ಬೆಂಗಳೂರು: ಶಿವಾಜಿನಗರದ ರಸೆಲ್​ ಮಾರ್ಕೆಟ್ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ

Bengaluru Traffic Advisory: ಬೆಂಗಳೂರಿನ ಶಿವಾಜಿನಗರ ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ (ಸೆ.08) ರಂದು ಆರೋಗ್ಯ ಮಾತೆಯ ರಥೋತ್ಸವ ಕಾರ್ಯಕ್ರಮವಿದೆ. ಹೀಗಾಗಿ ರವಿವಾರ ಮಧ್ಯಾಹ್ನ 12.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್​ ಮಾಡಲಾಗಿದೆ.

ಬೆಂಗಳೂರು: ಶಿವಾಜಿನಗರದ ರಸೆಲ್​ ಮಾರ್ಕೆಟ್ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Sep 07, 2024 | 7:31 AM

ಬೆಂಗಳೂರು, ಆಗಸ್ಟ್​ 28: ಬೆಂಗಳೂರಿನ (Bengaluru) ಶಿವಾಜಿನಗರದ ರಸೆಲ್​ ಮಾರ್ಕೆಟ್​ ರಸ್ತೆ ಸೇರಿಂದತೆ ಇನ್ನೀತರೆ ರಸ್ತೆಗಳಲ್ಲಿ ರವಿವಾರ (ಸೆ.08) ರಂದು ವಾಹನ ಸಂಚಾರ ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಸೂಚನೆ ಹೊರಡಿಸಿದ್ದಾರೆ. ಹಾಗಿದ್ದರೆ ಯಾವ್ಯಾವ ರಸ್ತೆಯಲ್ಲಿ, ಯಾವ್ಯಾವ ದಿನಾಂಕದಂದು ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದೆ? ಇಲ್ಲಿದೆ ಮಾಹಿತಿ.

ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ (ಸೆ.08) ರಂದು ಆರೋಗ್ಯ ಮಾತೆಯ ರಥೋತ್ಸವ ಕಾರ್ಯಕ್ರಮವಿದೆ. ಹೀಗಾಗಿ ರವಿವಾರ ಮಧ್ಯಾಹ್ನ 12.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್​ ಮಾಡಲಾಗಿದೆ.

ಸಂಚಾರ ನಿರ್ಬಂಧಿಸಿರುವ ರಸ್ತೆಗಳು:

  • ಜ್ಯೋತಿಕೆಫೆ ವೃತ್ತದಿಂದ ರಸಲ್ ಮಾರ್ಕೆಟ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
  • ಬ್ರಾಡ್ ವೇ ರಸ್ತೆಯಲ್ಲಿ ರಸಲ್ ಮಾರ್ಕೆಟ್ ಕಡೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರ ಬಂದ್​ ಆಗಲಿದೆ.
  • ಧರ್ಮರಾಜ ಕೋಯಿಲ್ ಸ್ಟ್ರೀಟ್ – ಓ.ಪಿ.ಹೆಚ್.ರಸ್ತೆ ವರೆಗೆ ರಸಲ್ ಮಾರ್ಕೆಟ್ ಕಡೆಗೆ ಬರುವ ವಾಹನ ಸಂಚಾರವನ್ನು ತಾಜ್ ವೃತ್ತದಲ್ಲಿ ನಿರ್ಬಂಧಿಸಲಾಗುತ್ತದೆ.
  • ಬಿ.ಆರ್.ವಿ ಜಂಕ್ಷನ್ ನಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಸೇರಿದಂತೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
  • ಬಾಳೇ ಕುಂಡಿ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಸೇರಿದಂತೆ ಎಲ್ಲಾ ಮಾದರಿಯ ವಾಹನಗಳನ್ನು ನಿರ್ಬಂಧಿಸಲಾಗುತ್ತದೆ.

