ಬೆಂಗಳೂರಿನ ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸದ ಸೂರ್ಯ ರಶ್ಮಿ, ಈ ಬಾರಿ ಕಾದಿದ್ಯಾ ಗಂಡಾಂತರ?

ದೇಶಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಜೋರಾಗಿದೆ. ದೇವಾಲಯ, ಗುಡಿ, ಗೋಪುರದಲ್ಲಿ ದೇವರಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನ ಗವಿಪುರದಲ್ಲಿರುವ ಗವಿಗಂಗಾಧರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ಹಾಗೇ ಪ್ರತಿ ಸಂಕ್ರಮಣದಂದು ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸದ ಸೂರ್ಯ ರಶ್ಮಿಯಾಗುತ್ತೆ. ಆದ್ರೆ, ಈ ಬಾರಿ ಸೂರ್ಯ ರಶ್ಮಿ ಸ್ಪರ್ಶಿವಾಗಿಲ್ಲ. ಇದರಿಂದ ಭಕ್ತರಿಗೆ ನಿರಾಸೆಯಾಗಿದೆ. ಹಾಗಾದ್ರೆ, ಸೂರ್ಯ ರಶ್ಮಿ ಸ್ಪರ್ಶಿಸದಕ್ಕೆ ಕಾರಣವೇನು? ಈ ಬಾರಿ ಕಾದಿದ್ಯಾ ಗಂಡಾಂತರ?

ಬೆಂಗಳೂರಿನ ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸದ ಸೂರ್ಯ ರಶ್ಮಿ, ಈ ಬಾರಿ ಕಾದಿದ್ಯಾ ಗಂಡಾಂತರ?
Gavi Gangadhareshwara
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 14, 2025 | 7:05 PM

ಬೆಂಗಳೂರು, (ಜನವರಿ 14): ಪ್ರತಿ ಮಕರ ಸಂಕ್ರಾಂತಿ ದಿನದಲ್ಲಿ ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಚಮತ್ಕಾರ ನಡೆಯುತ್ತದೆ. ಸಂಕ್ರಮಣ ದಿನ ಗವಿ ಗಂಗಾಧರೇಶ್ವರನನ್ನು ಸೂರ್ಯದೇವ ನಮಿಸುತ್ತಿದ್ದ. ಆದರೆ ಈ ಬಾರಿ ಗವಿಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶಿಸಿಲ್ಲ. ದೇಗುಲ ಬಲಭಾಗದ ಕಮಾನಿನಿಂದ ಕಿಟಕಿ ಮೂಲಕ ಸೂರ್ಯ ರಶ್ಮಿ ಪ್ರವೇಶ ಮಾಡಬೇಕಿತ್ತು. ಮೋಡ ಕವಿದ ವಾತಾವರಣ ಇದ್ದುದರಿಂದ ಗಂಗಾಧರೇಶ್ವರನ ಮೇಲೆ ಸೂರ್ಯರಶ್ಮಿ‌ ಸ್ಪರ್ಶ ಆಗಲಿಲ್ಲ. ಇದರಿಂದ ಕಾತರದಿಂದ ಕಾಯುತ್ತಿದ್ದ ಭಕ್ತರಿಗೆ ನಿರಾಸೆ ಉಂಟುಮಾಡಿದೆ. ಈ ವರ್ಷ ಸೇರಿ ಇತಿಹಾಸದಲ್ಲೇ 3ನೇ ಬಾರಿಗೆ ಗವಿ ಗಂಗಾಧರೇಶ್ವರನ ಮೇಲೆ ಸೂರ್ಯ ರಶ್ಮಿ ಸ್ಪರ್ಶ ಬೀಳದಂತೆ ಆಗಿದೆ.

