AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಶಿವ ಲಿಂಗವನ್ನು ಸ್ಪರ್ಶಿಸಿದ ಸೂರ್ಯ ರಶ್ಮಿ

Gavi Gangadhareshwara Temple: ಮಕರ ಸಂಕ್ರಾಂತಿಯಾದ ಇಂದು ಸಂಜೆ ಬೆಂಗಳೂರಿನ ಗವಿ ಗಂಗಾಧರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವಲಿಂಗದ ಮೇಲೆ ಸೂರ್ಯ ರಶ್ಮಿ ಹಾದು ಹೋಗುವ ಮೂಲಕ ಪ್ರಕೃತಿಯ ವಿಸ್ಮಯಕ್ಕೆ ಸಾಕ್ಷಿಯಾಯಿತು.

ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಶಿವ ಲಿಂಗವನ್ನು ಸ್ಪರ್ಶಿಸಿದ ಸೂರ್ಯ ರಶ್ಮಿ
ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಶಿವಲಿಂಗವನ್ನು ಸ್ಪರ್ಶಿಸಿದ ಸೂರ್ಯ ರಶ್ಮಿ
TV9 Web
| Updated By: ಸುಷ್ಮಾ ಚಕ್ರೆ|

Updated on:Jan 14, 2022 | 5:40 PM

Share

ಬೆಂಗಳೂರು: ಮಕರ ಸಂಕ್ರಮಣದ ದಿನವಾದ ಇಂದು ಬೆಂಗಳೂರಿನ ಬಸವನಗುಡಿಯಲ್ಲಿರುವ ಪ್ರಸಿದ್ಧ ದೇವಾಲಯವಾದ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ (Gavi Gangadhareshwara Temple) ದೇವರನ್ನು ಸೂರ್ಯರಶ್ಮಿ ಸ್ಪರ್ಶಿಸಿದೆ. ಇಂದು ಸಂಜೆ 5.17 ರಿಂದ 5.37ರ ನಡುವೆ ಸೂರ್ಯನ ಕಿರಣಗಳು ಗವಿ ಗಂಗಾಧರ ಸ್ವಾಮಿಯನ್ನು ಸ್ಪರ್ಶಿಸಿದೆ. ಪ್ರತಿ ವರ್ಷ ಸಂಕ್ರಾಂತಿಯಂದು (Makar Sankranti) ನಡೆಯುವ ಪ್ರಕೃತಿಯ ಈ ವಿಸ್ಮಯದ ವೀಕ್ಷಣೆಗೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅವಕಾಶವಿರಲಿಲ್ಲ. ಮೊದಲು ನಂದಿಯನ್ನು ಹಾದು ಹೋದ ಸೂರ್ಯನ ಕಿರಣಗಳು ನಂತರ ಪಾಣಿ ಪೀಠದ ಮೂಲಕ ಶಿವಲಿಂಗದ ಮೇಲೆ ಪ್ರಕಾಶಮಾನವಾಗಿ ಬೆಳಗಿತು. 

ಕೊವಿಡ್ ಹಿನ್ನೆಲೆಯಲ್ಲಿ ಗವಿ ಗಂಗಾಧರೇಶ್ವರ ದೇವರ ದರ್ಶನಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಭಕ್ತರು ಮನೆಯಲ್ಲೇ ಕುಳಿತು ಟಿವಿಯಲ್ಲಿ ಪ್ರಕೃತಿ ವಿಸ್ಮಯವನ್ನು ಕಣ್ತುಂಬಿಕೊಂಡರು. ಸೂರ್ಯ ರಶ್ಮಿ ಗವಿಗಂಗಾಧರನ ಸ್ಪರ್ಶಿಸುವ ಕ್ಷಣಕ್ಕೆ ಕೆಲವೇ ಜನರು ದೇವಸ್ಥಾನದಲ್ಲಿ ಸಾಕ್ಷಿಯಾದರು.

ಈ ಮಹಾ ಕೌತುಕದ ಬಗ್ಗೆ ಗವಿಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ವಿವರಣೆ ನೀಡಿದ್ದು, ದಕ್ಷಿಣಾಯನ ಮುಗಿಸಿ‌ ಉತ್ತರಾಯಣದತ್ತ ಸೂರ್ಯ ಹಾದುಹೋಗಿದ್ದಾನೆ. ಕಳೆದ ಬಾರಿ ಮೋಡದ ಮರೆಯಲ್ಲಿ ಸೂರ್ಯ ಹಾದುಹೋಗಿದ್ದ. ಈ ಬಾರಿ ಸೂರ್ಯ ರಶ್ಮಿ ಚೆನ್ನಾಗಿ ಗೋಚರಿಸಿದೆ. ಕೊರೋನಾ ಮಹಾಮಾರಿಯಿಂದ ಈ ವರ್ಷವೂ ಸಾರ್ವಜನಿಕರಿಗೆ ಅವಕಾಶವಿಲ್ಲ. ಸೂರ್ಯನ ಕಿರಣಗಳ ಸ್ಪರ್ಶದ ನಂತರ ಶಿವಲಿಂಗಕ್ಕೆ ಹಾಲಿನ ಅಭಿಷೇಕ ಮಾಡಲಾಯಿತು ಎಂದಿದ್ದಾರೆ.

