ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಕೇಂದ್ರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಆಪ್ತ ಸುಹೇಲ್ ದಿಲ್

ಬಿಜೆಪಿ, ಕಾಂಗ್ರೆಸ್ನ ಹಲವು ಶಾಸಕರು ಜೆಡಿಎಸ್ಗೆ ಸೇರಲಿದ್ದಾರೆ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಆಷಾಢ ಮಾಸ ಮುಗಿದ ಬಳಿಕ ಅನೇಕರು ಜೆಡಿಎಸ್ ಸೇರಲಿದ್ದಾರೆ. JDS ಸೇರುವ ಬಗ್ಗೆ ಕೆ.ಹೆಚ್.ಮುನಿಯಪ್ಪ ಅವರೇ ನಿರ್ಧರಿಸಬೇಕು.

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಕೇಂದ್ರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಆಪ್ತ ಸುಹೇಲ್ ದಿಲ್
ಸಿ.ಎಂ.ಇಬ್ರಾಹಿಂ
Follow us
TV9 Web
| Updated By: ಆಯೇಷಾ ಬಾನು

Updated on:Jul 13, 2022 | 3:54 PM

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ(KH Muniyappa) ಆಪ್ತ ಸುಹೇಲ್ ದಿಲ್ ನಮಾಜ್(Suhail Dil Nawaz), ಕಾಂಗ್ರೆಸ್(Congress) ತೊರೆದು ಜೆಡಿಎಸ್(JDS) ಸೇರಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂನ ಜೆಡಿಎಸ್ ಕಚೇರಿಯಲ್ಲಿ JDS ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ(CM Ibrahim) ನೇತೃತ್ವದಲ್ಲಿ ಸುಹೇಲ್ ದಿಲ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಆಷಾಢ ಮಾಸ ಮುಗಿದ ಬಳಿಕ ಅನೇಕರು ಜೆಡಿಎಸ್ ಸೇರಲಿದ್ದಾರೆ ಬಿಜೆಪಿ, ಕಾಂಗ್ರೆಸ್ನ ಹಲವು ಶಾಸಕರು ಜೆಡಿಎಸ್ಗೆ ಸೇರಲಿದ್ದಾರೆ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಆಷಾಢ ಮಾಸ ಮುಗಿದ ಬಳಿಕ ಅನೇಕರು ಜೆಡಿಎಸ್ ಸೇರಲಿದ್ದಾರೆ. JDS ಸೇರುವ ಬಗ್ಗೆ ಕೆ.ಹೆಚ್.ಮುನಿಯಪ್ಪ ಅವರೇ ನಿರ್ಧರಿಸಬೇಕು. ಈಗಾಗಲೇ ಕೆ.ಹೆಚ್.ಮುನಿಯಪ್ಪ ಆಪ್ತರು ಪಕ್ಷ ಸೇರಿದ್ದಾರೆ. ಕೆ.ಹೆಚ್.ಮುನಿಯಪ್ಪ ಒಳ್ಳೆಯ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ. ಕೋಲಾರ, ಚಿಕ್ಕಬಳ್ಳಾಪುರ ಭಾಗದ ಅನೇಕರು ಪಕ್ಷ ಸೇರ್ಪಡೆಯಾಗಲಿದ್ದಾರೆ. ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಕಾಂಗ್ರೆಸ್ ಮುಕ್ತ ಮಾಡಬೇಕು. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬಿಜೆಪಿ ಮುಕ್ತ ಮಾಡಲಿದ್ದೇವೆ ಎಂದರು.

ಇನ್ನು ಇದೇ ವೇಳೆ ಸಿದ್ದರಾಮೋತ್ಸವ ಕಾರ್ಯಕ್ರಮ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಸಿದ್ದರಾಮೋತ್ಸವ ಮಾಡ್ತಾರೆ, ಡಿಕೆ ಶಿವಕುಮಾರ್ ಉತ್ಸವ ಮಾಡ್ತಿದ್ದಾರೆ. ನಾವು ಜನರ ಉತ್ಸವ, ನೀರಾವರಿ ಉತ್ಸವ ಮಾಡ್ತಿದ್ದೇವೆ. ಕಾಂಗ್ರೆಸ್ ಗೆ ಅಧಿಕಾರದ ಚಿಂತೆ. ಜೆಡಿಎಸ್ ಗೆ ಜನರ ಬಗ್ಗೆ ಮಾತ್ರ ಚಿಂತೆ. ಪಂಡರಿಬಾಯಿ ತರಹ ಹಳೆ ಹಿರೋಯಿನ್ಗಳಿಗೆ ಅವಕಾಶ ಕೊಟ್ಟಿದ್ದು ಸಾಕು. ಕುಮಾರಸ್ವಾಮಿ ಹೊಸ ಹಿರೋಯಿನ್. ಕುಮಾರಸ್ವಾಮಿಗೆ ಒಂದು ಬಾರಿ ಅವಕಾಶ ಕೊಡಿ. 123 ಮಿಷನ್ ಗೆ ಸಹಕಾರ ಕೊಡಿ. ಕುಮಾರಸ್ವಾಮಿ 2023ಕ್ಕೆ ಸಿಎಂ ಆಗ್ತಾರೆ. ಕಾಂಗ್ರೆಸ್ ಮೂರನೇ ಸ್ಥಾನ, ಬಿಜೆಪಿ ಎರಡನೇ ಸ್ಥಾನ, ಜೆಡಿಎಸ್ ಮೊದಲ ಸ್ಥಾನಕ್ಕೆ ಬರಲಿದೆ ಎಂದು ಸಿಎಂ ಇಬ್ರಾಹಿಂ ಪ್ರತಿಕ್ರಿಯಿಸಿದ್ದಾರೆ.

Published On - 3:54 pm, Wed, 13 July 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು