ರವೀಂದ್ರ ಶ್ರೀಕಂಠಯ್ಯಗೆ ಟ್ರೀಟ್​ಮೆಂಟ್​ ಅಗತ್ಯವಿದೆ; ಸಂಸದೆ ಸುಮಲತಾ ವಾಗ್ದಾಳಿ

ಅಂಬರೀಶ್ ದಾರಿಯಲ್ಲಿ ನಾನು ರಾಜಕೀಯ ಮಾಡುತ್ತಿದ್ದೇನೆ. ಇವರು ಭ್ರಷ್ಟಾಚಾರಕ್ಕೆ ರಾಯಭಾರಿಗಳಾಗಿದ್ದಾರೆ. ಯಾವುದೇ ಸಭೆಗೆ ಇವರು ಬಂದಿರಲಿಲ್ಲ, ನಿನ್ನೆ ಸಭೆಗೆ ಬಂದಿದ್ದಾರೆ.

ರವೀಂದ್ರ ಶ್ರೀಕಂಠಯ್ಯಗೆ ಟ್ರೀಟ್​ಮೆಂಟ್​ ಅಗತ್ಯವಿದೆ; ಸಂಸದೆ ಸುಮಲತಾ ವಾಗ್ದಾಳಿ
ಸಂಸದೆ ಸುಮಲತಾ
Follow us
TV9 Web
| Updated By: sandhya thejappa

Updated on:Aug 19, 2021 | 11:55 AM

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಸುತ್ತ ಗೂಂಡಾಗಳು, ಫ್ರಾಡ್ಗಳಿದ್ದಾರೆ ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ (Ravindra Srikantaiah) ವಿರುದ್ಧ ಸುಮಲತಾ ವಾಗ್ದಾಳಿ ನಡೆಸಿದ್ದಾರೆ. ಅವರ ಮಾತು ಹೊಸದೇನಲ್ಲ. ಅಕ್ರಮ ಗಣಿಗಾರಿಕೆ ನಿಂತಾಗಿನಿಂದ ತೊಂದರೆಯಾಗುತ್ತಿದೆ. ಅಭಿವೃದ್ದಿ, ಕೊರೊನಾ ಬಗ್ಗೆ ಅವರಿಗೆ ಆಸಕ್ತಿ ಇಲ್ಲ. ಅವರಿಗೆ ಟ್ರೀಟ್​ಮೆಂಟ್ ಅವಶ್ಯಕತೆ ಇದೆ. ಟ್ರೀಟ್​ಮೆಂಟ್ ನಂತರ ಶಾಸಕರಾಗಿ ಮುಂದುವರೆಯಲಿ ಅಂತ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ. ಅಂಬರೀಶ್ ದಾರಿಯಲ್ಲಿ ನಾನು ರಾಜಕೀಯ ಮಾಡುತ್ತಿದ್ದೇನೆ. ಇವರು ಭ್ರಷ್ಟಾಚಾರಕ್ಕೆ ರಾಯಭಾರಿಗಳಾಗಿದ್ದಾರೆ. ಯಾವುದೇ ಸಭೆಗೆ ಇವರು ಬಂದಿರಲಿಲ್ಲ, ನಿನ್ನೆ ಸಭೆಗೆ ಬಂದಿದ್ದಾರೆ ಎಂದು ತಿಳಿಸಿದ ಸುಮಲತಾ, ಆಪ್ತ ಕಾರ್ಯದರ್ಶಿ ನಯವಂಚಕ್ಕೆ ಎಂಬ ಹೇಳಿಕೆ ವಿಚಾರಕ್ಕೂ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ರವೀಂದ್ರ ಶ್ರೀಕಂಠಯ್ಯ ಹೇಳಿದ ಮಾತ್ರಕ್ಕೆ ನಿಜ ಆಗಲ್ಲ. ಮಹಾತ್ಮ ಗಾಂಧಿಯಂತವರು ಹೇಳಿದ್ದರೆ ನಂಬಬಹುದು. ಇಂತವರ ಮಾತನ್ನ ಹೇಗೆ ಸೀರಿಯಸ್ ಆಗಿ ತೆಗೆದುಕೊಳ್ಳುವುದಕ್ಕೆ ಆಗುತ್ತೆ ಎಂದು ಹೇಳಿಕೆ ನೀಡಿದ್ದಾರೆ.