ಇಂದು ಸಂಜೆ 5.17 ನಿಮಿಷದಿಂದ 5.37 ಅವಧಿಯಲ್ಲಿ ಸೂರ್ಯನ ರಶ್ಮಿ ಗವಿ ಗಂಗಾಧರೇಶ್ವರನನ್ನು ಸ್ಪರ್ಶಿಸಿದೆ. ಕೋವಿಡ್ ಹಿನ್ನೆಲೆ ಶ್ರೀ ಗವಿಗಂಗಾಧರನ ವಿಸ್ಮಯ ಕಣ್ತುಂಬಿಕೊಳ್ಳಲು ಭಕ್ತಾದಿಗಳಿಗೆ ಪ್ರವೇಶ ನಿಷೇಧಿಸಲಾಗಿತ್ತು. ಹೀಗಾಗಿ, ಭಕ್ತರು ಇಂದು ಬೆಳಗ್ಗೆಯೇ ಬಂದು ದೇವರ ದರ್ಶನ ಪಡೆದರು. ಇಂದು ನಸುಕಿನ ಜಾವ 5 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಮಾತ್ರ ಭಕ್ತಾದಿಗಳಿಗೆ ದೇಗುಲಕ್ಕೆ ಪ್ರವೇಶಕ್ಕೆ ಅನುಮತಿ ಇತ್ತು. ಬೆಳಗ್ಗೆಯೇ ದೇವರಿಗೆ ವಿಶೇಷ ಪೂಜೆ, ಅಭಿಷೇಕ ನಡೆಸಲಾಯಿತು.

ಬೆಂಗಳೂರು ನಗರದ ಗವಿಪುರಂನಲ್ಲಿರುವ ಐತಿಹಾಸಿಕ ದೇವಾಲಯವಾದ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿನ ಶಿವಲಿಂಗದ ಮೇಲೆ ಸೂರ್ಯ ರಶ್ಮಿಯ ದರ್ಶನವಾಗಿದೆ. ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸಿದ ಸೂರ್ಯ ಗವಿಗಂಗಾಧರೇಶ್ವರನಿಗೆ ನಮಿಸಿದ್ದಾನೆ. ಲಿಂಗದ ಮುಂದಿರುವ ನಂದಿಕೊಂಬಿನಿಂದ ಹಾದು ಶಿವನ ಸ್ಪರ್ಶ ಮಾಡಿದೆ. ಸೂರ್ಯರಶ್ಮಿ ಸ್ಪರ್ಶದ ಹಿನ್ನೆಲೆ ಶಿವನಿಗೆ ವಿಶೇಷ ಅಭಿಷೇಕ ಮಾಡಲಾಯಿತು.

ಈ ವರ್ಷ ಜನವರಿ 15ರಂದು ಮಕರ ಸಂಕ್ರಾಂತಿ ಹಬ್ಬ ಆಚರಿಸಲಾಗುತ್ತಿದೆ. ಆದರೆ, ಪಂಚಾಂಗದ ಪ್ರಕಾರ ಒಂದು ದಿನ ಮೊದಲು ಅಂದರೆ ಇಂದು ಸಂಜೆ ಸೂರ್ಯ ರಶ್ಮಿ ಗವಿಗಂಗಾಧರೇಶ್ವರ ಸ್ವಾಮಿಯನ್ನು ಸ್ಪರ್ಶಿಸಿದೆ. ದಕ್ಷಿಣ ಪಥದಿಂದ ಉತ್ತರ ಪಥಕ್ಕೆ ಸಾಗುವ ಸೂರ್ಯ ದೇವ ಶಿವದರ್ಶನ ಪಡೆಯುವ ಸಮಯವಿದು. ಈ ವೇಳೆ ಶಿವನ ವಿಗ್ರಹಕ್ಕೆ ಎಳನೀರು ಮತ್ತು ಕ್ಷೀರದಿಂದ ಅಭಿಷೇಕ ಮಾಡಲಾಗುತ್ತದೆ.

ಇದನ್ನೂ ಓದಿ: ಈ ಬಾರಿಯಾದರೂ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಭಾಸ್ಕರನ ಕಿರಣಗಳು ಶಿವಲಿಂಗವನ್ನು ಸ್ಪರ್ಶಿಸಲಿದೆಯೇ?

ಉಪೇಂದ್ರ ಮನೆಯಲ್ಲಿ ಸಂಕ್ರಾಂತಿ ಸಡಗರ; ಇಲ್ಲಿದೆ ಕಲರ್​ಫುಲ್​ ಫೋಟೋ ಆಲ್ಬಂ

Published On - 5:34 pm, Fri, 14 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