ಪರ್ಯಾಯ ಮಾರ್ಗಗಳು:

  • ಅನಿಲ್ ಕುಂಬ್ಳೆ ಜಂಕ್ಷನ್ ಕಡೆಯಿಂದ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಬಿ.ಆರ್.ವಿ ಜಂಕ್ಷನ್‌ನಲ್ಲಿ ಎಡತಿರುವು ಪಡೆದು- ಸಿ.ಟಿ.ಓ- ಕ್ಲೀನ್ ಸರ್ಕಲ್- ಎಂ.ಜಿ ರಸ್ತೆ ಮೂಲಕ ಸಂಚರಿಸಬಹು.
  • ದ್ವಿ ಚಕ್ರ ಹಾಗೂ ಲಘು ಮೋಟಾರ್ ವಾಹನಗಳು ಬಿ.ಆರ್.ವಿ ಸೆಂಟ್ರಲ್ ಸ್ಟ್ರೀಟ್ – ಬಲ ತಿರುವು ಸಫೀನಾ ಪ್ಲಾಸಿ ಕಮರ್ಷಿಯಲ್ ಸ್ಟ್ರೀಟ್-ಕಾಮರಾಜ ರಸ್ತೆ ಮೂಲಕ ಸಂಚರಿಸಬಹುದು.
  • ದ್ವಿ ಚಕ್ರ ಹಾಗೂ ಲಘು ಮೋಟಾರ್ ವಾಹನಗಳು ಬಿ.ಆರ್.ವಿ-ಸೆಂಟ್ರಲ್ ಸ್ಪೀಟ್ – ಸೆಲೆಕ್ಟ್ ಜಂಕ್ಷನ್ ಎಡ ತಿರುವು ಪಡೆದು ರಮಡಾ ಹೋಟೆಲ್-ವಿ.ಎಸ್.ಎನ್ ರಸ್ತೆ ಮೂಲಕ ಸಂಚರಿಸಬಹುದು.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 30 ದಿನ ಸಂಚಾರ ಬಂದ್​, ಮಾರ್ಗ ಬದಲಾವಣೆ ಇಲ್ಲಿದೆ

ವಾಹನಗಳ ನಿಲುಗಡೆ ನಿಷೇಧ

ರಸಲ್ ಮಾರ್ಕೆಟ್ ಸುತ್ತ-ಮುತ್ತ – ಬ್ರಾಡ್ ವೇರಸ್ತೆ – ಮೀನಾಕ್ಷಿಕೋಯಿಲ್ ಸ್ಟ್ರೀಟ್ – ಸೆಂಟ್ರಲ್ ಸ್ಟ್ರೀಟ್ – ಶಿವಾಜಿ ರಸ್ತೆ ಬಾಳೇ ಕುಂದ್ರಿ ವೃತ್ತದಿಂದ ಚಂದ್ರಿಕಾ ಹೋಟೆಲ್ ವರೆಗೂ (ಕನ್ನಿಂಗ್ ಹ್ಯಾಮ್ ರಸ್ತೆ) – ಯೂನಿಯನ್ ಸ್ಟ್ರೀಟ್ ಇನ್ ಫೆಂಟ್ರಿರಸ್ತೆ – ಕಬ್ಬನ್‌ರಸ್ತೆ ಲೇಡಿಕರ್ಜನ್‌ ರಸ್ತೆ ವಿ.ಎಸ್.ಎನ್‌ರಸ್ತೆ ಪ್ಲೇನ್ ಸ್ಪೀಟ್ – ಎಂ.ಜರಸ್ತೆ.

ವಾಹನ ನಿಲುಗಡೆ ಸ್ಥಳಗಳು

ಕಾಮರಾಜರಸ್ತೆ ಪಾರ್ಕಿಂಗ್ ಸ್ಥಳದಲ್ಲಿ (ಸರ್ವೀಸ್ ರಸ್ತೆ ಆರ್ಮಿ ಸ್ಕೂಲ್ ಮುಂಭಾಗ) ಸಫೀನಾ ಪ್ರಾಜಾ ಮುಂಭಾಗ (ಮೈನ್ ಗಾರ್ಡನ್ ರಸ್ತೆ) ಜೆಸ್ಮಾ ಭವನ ರಸ್ತೆ – ಆರ್.ಬಿ.ಎ.ಎನ್.ಎಮ್.ಎಸ್ ಮೈದಾನ (ಗಂಗಾಧರ ಚೆಟ್ಟಿ ರಸ್ತೆ ) ಮುಸ್ಲಿಂ ಆರ್‌ಫೆನೇಜ್ ಡಿಕನ್ಸನ್ ರಸ್ತೆ (ಹಸನತ್ ಕಾಲೇಜ್ ಹತ್ತಿರ), ರಮಡಾ ಹೊಟೇಲ್ (ಓಲ್ಡ್ ಕಾಂಗ್ರೇಸ್ ಕಛೇರಿ) ಪ್ಲೇನ್ ಸ್ಟ್ರೀಟ್.

Published On - 7:30 am, Sat, 7 September 24

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