ಕಾತರದಿಂದ ಕಾಯುತ್ತಿದ್ದ ಭಕ್ತರಿಗೆ ನಿರಾಸೆ

ಒಂದು ವೇಳೆ ಗಂಗಾಧರೇಶ್ವರನ ಮೇಲೆ ಸೂರ್ಯ ರಶ್ಮಿ ಸ್ಪರ್ಶಯಾಗಿದ್ದರೇ, ಗವಿಗಂಗಾಧರನಿಗೆ ನಮಿಸಿ ಪಥವನ್ನು ಸೂರ್ಯದೇವ ಬದಲಿಸುತ್ತಿದ್ದ. ಇದಾದ ಬಳಿಕ ಸೂರ್ಯ ದಕ್ಷಿಣ ಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವಾಗ ಸೂರ್ಯ ಕಿರಣಗಳು ದೇವಾಲಯದಲ್ಲಿನ ಶಿವ ಲಿಂಗವನ್ನು ಸ್ಪರ್ಶಿಸುತ್ತಿದ್ದ. ಹೀಗಾಗಿಯೇ ಇಂದು ಗವಿಗಂಗಾಧರ ದೇವಸ್ಥಾನದ ಶಿವಲಿಂಗಕ್ಕೆ ವಿಶೇಷ ಪೂಜೆಗಳನ್ನು ನೆರವೇರಿಸಲಾಗುತ್ತಿತ್ತು. ಇಂದು ಬೆಳ್ಳಗ್ಗೆ 5 ಗಂಟೆಗೆ ಪೂಜೆ ಆರಂಭವಾಗಿದ್ದು ಪುಷ್ಪಾಭಿಷೇಕ, ಮಹಮಂಗಳಾರತಿ‌, ಪಂಚಾಭೀಷೇಕ ಮಾಡಿದ ಬಳಿಕ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಸೂರ್ಯರಶ್ಮಿ‌ ಸ್ಪರ್ಶವಾಗುವುದನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿದ್ದ ಭಕ್ತರಿಗೆ ನಿರಾಸೆಯಾಗಿದೆ.

ಇದನ್ನೂ ಓದಿ: ಗವಿಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶಿಸದಕ್ಕೆ ಗಂಡಾಂತರ ಇದ್ಯಾ? ಅರ್ಚಕರು ಹೇಳಿದ್ದೇನು?

ಸೂರ್ಯ ರಶ್ಮಿ ಸ್ಪರ್ಶಿಸುವುದನ್ನು ಕಣ್ತುಂಬಿಕೊಳ್ಳಲು ಗವಿಗಂಗಾಧರ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಹೀಗಾಗಿ ಭಕ್ತರಿಗಾಗಿ LED ಸ್ಕ್ರೀನ್ ಕೂಡ ಹಾಕಲಾಗಿತ್ತು. ಸೂರ್ಯರಶ್ಮಿ‌ ಸ್ಪರ್ಶವಾಗುವುದನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಭಕ್ತರು ಕಾಯುತ್ತಿದ್ದರು.

ಈ ಬಾರಿ ಕಾದಿದ್ಯಾ ಗಂಡಾಂತರ?

ಗವಿಗಂಗಾಧರ ದೇವಸ್ಥಾನಕ್ಕೆ ಬಾರದೇ ಲಿಂಗಕ್ಕೆ ಸೂರ್ಯ ಕಿರಣ ಸ್ಪರ್ಶಿಸಲಿಲ್ಲ. ಪ್ರತೀ ವರ್ಷ ಸೂರ್ಯ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಪಥ ಬದಲಿಸುವ ಸಂದರ್ಭದಲ್ಲಿ ಶಿವಲಿಂಗಕ್ಕೆ ಸೂರ್ಯನ ಕಿರಣ ಸ್ಪರ್ಶವಾಗ್ತಿತ್ತು. ಸೂರ್ಯನ ಕಿರಣ ಎಷ್ಟು ಹೊತ್ತು ಇರುತ್ತೆ ಎನ್ನುವ ಆಧಾರದಲ್ಲಿ ಅರ್ಚಕರು ಭವಿಷ್ಯ ಹೇಳುತ್ತಿದ್ದರು. ಕೋವಿಡ್ ಮೊದಲು ಅತ್ಯಲ್ಪ ಅವಧಿಯಲ್ಲಿ ಸೂರ್ಯನ ಕಿರಣ ಸ್ಪರ್ಶವಾಗಿತ್ತು. ಇದರಿಂದ ದೀಕ್ಷಿತರು, ಅಪಾರ ಸಾವು ನೋವಿನ ಎಚ್ಚರಿಕೆ ನೀಡಿದ್ದರು. ಭವಿಷ್ಯದಂತೆ ಕೊರೋನಾ ಮಹಾಮಾರಿ ಅಪ್ಪಳಿಸಿ ಅಪಾರ ಸಾವು ನೋವುಗಳು ಸಂಭವಿಸಿದ್ದವು. ಈ ಬಾರಿಯೂ ಸಹ ಸೂರ್ಯರಶ್ಮಿ ಸ್ಪರ್ಶಿಸದ ಹಿನ್ನೆಲೆಯಲ್ಲಿ ಮುಂದೆ ಗಂಡಾಂತರ ಕಾದಿದ್ಯಾ ಎನ್ನುವ ಆತಂಕ ಶುರುವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:51 pm, Tue, 14 January 25

ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್