ಎಬಿವಿಪಿ ಕಾರ್ಯಕರ್ತರ ಮುತ್ತಿಗೆ ಬಳಿಕ ಎಚ್ಚೆತ್ತ ಅಧಿಕಾರಿಗಳು: ಬೆಂಗಳೂರಿನ ಜೆ.ಸಿ.ನಗರ ಠಾಣೆಗೆ ಪ್ರಭಾರ ಇನ್ಸ್‌ಪೆಕ್ಟರ್​ ಆಗಿ ಸುಬ್ರಮಣಿ ನಿಯೋಜನೆ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 01, 2022 | 7:38 AM

ಗೃಹ ಸಚಿವರ ಮನೆಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ರಂಪಾಟ ಮಾಡಿದ್ದರು. ಘಟನೆ ಬಳಿಕ ಎಚ್ಚೆತ್ತ ಹಿರಿಯ ಅಧಿಕಾರಿಗಳಿಂದ ಪ್ರಭಾರ ಇನ್ಸ್‌ಪೆಕ್ಟರ್ ನಿಯೋಜನೆ ಮಾಡಲಾಗಿದೆ.

ಎಬಿವಿಪಿ ಕಾರ್ಯಕರ್ತರ ಮುತ್ತಿಗೆ ಬಳಿಕ ಎಚ್ಚೆತ್ತ ಅಧಿಕಾರಿಗಳು: ಬೆಂಗಳೂರಿನ ಜೆ.ಸಿ.ನಗರ ಠಾಣೆಗೆ ಪ್ರಭಾರ ಇನ್ಸ್‌ಪೆಕ್ಟರ್​ ಆಗಿ ಸುಬ್ರಮಣಿ ನಿಯೋಜನೆ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಬೆಂಗಳೂರಿನ ಜೆ.ಸಿ.ನಗರ ಠಾಣೆಗೆ ಪ್ರಭಾರಿ ಇನ್ಸ್‌ಪೆಕ್ಟರ್​ ಆಗಿ ಎಟಿಸಿ ಇನ್ಸ್‌ಪೆಕ್ಟರ್ ಸುಬ್ರಮಣಿ ಅವರನ್ನು ನಿಯೋಜನೆ ಮಾಡಲಾಗಿದೆ. ಕೆಲ ದಿನಗಳ ಹಿಂದೆಯಷ್ಟೆ ಜೆ.ಸಿ ನಗರ ಠಾಣೆ ಇನ್ಸ್‌ಪೆಕ್ಟರ್ ವರ್ಗಾವಣೆಯಾಗಿದ್ದು, ವರ್ಗಾವಣೆ ಬಳಿಕ ಠಾಣಾ ಇನ್ಸ್‌ಪೆಕ್ಟರ್ ಹುದ್ದೆ ಖಾಲಿ ಇತ್ತು. ಠಾಣೆಗೆ ಹೊಸ ಇನ್ಸ್‌ಪೆಕ್ಟರ್ ನಿಯೋಜನೆಯಾಗಿರಲಿಲ್ಲ. ಅದೇ ಸಂದರ್ಭದಲ್ಲಿ ಗೃಹ ಸಚಿವರ ಮನೆಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ರಂಪಾಟ ಮಾಡಿದ್ದರು. ಘಟನೆ ಬಳಿಕ ಎಚ್ಚೆತ್ತ ಹಿರಿಯ ಅಧಿಕಾರಿಗಳಿಂದ ಪ್ರಭಾರ ಇನ್ಸ್‌ಪೆಕ್ಟರ್ ನಿಯೋಜನೆ ಮಾಡಲಾಗಿದೆ. ಜೆ.ಸಿ ನಗರ ಠಾಣಾ ವ್ಯಾಪ್ತಿಯಲ್ಲೆ ನಾಲ್ಕು ಸಚಿವರ ನಿವಾಸಗಳಿವೆ. ಜಯಮಹಲ್ ಏರಿಯಾದಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಶಶಿಕಲಾ ಜೊಲ್ಲೆ, ಪ್ರಭು ಚೌವ್ಹಾಣ್ ಹಾಗೂ ಬಿ.ಸಿ ಪಾಟೀಲ್, ಹಾಗೂ ಶಿವರಾಮ್ ಹೆಬ್ಬಾರ್ ನಿವಾಸಗಳಿದ್ದು, ಸದ್ಯ ಸಚಿವರ ನಿವಾಸಗಳಿಗೆ ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ಸಂಸದರಿಗೆ ಹೂವು ನೀಡಲು ಬಂದ ಕಾರ್ಯಕರ್ತೆ ಪೊಲೀಸರ ವಶಕ್ಕೆ

ಗೃಹಸಚಿವರ ಸರ್ಕಾರಿ ನಿವಾಸಕ್ಕೆ ಎಬಿವಿಪಿ ಮುತ್ತಿಗೆ

ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಳ ಹಿನ್ನೆಲೆ ಕಠಿಣ ಕ್ರಮಕ್ಕೆ ಹಾಗೂ ಪಿಎಫ್​ಐ, ಎಸ್​ಡಿಪಿಐ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕರ್ತರು ಗೃಹಸಚಿವರ ಸರ್ಕಾರಿ ನಿವಾಸಕ್ಕೆ (ಜುಲೈ 30ರಂದು) ಮುತ್ತಿಗೆ ಹಾಕಿದ್ದರು. ಜಯಮಹಲ್​ನಲ್ಲಿರುವ ಗೃಹ ಸಚಿವರ ಸರ್ಕಾರಿ ನಿವಾಸದ ಎದುರು ಭಾರೀ ಪ್ರತಿಭಟನೆ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರ ಪ್ರತಿಭಟನೆಯ ಕಿಚ್ಚಿಗೆ ಹೈರಾಣಾಗಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದು, ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ; ಕೃಷಿ ದಾಸೋಹ: ಹೊಸ ಪ್ರಯೋಗದಿಂದ ದಾಳಿಂಬೆ ಬೆಳೆದು ಕೃಷಿಯಲ್ಲಿ ಕ್ರಾಂತಿ ಮಾಡಿದ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ

ಬಜರಂಗದಳ ಹರ್ಷ ಕೊಲೆ ಹಾಗೂ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿರುವುದು ಬಿಜೆಪಿ ಆಡಳಿತಾವಧಿಯಲ್ಲೇ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂಬ ಆಕ್ರೋಶ ಕಾರ್ಯಕರ್ತರಲ್ಲಿ ವ್ಯಕ್ತವಾಗುತ್ತಿದೆ. ಸದ್ಯ ಪ್ರವೀಣ್ ಹತ್ಯೆ ಬಳಿಕೆ ರಾಜ್ಯ ಬಿಜೆಪಿ ಸರ್ಕಾರ ತಮ್ಮದೇ ಕಾರ್ಯಕರ್ತರ ನಿರಂತರ ಪ್ರತಿಭಟನೆಗಳನ್ನು ಎದುರಿಸುತ್ತಿದ್ದು, ಇದೀಗ ಎಬಿವಿಪಿ ಕಾರ್ಯಕರ್ತರು ಗೃಹಸಚಿವ ಅರಗ ಜ್ಞಾನೇಂದ್ರ ಅವರ ಸರ್ಕಾರಿ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.