ: ಪ್ರಭು ಚೌಹಾಣ್ ಹೇಳಿಕೆ

ಸ್ಟನ್ನಿಂಗ್ ಎಂದರೇನು?

ಸ್ಟನ್ನಿಂಗ್ ಮೆಥಡ್‌ನಿಂದ ಪ್ರಾಣಿಗಳು ನರಳಾಟದಿಂದ ಸಾಯೋದಿಲ್ಲ. ಸ್ಟನ್ನಿಂಗ್ ವೇಳೆ ಪ್ರಾಣಿಗಳ ತಲೆಗೆ ಜೋರಾಗಿ ಹೊಡೆಯಲಾಗುತ್ತದೆ. ಆಗ ಪ್ರಾಣಿಗಳ ತಲೆಗೆ ಪೆಟ್ಟು ಬಿದ್ದು ಅವುಗಳ ಮೆದುಳು ನಿಷ್ಕ್ರಿಯಗೊಳ್ಳುತ್ತದೆ. ಆ ವೇಳೆ ಪ್ರಾಣಿಗಳನ್ನು ವಧೆ ಮಾಡಲಾಗುತ್ತದೆ. ಹೀಗೆ, ಇನ್ನು ಮುಂದೆ ಕೋಳಿ, ಕುರಿ ಅಂಗಡಿಗಳಿಗೆ ಲೈಸೆನ್ಸ್ ಕೊಡುವಾಗಲೂ stunning facility ಕಡ್ಡಾಯ ಆಗಿ ಇರಲೇಬೇಕು ಎಂದು ತಿಳಿಸಲಾಗಿತ್ತು.

Stunning facility ಇಲ್ಲದೆ ಹೋದರೆ ಪರವಾನಗಿ ನೀಡಬಾರದು. 2001 ರ ಸೆಕ್ಷನ್ 6 ಮತ್ತು 4 ರ ಅಡಿಯಲ್ಲಿ stunning ನಿಯಮ ಇದೆ. ನಿಯಮ ಬ್ರೇಕ್ ಮಾಡುವವರಿಗೆ 1960 ಆಕ್ಟ್ ಪ್ರಕಾರ 5 ಸಾವಿರದಿಂದ 50 ಸಾವಿರದವರೆಗೂ ದಂಡ ವಿಧಿಸಲಾಗುವುದು ಎಂದು ಸೂಚನೆ ಕೊಡಲಾಗಿದೆ. ಆಕ್ಟ್ ಅಡಿಯಲ್ಲಿ ಪ್ರಾಣಿ ಹಿಂಸೆಯ ಕೇಸ್ ಕೂಡಾ ದಾಖಲು ಮಾಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ ಆಹಾರಕ್ಕಾಗಿ ಕೋಳಿ, ಕುರಿ ವಧೆ ಮಾಡುವವರು ಈ ನಿಯಮ ಅನುಸರಿಸಬೇಕಾಗಿದೆ ಎನ್ನಲಾಗಿತ್ತು.

YouTube video player

ಇದನ್ನೂ ಓದಿ: ಜಟ್ಕಾ Vs ಹಲಾಲ್ : ಇವುಗಳ ನಡುವೆ ಏನಿದೆ ವ್ಯತ್ಯಾಸ? ಯಾವ ಮಾಂಸ ಉತ್ತಮ?

ಇದನ್ನೂ ಓದಿ: ಹಲಾಲ್ VS ಜಟ್ಕಾ ಕಟ್: ಕರ್ನಾಟಕದಲ್ಲಿ ಮುಂದುವರಿದ ವಿವಾದ, ಹಲವೆಡೆ ಕರಪಪತ್ರ ಹಂಚಿಕೆ ಫಲಕ ತೆರವು

Published On - 9:49 am, Sat, 2 April 22

TV9 Web

TV9 Kannada

Read More
Loading...
Unable to load recommendations.
Follow Us