ಶ್ರೀರಂಗಪಟ್ಟಣಕ್ಕೆ ಹೋದರೆ ಎಲ್ಲಾ ಮನೆಯವರು ಇವರ ಬಗ್ಗೆ ಹೇಳುತ್ತಾರೆ. ಮೆಡಿಕಲ್ ಸೀಟ್ ಕೊಡಿಸುವುದಾಗಿ ಆಪ್ತ ಕಾರ್ಯದರ್ಶಿ ವಂಚನೆ ಮಾಡಿರುವ ಬಗ್ಗೆ ಆಧಾರವಿದ್ದರೆ ತೋರಿಸಲಿ. ಇಂತವರು ಒಬ್ಬರಲ್ಲ, ನೂರು ಜನ ಬಂದರೂ ಎದುರಿಸುತ್ತೇನೆ. ದೇವರು ನಮಗೆ ಎಲ್ಲವನ್ನೂ ಕೊಟ್ಟಿದ್ದಾನೆ. ಇದನ್ನ ನಂಬಿಕೊಂಡು ಜೀವನ ಮಾಡುತ್ತಿಲ್ಲ. ನಾವು ರಾಜಕೀಯವನ್ನ ಸೇವೆ ಎಂದು ಮಾಡುತ್ತಿದ್ದೇವೆ ಅಂತ ಸಂಸದೆ ಸುಮಲತಾ ತಿಳಿಸಿದರು.

ರವೀಂದ್ರ ಶ್ರೀಕಂಠಯ್ಯನವರ ಆರೋಪವೇನು? ಸಂಸದೆ ಸುಮಲತಾ ಸುತ್ತ ಗೂಂಡಾಗಳು, ಫ್ರಾಡ್ಗಳಿದ್ದಾರೆ. ಸುಮಲತಾ ಅಟೆಂಡರ್ ಒಬ್ಬ ಫ್ರಾಡ್, ನಯ ವಂಚಕ. ಮೆಡಿಕಲ್ ಸೀಟ್ ಕೊಡಿಸುವುದಾಗಿ ಜನರಿಗೆ ಪಂಗನಾಮ ಹಾಕಿದ್ದಾನೆ. ಸುಮಲತಾ ಸುತ್ತ ಇರುವವರಿಂದ ಅಧಿಕಾರಿಗಳಿಗೆ ಧಮ್ಕಿ, ಹಣಕ್ಕಾಗಿ ಪೀಡಿಸಿದ್ದಾರೆ. ಸುಮಲತಾಗೆ ಆಪ್ತ ಕಾರ್ಯದರ್ಶಿ ಎಂಬ ಹುದ್ದೆಯೆ ಇಲ್ಲ. ಶ್ರೀನಿವಾಸ್ ಭಟ್ ಎಂಬುವವನನ್ನ ಅನಧಿಕೃತವಾಗಿ ಪಿಎಸ್ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ಮಾನಸಿಕವಾಗಿ ಜರ್ಜರಿತವಾಗಿದ್ದಾರೆಂದು ತಿಳಿಸಿದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ, ಸುಮಲತಾ ಅಂಬರೀಶ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.

‘ಸುಮಲತಾ ಸುತ್ತ ಗೂಂಡಾಗಳು, ಫ್ರಾಡ್​ಗಳಿದ್ದಾರೆ’; ಸುಮಲತಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆಗ್ರಹ

ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣ; ಬಡವ, ಶ್ರೀಮಂತ ಕಾರಣ ಕೊಡುತ್ತಿರುವ ಆರೋಪಿಗಳು

(Sumalatha Ambareesh react to JDS  MLA Ravindra Srikantaiah accused)

Published On - 11:49 am, Thu, 19 August 21

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು